ಮಾಜಿ ಶಾಸಕ ಭೂಸನೂರಗೆ ಟಿಕೆಟ್ ನೀಡಿ
Team Udayavani, Mar 26, 2021, 7:59 PM IST
ಸಿಂದಗಿ: ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದ್ದಲ್ಲಿ ಗೆಲುವು ನಿಶ್ಚಿತ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ತಾಲೂಕು ಅಧ್ಯಕ್ಷ ರವಿ ನಾಯ್ಕೋಡಿ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಮಾಜಿ ಶಾಸಕ ರಮೇಶ ಭೂಸನೂರ ಸಿಂದಗಿ ಮತಕ್ಷೇತ್ರದ ಶಾಸಕರಾಗಿ ಎರಡು ಅವಧಿ ಕಾರ್ಯ ನಿರ್ವಹಿಸಿದ್ದಾರೆ. ಅಧಿಕಾರವಧಿ ಯಲ್ಲಿ ಕ್ಷೇತ್ರದ ಅಭಿವೃದ್ಧಿಯೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಜಿಪಂ-ತಾಪಂ, ಎಪಿಎಂಸಿ, ಪಪಂ, ಪುರಸಭೆ ಸದಸ್ಯರನ್ನಾಗಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಮಾಜಿ ಶಾಸಕ ರಮೇಶ ಭೂಸನೂರ 2008ರ ವಿಧಾನಸಭಾ ಚುನಾವಣೆಯಲ್ಲಿ 35,227 ಮತ , 2013ರ ವಿಧಾನಸಭಾ ಚುನಾವಣೆಯಲ್ಲಿ 37,834 ಮತ ಪಡೆದಿ ಎರಡೂ ಚುನಾವಣೆಗಳಲ್ಲಿ ಚುನಾಯಿತರಾಗಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ 61,560 ಮತ ಪಡೆದು ಅಲ್ಪ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ಆದರೆ ಅವರು ಪ್ರತಿ ಚುನಾವಣೆಯಲ್ಲಿ ಪಡೆದಿರುವ ಮತಗಳು ಶೇಕಡಾವಾರು ಹೆಚ್ಚಾಗಿವೆ. ಸೋತರೂ ಪಕ್ಷ ಸಂಘಟನೆ, ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಕ್ಷೇತ್ರದಲ್ಲಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.