“ತಂದೆತಾಯಿಗೆ ರಕ್ಷಣೆ ನೀಡಿದರೆ SIT ಮುಂದೆ ಬರುತ್ತೇನೆ!” ಸಿಡಿ ಲೇಡಿಯ ಮತ್ತೊಂದು ವಿಡಿಯೋ
Team Udayavani, Mar 25, 2021, 12:09 PM IST
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿ ಇದ್ದಳೆನ್ನಲಾದ ಯುವತಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ತನ್ನ ಮನೆಯವರಿಗೆ ರಕ್ಷಣೆ ಕೊಟ್ಟರೆ ಮಾತ್ರ ತಾನು ಎಸ್ ಐಟಿ ವಿರುದ್ಧ ಹಾಜಾರಾಗುತ್ತೇನೆ ಎಂದು ಹೇಳಿದ್ದಾಳೆ.
ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿರುವ ಯುವತಿ, ನನ್ನ ಅಪ್ಪ ಅಮ್ಮ ಸ್ವ ಇಚ್ಛೆಯಿಂದ ದೂರು ನೀಡಿಲ್ಲ ಎಂದು ನನಗೆ ಗೊತ್ತು. ಮಗಳು ಯಾವುದೇ ತಪ್ಪು ಮಾಡಿಲ್ಲ ಎಂದಾದಾಗ ಹೆದರುವ ಯಾವುದೇ ಅವಶ್ಯಕತೆಯಿಲ್ಲ. ನನಗೆ ನನ್ನ ಅಪ್ಪ ಅಮ್ಮನ ಸುರಕ್ಷತೆ ನನಗೆ ಮುಖ್ಯ. ಅವರು ಸುರಕ್ಷತೆಯಿಂದ ಇದ್ದಾರೆ ಎಂದು ನನಗೆ ಗೊತ್ತಾಗುತ್ತೋ ಆಗಲೇ ನಾನು ಎಸ್ ಐಟಿಯವರ ಮುಂದೆ ಬಂದು ಹೇಳಿಕೆ ನೀಡುತ್ತೇನೆ ಎಂದು ವಿಡಿಯೋ ದಲ್ಲಿ ಹೇಳಿದ್ದಾಳೆ.
ಇದನ್ನೂ ಓದಿ:ನಮ್ಮನ್ನು ನಾವು ರಕ್ಷಿಸಿಕೊಳ್ಳಲು ನಮ್ಮ ಕುಟುಂಬಗಳನ್ನು ಅಡ್ಡತರುವುದು ವಂಚನೆ: ಸಾ.ರಾ.ಮಹೇಶ್
ನನ್ನ ಅಪ್ಪ ಅಮ್ಮನಿಗೆ ರಕ್ಷಣೆ ಕೊಡಿ ಎಂದು ನನಗೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಿಗೆ, ಮಹಿಳಾ ಸಂಘಟನೆಯವರಿಗೆ ಕೇಳಿಕೊಳ್ಳುತ್ತೇನೆ. ನನಗೆ ನ್ಯಾಯ ಸಿಗುವ ಬಗ್ಗೆ ಎರಡು ದಿನದಿಂದ ಭರವಸೆಯಿದೆ ಎಂದಿದ್ದಾಳೆ.
ಮಾ.12ರಂದು ಒಂದು ವಿಡಿಯೋ ಮಾಡಿ ಪೊಲೀಸ್ ಆಯುಕ್ತರಿಗೆ ವಿಡಿಯೋ ಕಳಿಸಿದ್ದೆ. ಎಸ್ ಐಟಿಯವರಿಗೆ ಕಳುಹಿಸಿದ್ದೆ. ಮಾರ್ಚ್ 13 ರಂದು ರಮೇಶ್ ಜಾರಕಿಹೊಳಿ ದೂರು ನೀಡಿದ ಬಳಿಕ ಅರ್ಧ ಗಂಟೆಯಲ್ಲಿ ವಿಡಿಯೋ ರಿಲೀಸ್ ಮಾಡಲಾಗಿದೆ. ಹೀಗಾಗಿ ನನಗೆ ಎಸ್ ಐಟಿ ಯಾರ ಪರವಾಗಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಯಾರನ್ನು ಸೇಫ್ ಮಾಡುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.
ಇದನ್ನೂ ಓದಿ: ಪುತ್ತೂರು: ಪೊಲೀಸ್ ಠಾಣೆಯ 50 ಮೀ. ದೂರದಲ್ಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಕಳ್ಳರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.