ಜನರನ್ನು ಭೀತಿಗೊಳಿಸಬೇಡಿ, ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ಮಾಡಿ:CMಗೆ ಸಿದ್ದರಾಮಯ್ಯ ಪತ್ರ
ಕೊರೊನಾ ಎರಡನೇ ಅಲೆ : ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ
Team Udayavani, Mar 25, 2021, 3:57 PM IST
ಬೆಂಗಳೂರು : ಕೋವಿಡ್‍ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚು ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕಡ್ಡಾಯವಾಗಿ ಮಾಸ್ಕ್ ಧರಿಸುವ, ಸ್ಯಾನಿಟೈಸರ್ ಬಳಸುವ, ಸಣ್ಣ ರೋಗ ಲಕ್ಷಣಗಳು ಕಂಡು ಬಂದರೂ ಜನರೊಂದಿಗೆ ಬೆರೆಯದೆ ಪ್ರತ್ಯೇಕವಾಗಿ ಉಳಿಯುವ, ಪರೀಕ್ಷೆ ಮಾಡಿಸಿಕೊಳ್ಳುವ ಮುಂತಾದವುಗಳನ್ನು ಸ್ವಯಂಪ್ರೇರಿತವಾಗಿ ಮುಂಜಾಗೃತೆಯ ಕ್ರಮಗಳನ್ನು ಕೈಗೊಳ್ಳಲು ಉತ್ತೇಜಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಸೋಂಕು ತಡೆಗೆ ಬೆಂಗಳೂರಿನಲ್ಲಿ ಹೊಸ ನಿಯಮಗಳು: ನೆಗೆಟಿವ್ ವರದಿ ಕಡ್ಡಾಯ, ಕೈಗೆ ಸೀಲ್
ಸರ್ಕಾರ ಕೋವಿಡ್ ಸಾವುಗಳ ವಿಚಾರದಲ್ಲೂ ಕೂಡ ಸುಳ್ಳು ಹೇಳುತ್ತಿದೆ. ಇದುವರೆಗೂ ರಾಜ್ಯದಲ್ಲಿ 12,449 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರದ ಸಾಂಖ್ಯಿಕ ಇಲಾಖೆಯು ಸಂಗ್ರಹಿಸುವ ಜನನ, ಮರಣಗಳ ಅಂಕಿ ಅಂಶಗಳ ಪ್ರಕಾರ ಸಾವುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರ ಕೊರೋನಾ ವಾರಿಯರ್ ಗಳು ಎಂದು ಬರಿ ಬಾಯಿ ಮಾತಿಗೆ ಹೇಳಿತೆ ಹೊರತು ಕೊರೋನಾದಿಂದ ಮೃತಪಟ್ಟ ಅನೇಕರ ಕುಟುಂಬಗಳಿಗೆ ಇನ್ನೂ ಪರಿಹಾರವನ್ನೇ ನೀಡಿಲ್ಲ. ಕುಶಲ ಕರ್ಮಿಗಳು ಹಾಗೂ ದುಡಿಯುವ ಕೆಲವೇ ಸಮುದಾಯಗಳಿಗೆ ಘೋಷಿಸಿದ್ದ ಪರಿಹಾರವನ್ನು ಕೂಡ ಸಮರ್ಪಕವಾಗಿ ವಿತರಿಸಲಿಲ್ಲ. ಈಗಲೂ ಈ ಸಮುದಾಯಗಳ ವೃತ್ತಿನಿರತರ ಬದುಕು ಸುಧಾರಣೆಯಾಗಿಲ್ಲ. ಹಾಗಾಗಿ ಅವರೆಲ್ಲರಿಗೂ ಪರಿಹಾರವನ್ನು ನೀಡಬೇಕು. ನಾನು ಪದೇ ಪದೇ ಪ್ರಸ್ತಾಪಿಸುತ್ತಿದ್ದೇನೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ದೇಶದ ಆರ್ಥಿಕತೆ ಆರೋಗ್ಯಕರವಾಗಿರುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: ಮಾಸ್ಕ್ ಧರಿಸದೆ ಓಡಾಡುವವರಿಗೆ ಮಾಸ್ಕ್ ವಿತರಿಸಿದ ಉಡುಪಿ ಪೊಲೀಸರು
ಸರ್ಕಾರ ಹೆಚ್ಚು ಪರೀಕ್ಷೆಗಳನ್ನು ಮಾಡುವ ಮೂಲಕ ಹಾಗೂ ಸುರಕ್ಷತಾ ಲಸಿಕೆಗಳನ್ನು ನೀಡುವ ಮೂಲಕ, ವಯಸ್ಸಾದ ಹಿರಿಯರನ್ನು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರ ಆರೋಗ್ಯವನ್ನು ವಿಶೇಷವಾಗಿ ಪರಿಗಣಿಸಿ ಎಚ್ಚರಿಕೆಯನ್ನು ವಹಿಸಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಜನರ ಆರೋಗ್ಯವನ್ನು ರಕ್ಷಿಸುವ ಜೊತೆಯಲ್ಲಿಯೇ ಅವರ ಆರ್ಥಿಕ ಆರೋಗ್ಯವನ್ನು ಕೂಡ ರಕ್ಷಿಸಬೇಕಾಗಿದೆ. ಇಲ್ಲದಿದ್ದರೆ ಇಡೀ ದೇಶದ ಆರ್ಥಿಕ ಚೈತನ್ಯಕ್ಕೆ ಲಕ್ವಾ ಹೊಡೆದಂತಾಗುತ್ತದೆ. ಈಗಾಗಲೇ ನಮ್ಮ ಆರ್ಥಿಕತೆ ಐ.ಸಿ.ಯು.ಗೆ ಹೋದ ರೋಗಗ್ರಸ್ಥನಂತಾಗಿದೆ. ಸರ್ಕಾರ ತಜ್ಞರ, ಮುತ್ಸದ್ದಿಗಳೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.