ಸಿ.ಡಿ ಲೇಡಿಯ ಆಡಿಯೋದಲ್ಲಿ ‘ಮಹಾನಾಯಕ’ನ ಹೆಸರು ಪ್ರಸ್ತಾಪ : ಯಾರು ಆತ ?
Team Udayavani, Mar 26, 2021, 9:05 PM IST
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಅವರದು ಎನ್ನಲಾಗಿರುವ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಸಿಡಿಯಲ್ಲಿರುವ ಯುವತಿ ತಮ್ಮ ಮನೆಯವರ ಜತೆ ಮಾತನಾಡಿದ್ದಾಳೆ ಎನ್ನಲಾದ ಆಡಿಯೋ ಇದೀಗ ಬಹಿರಂಗವಾಗಿದ್ದು, ಇದರಲ್ಲಿ ಡಿ.ಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ.
ಸದ್ಯ ರಿವೀಲ್ ಆಗಿರುವ ಆಡಿಯೋದಲ್ಲಿ ಯುವತಿ ಮಾತನಾಡುವಾಗ ಡಿಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪಿಸಿದ್ದಾಳೆ. ಶಾಸಕ ರಮೇಶ್ ಜತೆ ಇರುವ ವಿಡಿಯೋದಲ್ಲಿರುವುದು ನಾನಲ್ಲ ಎಂದು ಮನೆಯವರ ಎದುರು ಕಣ್ಣೀರು ಹಾಕಿದ್ದಾಳೆ. 6 ನಿಮಿಷ 59 ಸೆಕೆಂಡ್ ಗಳ ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿದೆ.
ಇನ್ನು ಈ ವಿಡಿಯೋ ಬಿಡುಗಡೆಯ ಹಿಂದೆ ಮಹಾನಾಯಕನ ಕೈವಾಡ ಇದೆ ಎಂದು ರಮೇಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರು ಹೇಳಿದ್ದರು. ಆದರೆ, ಈ ಮಹಾನಾಯಕ ಯಾರು ಎನ್ನುವ ರಹಸ್ಯ ಬಹಿರಂಗಗೊಂಡಿರಲಿಲ್ಲ. ಸದ್ಯ ರಿವೀಲ್ ಆಗಿರುವ ಆಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಸ್ತಾವಾಗಿರುವುದರಿಂದ ಇವರೇನಾ ಆ ಮಹಾ ನಾಯಕ ಎಂದು ಬಿಜೆಪಿ ಪ್ರಶ್ನಿಸಿದೆ.
ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಆ ಪ್ರಕರಣದ ʼಸಂತ್ರಸ್ಥೆʼ ನೇರವಾಗಿ ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ. ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ. ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? ಎಂದು ಪಶ್ನಿಸಿದೆ.
ಆ ಪ್ರಕರಣದ ʼಸಂತ್ರಸ್ಥೆʼ ನೇರವಾಗಿ #ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ.
ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ.
ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ?
ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? pic.twitter.com/hYOUa49gFT
— BJP Karnataka (@BJP4Karnataka) March 26, 2021
ಮತ್ತೊಂದು ಟ್ವೀಟ್‍ನಲ್ಲಿ ‘ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ಥೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್ ಮೈಂಡ್‌ಗಳಿಗೂ ಇರುವ ಸಂಬಂಧವವನ್ನು ರಾಜ್ಯ ಕಾಂಗ್ರೆಸ್ ಬಹಿರಂಗಗೊಳಿಸಬೇಕೆಂದು ಟ್ವೀಟ್‍ನಲ್ಲಿ ಬಿಜೆಪಿ ಒತ್ತಾಯಿಸಿದೆ.
ಆರಂಭದಿಂದಲೂ #ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು.
ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ಥೆ ಹೇಳಿಕೊಂಡಿದ್ದಾಳೆ.
ಮಹಾನಾಯಕನಿಗೂ ಪ್ರಕರಣದ ಮಾಸ್ಟರ್ ಮೈಂಡ್‌ಗಳಿಗೂ ಇರುವ ಸಂಬಂಧವವನ್ನು @INCKarnataka ಬಹಿರಂಗಗೊಳಿಸಬೇಕು. pic.twitter.com/YVyM5JXfsT
— BJP Karnataka (@BJP4Karnataka) March 26, 2021
ರಮೇಶ್ ವಿರುದ್ಧ ದೂರು :
ಇನ್ನು ಇಂದು (ಶುಕ್ರವಾರ) ಯುವತಿಯ ಎರಡನೇ ವಿಡಿಯೋ ರಿಲೀಸ್ ಬಳಿಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.