ಕೃಷಿ ಕಾಲೇಜು ಮಂಜೂರಿಗೆ ಕ್ರಮ


Team Udayavani, Mar 27, 2021, 7:23 PM IST

mghjhjh

ಹೊನ್ನಾಳಿ: ಹಿರೇಕಲ್ಮಮಠದ ಶ್ರೀ ಚನ್ನಪ್ಪಸ್ವಾಮಿ ವಿದ್ಯಾ ಸಂಸ್ಥೆ ವತಿಯಿಂದ ಕೃಷಿ ಕಾಲೇಜು ಆರಂಭಿಸಬೇಕೆಂಬುದು ಶ್ರೀಗಳ ಆಸೆಯಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಲಾಗಿದೆ. ಈಗಾಗಲೇ ಸರ್ಕಾರದಿಂದ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯಕ್ಕೆ ಈ ಬಗ್ಗೆ ಮಾಹಿತಿ ಕಳುಹಿಸಿಕೊಟ್ಟಿದ್ದು ಕೆಲ ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದ್ದು ಆದಷ್ಟು ಬೇಗ ಕೃಷಿ ಕಾಲೇಜು ಮಂಜೂರು ಮಾಡಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭರವಸೆ ನೀಡಿದರು.

ಒಡೆಯರ್‌ ಮೃತ್ಯುಂಜಯ ಶಿವಾಚಾರ್ಯ ಮಹಾಸ್ವಾಮಿಗಳ 51ನೇ ವಾರ್ಷಿಕ ಪುಣ್ಯರಾಧನೆ ಹಾಗೂ ಒಡೆಯರ್‌ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ 6ನೇ ಪುಣ್ಯಸ್ಮರಣೆ ನಿಮಿತ್ತ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ನವೋದ್ಯಮ ಕಾರ್ಯಾಗಾರ, 2021 ದತ್ತಿ ಉಪನ್ಯಾಸ ಹಾಗೂ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಈಗಾಗಲೇ ಹಿರೇಕಲ್ಮಠದ ಅಭಿವೃದ್ಧಿಗೆ ಒಂದು ಕೋಟಿ ಹಣ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲಿ ಮತ್ತಷ್ಟು ಅನುದಾನ ಬಿಡುಗಡೆ ಮಾಡಿಸುವುದಾಗಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ರೂ.2.70 ಲಕ್ಷ ಮಂಜೂರು ಮಾಡಿದ್ದಾರೆ. ಇದೊಂದು ದೊಡ್ಡ ಮೊತ್ತ ಎಂದ ಅವರು, ಹೊಟ್ಯಾಪುರ ಮಠ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದಾರೆ ಎಂದರು.

ಕಳೆದ ವರ್ಷ ಐತಿಹಾಸಿಕ ಕೃಷಿ ಮೇಳವನ್ನು ಹೊನ್ನಾಳಿಯಲ್ಲಿ ಮಾಡಿದ್ದು ಪಂಚರಾಜ್ಯಗಳ ಕೃಷಿ ಮೇಳವನ್ನು ಮಾಡಬೇಕೆಂದು ಗುರುಗಳ ಅಪೇಕ್ಷೆ ಇದೆ. ಕೊರೊನಾದಿಂದಾಗಿ ಈ ಬಾರಿ ಕೃಷಿ ಮೇಳ ಮಾಡುವುದು ಬೇಡ ಎಂದು ಮುಖ್ಯಮಂತ್ರಿಗಳು ಹೇಳಿದ್ದು, ಮುಂದಿನ ವರ್ಷ ಕೋವಿಡ್‌ನಿಂದ ಮುಕ್ತರಾಗಿ ಕೃಷಿ ಮೇಳದ ಅತ್ಯಂತ ದೊಡ್ಡ ಕಾರ್ಯಕ್ರಮ ಮಾಡಬೇಕಾಗಿದೆ ಎಂದರು.

ಸಂಸದ ಜಿ.ಎಂ.ಸಿದ್ದೇಶ್ವರ್‌ ಮಾತನಾಡಿ, ಶ್ರೀ ಮಠವು ಜ್ಞಾನ ದಾಸೋಹದ ಜತೆಗೆ ಕಲೆ ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡುತ್ತಾ ಬರುತ್ತಿದೆ ಎಂದರು. ಪ್ರತಿವರ್ಷ ಮಠದಲ್ಲಿ ಸರಳ ವಿವಾಹ ಕಾರ್ಯಕ್ರಮ ಮಠದಲ್ಲಿ ಮಾಡುತ್ತಿದ್ದು, ಈ ಕಾರ್ಯಕ್ರಮದಲ್ಲಿ ಪ್ರತಿವರ್ಷ ಮಠದಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದರು. ಕೊರೊನಾ ಇರುವ ಕಾರಣ ಹೆಚ್ಚು ಜನ ಸೇರ ಬಾರದೆಂದು ಸರ್ಕಾರದ ಸುತ್ತೋಲೆ ಇರುವುದರಿಂದ ಸರಳವಾಗಿ ಕಾರ್ಯಕ್ರಮವನ್ನ ಮಠದಿಂದ ಮಾಡಲಾಗುತ್ತಿದೆ ಎಂದ ಸಂಸದರು, ಪ್ರತಿಯೊಬ್ಬರು ಮಾಸ್ಕ್ ಹಾಕಿಕೊಂಡು ಕೊರೊನಾದಿಂದ ದೂರವಿರಬೇಕು ಎಂದರು.

ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ, ರಾಂಪುರ ಮಠದ ಶಿವಕುಮಾರ ಹಾಲಸ್ವಾಮಿಗಳು, ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು. ಮಾಜಿ ಶಾಸಕ ಡಿ.ಜಿ.ಶಾಂತನಗೌಡ, ಚಂದ್ರಶೇಖರ ಶಿವಾಚಾರ್ಯ ಶ್ರೀ ಪ್ರಶಸ್ತಿಗೆ ಭಾಜನರಾದ ಎ.ಎಂ.ಹಾಲಪ್ಪಯ್ಯಶಾಸ್ತ್ರಿ, ಪಿಕಾರ್ಡ್‌ ಮಾಜಿ ಅಧ್ಯಕ್ಷ ಎಚ್‌.ಎಂ.ಗಂಗಾಧರಯ್ಯ ಮಾತನಾಡಿದರು. ಹವಳದ ಲಿಂಗರಾಜ್‌ ಇತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.