ದೇಶದಲ್ಲಿ ಒಂದೇ ದಿನ 62,258 ಕೋವಿಡ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ!
Team Udayavani, Mar 27, 2021, 1:35 PM IST
ನವದೆಹಲಿ : ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 62,258 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ವರದಿಯನ್ನು ನೀಡಿದೆ. ಇದೇ ಮೊದಲ ಬಾರಿಗೆ ಒಂದೇ ದಿನ ಇಷ್ಟು ಪ್ರಕರಣ ಪತ್ತೆಯಾಗುವ ಮೂಲಕ ಜನರಲ್ಲಿ ಇನ್ನೂ ಆತಂಕವನ್ನು ಹೆಚ್ಚಿಸಿದೆ. ದೇಶದಲ್ಲಿ ಇಲ್ಲಿಯವರೆಗೆ 1,19,08,910, ಜನರಿಗೆ ಕೋವಿಡ್ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಸದ್ಯ ದೇಶದಲ್ಲಿ 4,52,647 ಸಕ್ರೀಯ ಕೋವಿಡ್ ಪ್ರಕರಣಗಳು ಇದ್ದು, 1,12,95,023 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಭಯಂಕರ ಸುದ್ದಿ ಏನೆಂದರೆ ಕೋವಿಡ್ ಸೋಂಕು ತಗುಲಿ ಸತ್ತವರ ಸಂಖ್ಯೆ 1,61,240ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆಯಲ್ಲಿ ಕಳೆದ 24 ಗಂಟೆಯಲ್ಲಿಯೇ 291 ಜನ ಸಾವನ್ನಪ್ಪಿದ್ದಾರೆ.
ಇದೀಗ ಕೋವಿಡ್ ಲಿಸಿಕೆ ವಿತರಣೆ ಪ್ರಮಾಣ ಕೂಡ ಹೆಚ್ಚಾಗಿದ್ದು, ಇಲ್ಲಿಯವರೆಗೆ 5.8 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ದ್ವಿಗುಣವಾಗುತ್ತಿದೆ. ಫೆಬ್ರವರಿ ಮಧ್ಯದಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೂ ಶುಕ್ರವಾರದ ವರದಿ ಪ್ರಕಾರ ಮಹಾರಾಷ್ಟ್ರ ಒಂದರಲ್ಲೇ ಬರೋಬ್ಬರಿ 36,902 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿಯೇ ಮಹಾರಾಷ್ಟ್ರ ಸರ್ಕಾರ ಭಾನುವಾರ(ಮಾ.28)ರಿಂದ ರಾತ್ರಿ ಕರ್ಫ್ಯು ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.