ಕೋಟಿಗೊಬ್ಬ-3 ತೆಲುಗಿನಲ್ಲಿ ರಿಲೀಸ್
Team Udayavani, Mar 27, 2021, 2:10 PM IST
ಸುದೀಪ್ ಅಭಿನಯದ “ಕೋಟಿಗೊಬ್ಬ-3′ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್ ಕೊನೆಯಲ್ಲಿ ತೆರೆಗೆ ತರಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈಗ ಚಿತ್ರ ತಂಡದಿಂದ ಒಂದು ಸುದ್ದಿ ಹೊರಬಂದಿದೆ. ಅದು ಚಿತ್ರದ ತೆಲುಗು ಬಿಡುಗಡೆಯ ಕುರಿತಾಗಿ.
ಹೌದು, “ಕೋಟಿಗೊಬ್ಬ-3′ ಈಗ ತೆಲುಗಿನಲ್ಲೂ ತೆರೆ ಕಾಣುತ್ತಿದೆ. ಆರಂಭದಲ್ಲಿ ಚಿತ್ರ ತಂಡ ಕೇವಲ ಕನ್ನಡದಲ್ಲಷ್ಟೇ ಬಿಡುಗಡೆ ಮಾಡಲು ಯೋಚಿಸಿತ್ತು. ಆದರೆ, ಈಗ ತೆಲುಗಿನ ನಿರ್ಮಾಪಕರು ಬಂದು ಚಿತ್ರದ ತೆಲುಗು ಬಿಡುಗಡೆಯ ಸಂಪೂರ್ಣ ಹಕ್ಕನ್ನು ಪಡೆದಿದ್ದು. ಅಲ್ಲಿ “ಕೆ3- ಕೋಟಿಕೊಕ್ಕುಡು’ ಎಂಬ ಟೈಟಲ್ ನಡಿ ತೆರೆ ಕಾಣಲಿದೆ. ಈ ಹಿಂದೆ “ಕೋಟಿಗೊಬ್ಬ-2′ ಚಿತ್ರ ತಮಿಳಿನಲ್ಲಿ “ಮುಡಿಂಜ ಇವನ ಪಿಡಿ’ ಎಂಬ ಟೈಟಲ್ ನಡಿ ಬಿಡುಗಡೆಯಾಗಿತ್ತು. ಈಗ “ಕೋಟಿಗೊಬ್ಬ-3′ ತೆಲುಗು ಸರದಿ.
ಇದನ್ನೂ ಓದಿ:ಚಿತ್ರ ವಿಮರ್ಶೆ: ಆ್ಯಕ್ಷನ್ ಅಬ್ಬರದಲ್ಲಿ ರಣ ಕಹಳೆ
ಸೂರಪ್ಪ ಬಾಬು ನಿರ್ಮಾ ಣದ ಈ ಚಿತ್ರವನ್ನು ಶಿವ ಕಾರ್ತಿಕ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತವಿದೆ. ಇನ್ನು ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, “ಕೋಟಿಗೊಬ್ಬ-3′ ಚಿತ್ರದ ಆಡಿಯೊ ಬಿಡುಗಡೆ ಮತ್ತು ಪ್ರಿ-ರಿಲೀಸ್ ಕಾರ್ಯಕ್ರಮವನ್ನು ಕೋಟೆನಾಡು ಚಿತ್ರದುರ್ಗದಲ್ಲಿ ಆಯೋಜಿಸುವ ಯೋಚನೆಯಲ್ಲಿದೆ.
ಸದ್ಯ ರಾಜ್ಯದಲ್ಲಿ ಕೋವಿಡ್ ಎರಡನೇ ಹಂತದ ಅಲೆಯ ಆತಂಕ ಆವರಿಸಿರುವುದರಿಂದ, ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕಾರ್ಯಕ್ರಮದ ಯೋಜನೆ ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ ಏಪ್ರಿಲ್ 20 ರಂದು ಈ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಚಿತ್ರತಂಡ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.