ಪ.ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದ ಮತದಾನ ಆರಂಭ: ದಾಖಲೆಯ ಮತದಾನಕ್ಕೆ ಮೋದಿ ಕರೆ
Team Udayavani, Mar 27, 2021, 9:59 AM IST
ಕೋಲ್ಕತ್ತಾ: ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ.
ಪಶ್ಚಿಮ ಬಂಗಾಳದ ಒಟ್ಟು 5 ಜಿಲ್ಲೆಗಳ 30 ಸ್ಥಾನಗಳಿಗೆ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ. 73 ಲಕ್ಷಕ್ಕೂ ಅಧಿಕ ಮತದಾರರು ಕಣದಲ್ಲಿರುವ 191 ಅಭ್ಯರ್ಥಿಗಳ ಹಣೆಬರಹ ತೀರ್ಮಾನಿಸಲಿದ್ದಾರೆ. ಟಿಎಂಸಿ ಮತ್ತು ಬಿಜೆಪಿಯ 29 ಅಭ್ಯರ್ಥಿಗಳು ಅಖಾಡದಲ್ಲಿದ್ದರೆ, ಎಡಪಕ್ಷ- ಕಾಂಗ್ರೆಸ್- ಐಎಸ್‌ಎಫ್ ಮೈತ್ರಿಯ 30 ಅಭ್ಯರ್ಥಿಗಳು ಮತ ಪರೀಕ್ಷೆ ಎದುರಿಸಲಿದ್ದಾರೆ.
ಇದನ್ನೂ ಓದಿ:ಬಂಗಾಲ, ಅಸ್ಸಾಂನಲ್ಲಿಂದು “ಬೀಪ್’ ಸದ್ದು :2 ರಾಜ್ಯಗಳ 77 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ
ಅಸ್ಸಾಂನಲ್ಲಿನ ಒಟ್ಟು 126 ವಿಧಾನಸಭಾ ಕ್ಷೇತ್ರಗಳ ಪೈಕಿ 47 ಸ್ಥಾನಗಳಿಗೆ ಮತದಾನ ಇಂದು ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಒಟ್ಟು 81,09,815 ಮತದಾರರು 264 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. 40,77,210 ಪುರುಷರು, 40,32,481 ಮಹಿಳೆಯರು, 114 ತೃತೀಯ ಲಿಂಗಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸಿಎಂ ಸರ್ಬಾನಂದ ಸೋನೊವಾಲ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೊರೊ ಸೇರಿದಂತೆ ಪ್ರಮುಖ ಸಚಿವರು, ಮಾಜಿ ಮಂತ್ರಿಗಳ ಭವಿಷ್ಯವನ್ನು ಮತದಾರ ನಿರ್ಧರಿಸಲಿದ್ದಾನೆ.
ದಾಖಲೆ ಮತದಾನಕ್ಕೆ ಮೋದಿ ಮನವಿ: ಪ.ಬಂಗಾಳ ಮತ್ತು ಅಸ್ಸಾಂ ಚುನಾವಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ದಾಖಲೆ ಮತದಾನ ಮಾಡುವಂತೆ ಕೋರಿದ್ದಾರೆ.
ಒಂದು ಅಸ್ಸಾಂನ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಮತದಾನ ಅರ್ಹತೆ ಹೊಂದಿರುವವರು ದಾಖಲೆಯ ಮತದಾನ ಮಾಡಿ. ಅದರಲ್ಲೂ ವಿಶೇಷವಾಗಿ ನನ್ನ ಯುವ ಸಮೂಹಕ್ಕೆ ಮತದಾನ ಮಾಡಲು ಕೋರುತ್ತೇನೆ ಎಂದಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ಎಲ್ಲರೂ ತಮ್ಮ ಕ್ಷೇತ್ರದ ಮತಗಟ್ಟೆಗಳಿಗೆ ತೆರಳಿ ದಾಖಲೆ ಸಂಖ್ಯೆಯಲ್ಲಿ ಮತವನ್ನು ಚಲಾಯಿಸಿ ಎಂದು ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.