ಬಡೆಕೊಟ್ಟು ಕೊರಗ ಕುಟುಂಬಕ್ಕೆ ಸೂರಿನ ಆಸರೆ : ಸ್ಥಳೀಯ ಶಾಸಕರ ಸ್ಪಂದನೆ

Team Udayavani, Mar 27, 2021, 12:47 AM IST

ಬಡೆಕೊಟ್ಟು ಕೊರಗ ಕುಟುಂಬಕ್ಕೆ ಸೂರಿನ ಆಸರೆ : ಸ್ಥಳೀಯ ಶಾಸಕರ ಸ್ಪಂದನೆ

ಬೆಳ್ತಂಗಡಿ: ಉಜಿರೆ ಗ್ರಾಮದ ಬಡೆಕೊಟ್ಟು ಎಂಬಲ್ಲಿರುವ ಮೂಲ ನಿವಾಸಿ ಕೊರಗ ಕುಟುಂಬಗಳು ಸೂರಿಗಾಗಿ ಪಟ್ಟ ಯಾತನೆ ಕೊನೆಗೂ ನನಸಾಗುವ ಹಂತದಲ್ಲಿದೆ. ಕಳೆದ ಹತ್ತಾರು ವರ್ಷಗಳಿಂದ ಮಳೆ, ಗಾಳಿ ಎನ್ನದೆ ಜೋಪಡಿಯೊಳಗೆ ಬದುಕು ಸವೆಸಿದ ಮಂದಿಗೆ ಇದೀಗ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ 11 ಮನೆಗಳು ಮಂಜೂರಾಗಿದೆ.

ಕಳೆದ ವರ್ಷ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಪ್ರತೀ ಮನೆಗೆ 3.50 ಲಕ್ಷ ರೂ. ಘಟಕ ವೆಚ್ಚದಲ್ಲಿ ಅನುದಾನವೇನೋ ಬಿಡುಗಡೆಯಾಗಿತ್ತು. ಆದರೆ ಮನೆ ನಿರ್ಮಾಣ ಆದೇಶ ಫಲಾನುಭವಿಗಳ ಕೈಸೇರಿದ 15 ದಿನಗಳೊಳಗಾಗಿ ಕಾಮಗಾರಿ ಆರಂಭಿಸಿ, 6 ತಿಂಗಳ ಒಳಗಾಗಿ ಕಡ್ಡಾಯವಾಗಿ ಪೂರ್ಣ ಗೊಳಿಸಬೇಕೆಂಬ ಆದೇಶ ಹೊರಡಿಸಿತ್ತು. ಆದರೆ ಮಳೆಗಾಲದ ಅವಧಿ ಯಲ್ಲಿ ಆದೇಶ ಬಂದಿರುವುದರಿಂದ ಮನೆ ನಿರ್ಮಾಣ ಸವಾಲಾಗಿತ್ತಲ್ಲದೆ ಬಡ ಕುಟುಂಬಗಳು ಇರುವ ಮನೆ ಕೆಡವಿ ನೂತನ ಮನೆ ನಿರ್ಮಾಣ ಮಾಡಲು ತಾತ್ಕಾಲಿಕ ವಸತಿ ಇಲ್ಲದೆ ತ್ರಿಶಂಕು ಸ್ಥಿತಿಯಲ್ಲಿತ್ತು.

ಶಾಸಕರಿಂದ ಸಹಕಾರ
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ತಾಲೂಕಿಗೆ ಪ್ರಸಕ್ತ ವರ್ಷ 15 ಮನೆಗಳು ಮಂಜೂರಾಗಿದ್ದು, ಅವುಗಳ ಪೈಕಿ 11 ಮನೆಗಳು ಬಡೆಕೊಟ್ಟು ಕುಟುಂಬಗಳಿಗೆ ನೀಡಲಾಗಿದೆ. ಮಣ್ಣಿನ ಕೊರತೆ ಹಾಗೂ ಸಲಕರಣೆ ಸಾಗಾಟಕ್ಕೆ ರಸ್ತೆ ಸಮಸ್ಯೆಯಾಗಿದ್ದರಿಂದ ಕೊಂಚ ತಡವಾದರೂ ಪ್ರಸಕ್ತ ತಳಪಾಯ ಕಾಮಗಾರಿ ಪ್ರಗತಿಯಲ್ಲಿದೆ. ಮಳೆಗಾಲದ ಮುನ್ನ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶ ಹೊಂದಿದೆ. ಪ್ರತೀ ಮನೆಗೆ 3.50 ಲಕ್ಷ ರೂ. ಘಟಕ ಯೋಜನೆ ವೆಚ್ಚ ನೇರವಾಗಿ ಫಲಾನುಭವಿಗಳ ಕೈ ಸೇರಲಿದ್ದು, ಶಾಸಕರು ತಲಾ 1 ಲಕ್ಷ ರೂ.ನಂತೆ ವೈಯಕ್ತಿಕ ಅನುದಾನ ಒದಗಿಸಿದ್ದಾರೆ.

ಮೂರು ಬಾರಿ ಮನೆ ನಿರ್ಮಾಣ
ಕಳೆದ 2 ದಶಕಗಳಿಂದ ಈ ಕುಟುಂಬಗಳಿಗೆ ಇಲಾಖೆಗಳು ಮೂರು ಬಾರಿ ಮನೆ ನಿರ್ಮಾಣ ಮಾಡಿವೆ. ನಿರ್ಮಿಸಿದ ಮನೆಗಳ ಗುಣಮಟ್ಟದ ಕೊರತೆ ಯಿಂದಾಗಿ ಯಾವ ಮನೆಗಳೂ ಹೆಚ್ಚು ಕಾಲ ಉಳಿಯಲಿಲ್ಲ. ಮೊದಲ ಬಾರಿ ಹಂಚಿನ ಮನೆ ಗಳನ್ನು ಇಲಾಖೆ ವತಿಯಿಂದ ನಿರ್ಮಿಸಿ ಕೊಡಲಾಗಿತ್ತು. ಈ ಮಧ್ಯೆ ಐಟಿಡಿಪಿ ಇಲಾಖೆಯಿಂದ ಮತ್ತೂಮ್ಮೆ ಕಾಂಕ್ರೀಟ್‌ ಮೇಚ್ಛಾವಣಿ ಹೊಂದಿರುವ ಮನೆ ನಿರ್ಮಿಸಿಕೊಡಲಾಗಿತ್ತು.

