ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೊಲೆ 7 ಆರೋಪಿಗಳ ಬಂಧನ: ಮಿಥುನ್ ಕುಮಾರ್


Team Udayavani, Mar 25, 2021, 10:09 PM IST

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೊಲೆ 7 ಆರೋಪಿಗಳ ಬಂಧನ: ಮಿಥುನ್ ಕುಮಾರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೋಲೀಸ್ ಠಾಣಾ ವ್ಯಾಪ್ತಿಯ ಆವುಲನಾಗೇನಹಳ್ಳಿ ಗ್ರಾಮದಲ್ಲಿ ಪಂಚಾಯಿತಿ ಕಾರ್ಯದರ್ಶಿ ರಾಮಾಂಜಿಯ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳ ಪೈಕಿ 7 ಆರೋಪಿಗಳನ್ನು ಬಂದಿಸಿದ್ದು ಪರಾರಿಯಾಗಿರುವ ಮತ್ತೋರ್ವ ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್‍ಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೊಲೆಗೀಡಾದ ರಾಮಾಂಜಿ ಮತ್ತು ಅದೇ ಗ್ರಾಮದ ಆರೋಪಿ ಅರವಿಂದ್ ಅವರ ಮಧ್ಯೆ ಜಮೀನು ವಿವಾದವಿದ್ದು ಈ ಸಂಬಂಧ ಈಗಾಗಲೇ ಇಬ್ಬರು ಖರಾಬಿ ಜಮೀನಿಗಾಗಿ ಜಗಳ ಮಾಡಿಕೊಂಡು ದೂರು ಪ್ರತಿದೂರುಗಳು ಸಹ ದಾಖಲಾಗಿದೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಜಿಲ್ಲಾ ಎಸ್‍ಪಿ ಸ್ಪಷ್ಟಪಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರವಿಂದ್, ಚಿಕ್ಕಮಂಜ, ದೊಡ್ಡಮಂಜ, ಗಿರೀಶ್, ಪ್ರಸನ್ನ, ರಾಘವೇಂದ್ರ, ಅಮರನಾರಾಯಣಚಾರಿ ಅವರನ್ನು ಬಂಧಿಸಲಾಗಿದ್ದು ದಿಲೀಪ್ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದು ಆತನನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಕೊಲೆಗೆ ಯಾರು ಕುಮ್ಮಕ್ಕು ನೀಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದ್ದು ತನಿಖೆ ಪೂರ್ಣಗೊಂಡ ನಂತರ ಮಾಹಿತಿ ನೀಡಲಾಗುವುದೆಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಜಿಲ್ಲೆಯಲ್ಲಿ ಜಮೀನು ವಿವಾದ ಮತ್ತು ಹಳೇ ವೈಷಮ್ಯ ಇನ್ನಿತರೆ ಕಾರಣಗಳಿಗಾಗಿ ಎರಡು ಮೂರು ಕೊಲೆಗಳಾಗಿವೆ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ ಜಿಲ್ಲೆಯಲ್ಲಿ ಗುಂಪುಗಳ ಮಧ್ಯೆ ಜಗಳವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಸ್ಪಷ್ಟಪಡಿಸಿ ವೈಯಕ್ತಿಕ ದ್ವೇಷಗಳಿಂದ ಘಟನೆಗಳು ಸಂಭವಿಸಿವೆ ಎಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಜಮೀನು ವಿವಾದ ಇರುವ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚಳಿಕೆಗಳನ್ನು ಬರೆಸಿಕೊಳ್ಳುವ ಜೊತೆಗೆ 107 ಸಹ ಮಾಡುತ್ತಿದ್ದೇವೆ ಎಂದರು.

ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವವರಿಗೆ ಮಾತ್ರ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ ಜೊತೆಗೆ ಸರ್ವೆ ಸಹ ನಡೆಸಲಾಗಿದ್ದು ಕೆಲವರು ಕ್ವಾರಿಗಳು ಮತ್ತು ಕ್ರಷರ್‍ಗಳು ಮುಚ್ಚಿವೆ ಎಂದು ಅಧಿಕ ದರದಲ್ಲಿ ಎಂಸ್ಯಾಂಡ್ ಮತ್ತು ಜಲ್ಲಿ ಮಾರಾಟ ಮಾಡುತ್ತಿರುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.