ಮಾಸ್ಕ್ ಧರಿಸದಿದ್ದರೆ 250 ರೂ. ದಂಡ ಗ್ಯಾರಂಟಿ
ನಿತ್ಯ 100 ಜನ ಮಾಸ್ಕ್ ರಹಿತರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಗುರಿ ನಿಗದಿ
Team Udayavani, Mar 26, 2021, 8:09 PM IST
ದಾವಣಗೆರೆ: ನಾಗರಿಕರೇ, ಮನೆಯಿಂದ ಹೊರಗೆ ಹೋಗುವಾಗ ಮರೆಯದೇ ಮಾಸ್ಕ್ ಧರಿಸಿಕೊಂಡು ಹೋಗಿ. ಇಲ್ಲದಿದ್ದರೆ ಕಂಡ ಕಂಡಲ್ಲಿ ನಿಂತಿರುವ ಪೊಲೀಸರು, ಅಧಿಕಾರಿಗಳು ನಿಮ್ಮಿಂದ 250ರೂ. ದಂಡ ವಸೂಲಿ ಮಾಡುತ್ತಾರೆ!
ಹೌದು, ಕೋವಿಡ್ ವೈರಸ್ ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ಜಿಲ್ಲಾಡಳಿತ, ಮಾಸ್ಕ್ ಕಡ್ಡಾಯಗೊಳಿಸಿದ್ದು ಧರಿಸದೇ ಇರುವವರಿಗೆ ದಂಡ ವಿಧಿಸಲು ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಆದೇಶದಂತೆ ಅಧಿಕಾರಿಗಳ ತಂಡ ಈಗ ಬೀದಿಗೆ ಇಳಿದಿದ್ದು, ದಂಡ ವಸೂಲಿ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಪೊಲೀಸರು ಪ್ರತಿಯೊಂದು ರಸ್ತೆಗಳಲ್ಲಿಯೂ ನಿಂತು ಮಾಸ್ಕ್ ಹಾಕದೇ ಇರುವ ಸಾರ್ವಜನಿಕರಿಂದ 250 ರೂ. ವಸೂಲಿ ಮಾಡುತ್ತಿದ್ದರೆ, ಇತ್ತ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಸಹ ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶಾಪಿಂಗ್ ಮಾಲ್ ಸೇರಿದಂತೆ ವಿವಿಧ ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ.
ಜಿಲ್ಲಾ ಕೇಂದ್ರದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳೂ ಸಹ ದಂಡ ವಸೂಲಿ ಕ್ರಮಕ್ಕೆ ಮುಂದಾಗಿದ್ದು ರಸ್ತೆ, ಅಂಗಡಿ ಮುಂಗಟ್ಟು ಎಲ್ಲೆಡೆ ದಂಡ ವಸೂಲಿ ಜೋರಾಗಿರುವುದು ಕಂಡು ಬರುತ್ತಿದೆ. ದಂಡಕ್ಕೂ ಗುರಿ: ಕೋವಿಡ್ ಹರಡುವುದನ್ನು ತಡೆಯಲು ಮಾಸ್ಕ್ ಧರಿಸದವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಸಹ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಅಧಿಕಾರಿಗಳಿಗೆ ಗುರಿ ನಿಗದಿಪಡಿಸಿದ್ದಾರೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿತ್ಯ 100 ಜನ ಮಾಸ್ಕ್ ರಹಿತರನ್ನು ಪತ್ತೆಹಚ್ಚಿ ದಂಡ ವಿಧಿಸಲು ಗುರಿ ನಿಗದಿಪಡಿಸಿದ್ದಾರೆ. ಅದೇ ರೀತಿ ಪ್ರತಿ ವಾರ್ಡ್‌ಗೆ 10, ಪಟ್ಟಣ ಪ್ರದೇಶದಲ್ಲಿ ನಿತ್ಯ 100, ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಈ ಕಾರಣದಿಂದಾಗಿ ಈಗ ಜಿಲ್ಲೆಯಾದ್ಯಂತ ದಂಡ ವಸೂಲಿ ಜೋರಾಗಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.