ನಿರ್ಮಿತಿ ಕೇಂದ್ರದವರು ನಿರ್ಮಿಸಿದ ಈ ಮನೆಗಳು ಗಾಳಿ ಯಾಡದ ರೀತಿಯಲ್ಲಿ ಗೂಡಿ ನಂತಿದ್ದವು. ಕುಟುಂಬಗಳು ಮನೆಯೊಳಗೆ ವಾಸಿಸಲಾಗದೆ ಮನೆಗಳ ಅಂಗಳದಲ್ಲಿ ಟರ್ಪಾಲು ಹಾಕಿ ಜೀವನ ನಡೆಸುತ್ತಿದ್ದವು.

ಪ್ರಸಕ್ತ ವಾಸಿಸುತ್ತಿರುವ ಮನೆಗಳು ನಿರ್ಮಾಣವಾಗಿ ಒಂದು ದಶಕ ಮಾತ್ರ ಕಳೆದಿದೆ. ಈಗಲೇ ಎಲ್ಲವೂ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಗೆ ಈ ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಹೊಸ ಮನೆಗಳನ್ನು ನಿರ್ಮಿಸಿಕೊಡುವಂತೆ ಕೇಳಿ ಕೊಂಡಿದ್ದರು. ಲೋಕೋಪಯೋಗಿ ಇಲಾಖೆ ಪರಿಶೀಲಿಸಿ 2020 ಜನವರಿ ಮೊದಲ ವಾರದಲ್ಲಿ ಇಲಾಖೆಗೆ ವರದಿ ನೀಡಿತ್ತು.

400 ಚದರಡಿ ಮನೆ
ಮನೆಯು ಹಾಲ್‌, ಬೆಡ್‌ರೂಮ್‌, ಅಡುಗೆ ಕೋಣೆ, ಡೈನಿಂಗ್‌ ಹಾಲ್‌ ಒಳಗೊಂಡಿದ್ದು, ಶೌಚಾಲಯ ಪ್ರತ್ಯೇಕ ನಿರ್ಮಾಣವಾಗಲಿದೆ. ಹೊರಾಂಗಣಕ್ಕೂ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವ ಕುರಿತು ನಕ್ಷೆ ರಚಿಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 87,500 ರೂ.ನಂತೆ ನಾಲ್ಕು ಕಂತುಗಳಲ್ಲಿ ಒಟ್ಟು 3.50 ಲಕ್ಷ ರೂ. ಕೈಸೇರಲಿದೆ. ಫಲಾನುಭವಿಗಳಾದ ಅಕ್ಕು, ಚೋಮು, ಪ್ರೇಮಾ, ಲಲಿತಾ, ಮೇರಿ, ಚಂದ್ರಾವತಿ, ಮೀನಾಕ್ಷಿ, ರೀತಾ, ವನಿತಾ, ಸಾವಿತ್ರಿ, ಅಂಗಾರೆ ಸೇರಿ 11 ಮಂದಿಗೆ ಮನೆ ಮಂಜೂರಾಗಿದೆ. ಈ ಹಿಂದೆ 9 ಕುಂಟುಂಬಗಳಿದ್ದು, ಒಂದು ಕುಟುಂಬದ ಇಬ್ಬರು ಮಕ್ಕಳು ಪ್ರತ್ಯೇಕಗೊಂಡಿದ್ದರಿಂದ ಒಟ್ಟು 11 ಮನೆ ಮಂಜೂರಾಗಿದೆ.

ಶೀಘ್ರ ಪೂರ್ಣ
ಮನೆ ನಿರ್ಮಾಣಕ್ಕೆ ತಲಾ ಒಂದು ಲಕ್ಷದಂತೆ ತನ್ನ ಸ್ವಂತ ಅನುದಾನ ಒದಗಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ. ಶಾಸಕರ ಸೂಚನೆಯಂತೆ ಮನೆ ನಿರ್ಮಾಣ ಕಾಮಗಾರಿ ಹಂತದಲ್ಲಿದೆ. ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಲಾಗುವುದು.
– ಹೇಮಚಂದ್ರ, ಪ್ರಭಾರ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ

ಮುಖ್ಯವಾಹಿನಿಗೆ ತರುವ ಪ್ರಯತ್ನ
ಉಜಿರೆ ಗ್ರಾಮದ ಬಡೆಕೊಟ್ಟು ಮೂಲ ಕೊರಗ ನಿವಾಸಿಗಳು ಸೂರಿಲ್ಲದೆ ಸಂಕಷ್ಟ ಪಡುತ್ತಿರುವುದನ್ನು ಮನಗಂಡು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಹಾಗೂ ಶಾಸಕನ ನೆಲೆಯಲ್ಲಿ ಸಹಕಾರ ಒದಗಿಸಿ ಸೂರು ಕಲ್ಪಿಸಲಾಗುವುದು. ಈ ಮೂಲಕ ಹಿಂದುಳಿದ ಕುಟುಂಬಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನವಾಗಲಿದೆ.
– ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.