ಗುರಿ ಸಾಧಿಸುವವರೆಗೂ ವಿರಮಿಸದಿರಿ

ಮಹತ್ವಾಕಾಂಕ್ಷಿ ಕನಸು ಕಂಡು ನನಸಾಗಿಸಲು ಕಠಿಣ ಶ್ರಮ ಅಗತ್ಯ: ಡಿಸಿ ಬೀಳಗಿ

Team Udayavani, Mar 25, 2021, 6:25 PM IST

25-9

ದಾವಣಗೆರೆ: ಪ್ರತಿಯೊಬ್ಬ ವಿದ್ಯಾರ್ಥಿ ಮಹತ್ವಾಕಾಂಕ್ಷೆಯ ಕನಸು ಕಾಣಬೇಕು. ಮಹತ್ವಕಾಂಕ್ಷೆಯ ಕನಸು ಸಾಕಾರಗೊಳ್ಳಲು ಪರಿಶ್ರಮದ ಜೊತೆಗೆ ಸಾಧಿ ಸುವ ಛಲವನ್ನೂ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕರೆ ನೀಡಿದರು.

ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ನ್ಯಾಮತಿ ತಾಲೂಕಿನ ಬೆಳಗುತ್ತಿ-ಮಲ್ಲಿಗೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಿದ್ದ “ಕನಸು ಬಿತ್ತುವ ಕೆಲಸ-ರಾಷ್ಟ್ರ ಕಟ್ಟುವ ಕೆಲಸ’ ಶೀರ್ಷಿಕೆ ಅಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗುರಿ ತಲುಪುವವರೆಗೂ ಯಾರೂ ವಿರಮಿಸಬಾರದು. ಸ್ವಾವಲಂಬನೆ, ಸ್ವಾಭಿಮಾನ, ಆತ್ಮಗೌರವ ಬೆಳೆಸಿಕೊಳ್ಳಬೇಕು. ಶ್ರದ್ಧೆ, ಸಮರ್ಪಣೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದರು. ಯಾವುದೇ ಕ್ಷೇತ್ರದಲ್ಲಾಗಲಿ, ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು. ಪ್ರತಿಯೊಬ್ಬರಲ್ಲೂ ಅಗಾಧ ಶಕ್ತಿ ಇರುತ್ತದೆ. ಕಷ್ಟ ಪಡುವವರೇ ಜೀವನದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ. 16 ರಿಂದ 22 ರೊಳಗಿನ ವಯಸ್ಸು ಕಂಡ ಕನಸನ್ನು ಸಾಕಾರಗೊಳಿಸಿಕೊಳ್ಳುವ ಪರಿಪಕ್ವವಾದ ಅವಧಿ. ಆದ್ದರಿಂದ ಯಾರೂ ಕೂಡ ಸಣ್ಣ ಮಟ್ಟದ ಕನಸು ಕಾಣಬಾರದು. ನಾವು ಕಾಣುವ ಕನಸು ನಮ್ಮನ್ನು ಮಲಗಲು ಬಿಡಬಾರದು ಎಂದರು.

ನಕಾರಾತ್ಮಕ ಭಾವನೆ ಒಳ್ಳೆಯದಲ್ಲ, ಧನಾತ್ಮಕವಾಗಿ ಚಿಂತಿಸಬೇಕು. ಕಲಿಕಾ ಮಟ್ಟದಲ್ಲಿ ಸಾಮರ್ಥ್ಯ ಕಡಿಮೆ ಇರುವವರು ಕೀಳರಿಮೆ ಹೊಂದಬಾರದು. ಜೀವನವನ್ನು ಯಾರೊಂದಿಗೂ ಹೋಲಿಕೆ ಮಾಡಿಕೊಳ್ಳಬಾರದು. ಅನೇಕ ಮಹನೀಯರು, ಸಾಧಕರು ತಮ್ಮ ಜೀವನದ ಪ್ರಾರಂಭದಲ್ಲಿ ಸೋತರೂ ನಂತರದ ದಿನಗಳಲ್ಲಿ ಮಹತ್ಸಾಧನೆ ಮಾಡುವ ಮೂಲಕ ಯಶಸ್ಸು ಕಂಡಿರುವ ಅನೇಕ ಉದಾಹರಣೆಗಳಿವೆ. ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಅವರು ಬಡ ಕುಟುಂಬದಿಂದ ಬಂದು ಪರಿಶ್ರಮಪಟ್ಟು ಸಾಧನೆ ಮಾಡಿ ದೇಶದ ಉನ್ನತ ಸ್ಥಾನಕ್ಕೆ ಏರಿದವರು ಎಂದು ಸ್ಮರಿಸಿದರು.

ತಾವು ಬಾಲ್ಯದಲ್ಲಿ ಅನುಭವಿಸಿದ ಕಷ್ಟ, ಅವಮಾನಗಳ ಕುರಿತು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಜಿಲ್ಲಾಧಿಕಾರಿಗಳು, ತಾನು ಉನ್ನತ ಅ ಧಿಕಾರಿಯಾಗಲೇಬೇಕು ಎಂದು ಕಂಡ ಕನಸು ನನಸಾಗಿಸಲು ಪಟ್ಟ ಪರಿಶ್ರಮದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು. ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಮಾತನಾಡಿ, “ಕನಸು ಬಿತ್ತುವ ಕೆಲಸ-ರಾಷ್ಟ್ರ ಕಟ್ಟುವ ಕೆಲಸ’ ಕಾರ್ಯಕ್ರಮ ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಅವರ ಕನಸಿನ ಕೂಸು. ಬಹುಶಃ ಇಂತಹ ಕಾರ್ಯಕ್ರಮ ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ನಡೆದಿಲ್ಲ. ಪ್ರತಿ ವಿದ್ಯಾರ್ಥಿಯಲ್ಲಿಯೂ ಸುಪ್ತ ಪ್ರತಿಭೆಯ ಗುರುತಿಸಿ, ಬೆಳೆಸುವ ಕೆಲಸ ಶಾಲೆಯಲ್ಲಿ ಶಿಕ್ಷಕರು ಹಾಗೂ ಮನೆಯಲ್ಲಿ ಪೋಷಕರು ತಪ್ಪದೆ ಮಾಡಬೇಕು ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಎಸ್‌.ಆರ್‌. ಗಂಗಪ್ಪ, ತಹಶೀಲ್ದಾರ್‌ ಬಸನಗೌಡ ಕೋಟೂರ್‌ ಅನುಭವ ಹಂಚಿಕೊಂಡರು.

ಓದಿ :  ಪಂಚರಾಜ್ಯ ಚುನಾವಣೆ : ಫೇಸ್ ಬುಕ್ ಜಾಹಿರಾತು : ಅತಿ ಹೆಚ್ಚು ಖರ್ಚು ಮಾಡಿದ ಪಕ್ಷ ಯಾವುದು ?

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.