ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ: ಸಿಇಒ
ಕ್ಷಯ ರೋಗಿಯ ಮನೆ ಸಮೀಪದ ನೇರ ನಿಗಾವಣೆ ಕೇಂದ್ರದಲ್ಲಿ 6 ರಿಂದ 8 ತಿಂಗಳು ಚಿಕಿತ್ಸೆ
Team Udayavani, Mar 25, 2021, 6:55 PM IST
ಬೀದರ: ಕ್ಷಯ ರೋಗದ ಲಕ್ಷಣ ಇದ್ದವರು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ 2 ಬಾರಿ ಕಪ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯರೋಗ ಯಾರಿಗೆ ಬೇಕಾದರೂ ಬರಬಹುದು ಎಂದು ಜಿಪಂ ಸಿಇಒ ಜಹೀರಾ ನಸೀಮ್ ಹೇಳಿದರು. ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಕ್ಷಯ ರೋಗ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷಯ ರೋಗ “ಮೈಕೋಬ್ಯಾಕ್ಟೀರಿಯಂ ಟ್ಯೂಬರ್ ಕ್ಯುಲೋಸಿಸ್’ ಸೂಕ್ಷ್ಮಾಣು ಜೀವಿಯಿಂದ ಬರುತ್ತದೆ. ಈ ರೋಗ ದೇಹದ ಯಾವುದೇ ಭಾಗಕ್ಕಾದರೂ ಬರಬಹುದು. ರೋಗದಲ್ಲಿ ಶ್ವಾಸಕೋಶದ ಕ್ಷಯ ಮತ್ತು ಶ್ವಾಸಕೋಶೇತ್ತರ ಕ್ಷಯ ಎಂಬ ಎರಡು ವಿಧಗಳಿವೆ. ಕ್ಷಯರೋಗಿ ಕೆಮ್ಮಿದಾಗ, ಸೀನಿದಾಗ ಹೊರಬರುವ ತುಂತುರುಗಳಿಂದ ರೋಗಾಣುಗಳು ಆರೋಗ್ಯವಂತ ವ್ಯಕ್ತಿಯ ದೇಹ ಸೇರಿ ಸೋಂಕು ಉಂಟಾಗುತ್ತದೆ ಎಂದರು.
ಜಿಲ್ಲಾ ಕ್ಷಯ ರೋಗ ಅಧಿ ಕಾರಿ ಡಾ| ದೀಪಾ ಖಂಡ್ರೆ ಮಾತನಾಡಿ, ಜಿಲ್ಲೆಯ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೈಕ್ರೋಸ್ಕೋಪಿ ಪರೀಕ್ಷೆ ಮಾಡಲಾಗುತ್ತದೆ. ಕ್ಷಯರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ. ಕ್ಷಯ ರೋಗಿಯ ಮನೆ ಸಮೀಪದ ನೇರ ನಿಗಾವಣೆ ಕೇಂದ್ರದಲ್ಲಿ 6 ರಿಂದ 8 ತಿಂಗಳು ಚಿಕಿತ್ಸೆ ನೀಡಲಾಗುವುದು ಎಂದರು. ಬ್ರಿಮ್ಸ್ ಕ್ಷಯ ರೋಗದ ನೋಡಲ್ ಅಧಿಕಾರಿ ಡಾ| ಮಹೇಶ ತೊಂಡಾರೆ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿರುವ ವೈದ್ಯರು, ಟೆಕ್ನಾಲಾಜಿಸ್ಟ್, ಫಾರ್ಮಶಿಸ್ಟ್, ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆ ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಸಿಬ್ಬಂದಿಗೆ ಸನ್ಮಾನಿಸಲಾಯಿತು.
ಜಾಗೃತಿ ರ್ಯಾಲಿ: ಕಾರ್ಯಕ್ರಮಕ್ಕೂ ಮುನ್ನ ಕ್ಷಯ ರೋಗ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ನಡೆದ ವಾಹನಗಳ ರ್ಯಾಲಿಗೆ ಜಿಪಂ ಸಿಇಒ ಜಹೀರಾ
ನಸೀಮ್ ಚಾಲನೆ ನೀಡಿದರು. ಈ ವೇಳೆ ಐಎಂಎ ಅಧ್ಯಕ್ಷ ಡಾ| ವಿ.ವಿ. ನಾಗರಾಜ, ಕುಷ್ಠ ರೋಗ ಅ ಧಿಕಾರಿ ಡಾ| ಮಹೇಶ ಬಿರಾದಾರ, ಆರ್‌ಸಿಎಚ್
ಅಧಿಕಾರಿ ಡಾ| ರಾಜಶೇಖರ ಪಾಟೀಲ, ಕುಟುಂಬ ಕಲ್ಯಾಣಾಧಿಕಾರಿ ಡಾ| ಶಿವಶಂಕರ ಬಿ., ಜಿಲ್ಲಾ ಮಲೇರಿಯಾ ಅ ಧಿಕಾರಿ ಡಾ| ಸಂಜುಕುಮಾರ
ಪಾಟೀಲ, ಸಂಗಪ್ಪ ಕಾಂಬಳೆ ಇತರರಿದ್ದರು.
ರೋಗಿಗಳಿಗೆ ಚಿಕಿತ್ಸೆ
ಬೀದರ ಜಿಲ್ಲೆಯಲ್ಲಿ 2019ರಲ್ಲಿ ಒಟ್ಟು 3015 ಕ್ಷಯ ರೋಗಿಗಳಿಗೆ ಚಿಕಿತ್ಸೆಗೆ ಒಳಪಡಿಸಲಾಯಿತು. ಅದರಲ್ಲಿ 2512 ರೋಗಿಗಳು ಗುಣಮುಖರಾಗಿದ್ದು, 190 ರೋಗಿಗಳು ಮೃತಪಟ್ಟಿದ್ದಾರೆ. 149 ರೋಗಿಗಳು ಚಿಕಿತ್ಸೆ ಮಧ್ಯದಲ್ಲೇ ಚಿಕಿತ್ಸೆ ಬಿಟ್ಟಿದ್ದಾರೆ. 44 ರೋಗಿಗಳಿಗೆ ಚಿಕಿತ್ಸೆ ವೈಫಲ್ಯತೆಯಾಗಿದೆ. 2020ರಲ್ಲಿ ಒಟ್ಟು 13,849 ಶಂಕಿತರ ಕಫ ಪರೀಕ್ಷಿಸಲಾಗಿದ್ದು, ಅದರಲ್ಲಿ 2200 ಧನಾತ್ಮಕ-ಋಣಾತ್ಮಕ ರೋಗಿಗಳನ್ನು ಕಂಡುಹಿಡಿಯಲಾಗಿದ್ದು, ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.