ಉಪ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
Team Udayavani, Mar 26, 2021, 5:14 PM IST
ಕೊರಟಗೆರೆ: ನಮಗೆ ಯಾವುದೇ ಮೂಲ ಸೌಕರ್ಯಗಳಿಲ್ಲ. ಕೇವಲ ಚುನಾವಣೆಬಂದಾಗ ನಮ್ಮ ನೆನಪು ಮಾಡಿಕೊಳ್ಳುತ್ತಾರೆ. ಇದು ಯಾವ ನ್ಯಾಯ? ನಮಗೆ ಸೌಕರ್ಯಗಳನ್ನು ಕಲ್ಪಿಸದಿರುವ ಪಟ್ಟಣ ಪಂಚಾಯತಿಗೆ ನಾವೇಕೆ ಮತ ಹಾಕಬೇಕುಎಂದು ಧ್ವನಿ ಎತ್ತಿರುವ ಕಾವಲಬೀಳು 20 ಕುಟುಂಬ 4ನೇ ವಾರ್ಡ್ ಉಪಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.
ಹಲವು ದಶಕಗಳಿಂದಲೂ ನಾವುಕಾವಲಬೀಳು ಗ್ರಾಮದಲ್ಲಿ ವಾಸವಿದ್ದೇವೆ.ಆದರೆ, ಸಾರ್ವತ್ರಿಕ ಚುನಾವಣೆಗಳುಬಂದಾಗಷ್ಟೇ ನಮಗೆ ಭರವಸೆಗಳಮಹಾಪೂರವನ್ನೇ ಹರಿಸಿ ನಂತರಕಣ್ಮರೆಯಾಗುವ ಜನಪ್ರತಿನಿಧಿಗಳಅವಶ್ಯಕತೆಯಿಲ್ಲ. ಯಾರೊಬ್ಬರೂ ನಮ್ಮ ಗ್ರಾಮಕ್ಕೆ ಭೇಟಿ ನೀಡ ಬೇಡಿ. ನಾವು ಮತದಾನವನ್ನು ಬಹಿಷ್ಕರಿಸಿದ್ದೇವೆ ಎಂದು ಹೇಳಿ ಭಿತ್ತಿಪತ್ರವನ್ನು ಹಾಕಿ ಇಲ್ಲಿನ ಸ್ಥಳೀಯರು ಪಪಂ ಉಪಚುನಾವಣೆ ಬಹಿಷ್ಕರಿಸಿದ್ದಾರೆ.
ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ 1,283 ಮತದಾರರುಇದ್ದು, ಇದರಲ್ಲಿ ಕಾವಬೀಳು ವಾಸಿಗಳು100ಕ್ಕೂ ಅಧಿಕ ಮತದಾರರಿದ್ದಾರೆ. ಅಗತ್ಯಕುಡಿಯುವ ನೀರು, ಬೀದಿ ದೀಪ ಸೇರಿಬಹುಮುಖ್ಯವಾಗಿ ಗ್ರಾಮಕ್ಕೆ ಸೂಕ್ತ ರಸ್ತೆಯನ್ನುಕಲ್ಪಿಸದಿರುವುದರ ವಿರುದ್ಧ ಘೋಷಣೆ ಕೂಗಿದರು. ಗ್ರಾಮದ ಮುಖಂಡ ಕೃಷ್ಣಪ್ಪ, ತಿಮ್ಮಣ್ಣ, ಇಸ್ಮಾಯಿಲ್, ಮುಖಂಡ ರಮೇಶ್, ಸೋಮನಾಥ್, ಕೆ.ಆರ್.ಮಂಜುನಾಥ್ ಲಕ್ಷ್ಮೀ ನಾರಾಯಣ್ ಇದ್ದರು.
ಕಾವಲಬೀಳು ರಸ್ತೆ ಅಭಿವೃದ್ಧಿಗೆ ಈ ಹಿಂದೆ ಇದ್ದ ಮೈತ್ರಿ ಸರ್ಕಾರದಲ್ಲಿ ಶಾಸಕ ಡಾ.ಜಿ ಪರಮೇಶ್ವರ ನೀಡಿದ್ದ 5 ಕೋಟಿ ರೂ.ಅನುದಾನದಲ್ಲಿ 1 ಕೋಟಿ ಮೀಸಲಿಡಲಾಗಿತ್ತು. ಕೋವಿಡ್ ಕಾರಣದಿಂದ ಅನುದಾನವನ್ನು ವಾಪಸ್ ಪಡೆಯಲಾಗಿತ್ತು. ಈಗ ನಾನು ಸ್ಥಳಕ್ಕೆ ಭೇಟಿ ನೀಡಿದ್ದು, ವರದಿಯನ್ನು ಮೇಲಾಧಿಕಾರಿಗಳಿಗೆ ತಿಳಿಸುತ್ತೇನೆ. –ಲಕ್ಷ್ಮಣ್ ಕುಮಾರ್, ಪಪಂ ಮುಖ್ಯಾಧಿಕಾರಿ
ಕಾವಲಬೀಳು ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ತೆಗ್ಗು-ದಿಣ್ಣೆಗಳಿಂದ ಕೂಡಿದ್ದು,ವಾಹನಗಳ ಓಡಾಡುವುದಕ್ಕೂ ತುಂಬಾ ಕಷ್ಟಕರವಾಗಿದೆ. ಮುಂದಿನದಿನಗಳಲ್ಲಿ ಮೂಲಭೂತ ಸೌಕರ್ಯ ನೀಡುವುದರ ಮೂಲಕ ಗಮನ ಹರಿಸುತ್ತೇವೆ. –ಭಾರತಿ, ಪಪಂ ಉಪಾಧ್ಯಕ್ಷೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.