ಅಧ್ಯಕ್ಷರಾಗಿ ಗುರುರಾಜ ಎಸ್. ನಾಯಕ್ ಪುನರಾಯ್ಕೆ
Team Udayavani, Mar 28, 2021, 11:43 AM IST
ಮುಂಬಯಿ: ಮಾಟುಂಗ ಪೂರ್ವದ ಮುಂಬಯಿ ಕನ್ನಡ ಸಂಘದ ವಾರ್ಷಿಕ ಮಹಾಸಭೆಯು ಮಾ. 20ರಂದು ಸಂಘದ ವಾಚನಾಲಯದಲ್ಲಿ ಸಂಘದ ಅಧ್ಯಕ್ಷ ಗುರುರಾಜ ಎಸ್. ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಗೌರವ ಕಾರ್ಯದರ್ಶಿ ಸೋಮನಾಥ ಎಸ್. ಕರ್ಕೇರ ಕಳೆದ ವಾರ್ಷಿಕ ಮಹಾಸಭೆಯ ವರದಿ ವಾಚಿಸಿದರು. ಸಭೆಯಲ್ಲಿ 2019-2020ನೇ ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸರ್ವಾನುಮತದಿಂದ ಮಂಜೂರು ಮಾಡಲಾಯಿತು. 2020-2021ನೇ ಸಾಲಿಗೆ ಎಂ. ಎಂ ಕಿಸ್ತಿ ಆ್ಯಂಡ್ ಕಂಪೆನಿ ಸಿಎ ಇವರನ್ನು ಲೆಕ್ಕಪರಿಶೋಧಕರನ್ನಾಗಿ ನೇಮಿಸಲಾಯಿತು.
ಸಂಘವು ಈಗಿರುವ ಕಟ್ಟಡ ಜೂನ್‌ನಿಂದ ನವೀಕರಣವಾಗುತ್ತಿರುವುದರಿಂದ ಕಿರು ಸಭಾಗೃಹದ ಸಮಿತಿಯನ್ನು ರಚಿಸಬೇಕು ಎಂದು ಕಮಲಾಕ್ಷ ಸರಾಫ್ ಆಗ್ರಹಿಸಿದರು. ಇದಕ್ಕೆ ಸಭೆಯು ಅನುಮತಿ ನೀಡಿತು. ಸಭೆಯಲ್ಲಿ ಹಾಜರಿದ್ದ ನಾಗೇಶ್ ಕೆ. ಕುಂದರ್ ಅವರು ಉಪಯುಕ್ತ ಸಲಹೆ-ಸೂಚನೆ ನೀಡಿದರು. ಬಳಿಕ ಎರಡು ವರ್ಷಗಳ ಕಾಲಾವಧಿಗೆ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ಸಂಘದ ಅಧ್ಯಕ್ಷರಾಗಿ ಗುರುರಾಜ ಎಸ್. ನಾಯಕ್ ಅವರನ್ನು ಪುನರಾಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ| ಎಸ್. ಕೆ. ಭವಾನಿ, ಸೋಮನಾಥ ಎಸ್. ಕರ್ಕೇರ, ಕಮಲಾಕ್ಷ ಸರಾಫ್, ಸುಧಾಕರ ಸಿ. ಪೂಜಾರಿ, ನಾರಾಯಣ ರಾವ್, ಮಲ್ಲಿಕಾರ್ಜುನ ಬಡಿಗೇರ, ಎಸ್. ಕೆ. ಪದ್ಮನಾಭ, ಪ್ರಫುಲ್ಲಾ ರಾವ್, ಡಾ| ರಜನಿ ವಿ. ಪೈ, ನರ್ಮದಾ ಕಿಣಿ, ಶಾರದಾ ಅಂಬೆಸಂಗೆ, ಜಯಂತಿ ಸಿ. ರಾವ್, ಸುಗುಣಾ ಶೆಟ್ಟಿ, ಕವಿತಾ ಶ್ರದ್ಧಾ, ಸಂಧ್ಯಾ ಪ್ರಭು, ಪ್ರಭಾ ಸುವರ್ಣ ಅವರು ಆಯ್ಕೆಯಾದರು.
ವರದಿ ವರ್ಷದಲ್ಲಿ ಅಗಲಿದ ಸದಸ್ಯರಿಗೆ, ಹಿತೈಷಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್. ಕೆ. ಪದ್ಮನಾಭ ಪ್ರಾರ್ಥನೆಗೈದರು. ಕೋಶಾಧಿಕಾರಿ ಸುಧಾಕರ ಸಿ. ಪೂಜಾರಿ ವಂದಿಸಿದರು. ಸದಸ್ಯರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.