ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ
Team Udayavani, Mar 28, 2021, 1:38 PM IST
ಹರಿಯಾಣ : ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು, ಮೂವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಇಂದು ಮುಂಜಾನೆ 7.30ರ ಸಮಯದಲ್ಲಿ ಫ್ಲೈಓವರ್ ಕುಸಿದು ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಸುಮಾರು 9,000 ಕೋಟಿ ರೂ. ವೆಚ್ಚದಲ್ಲಿ 27.6 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. 2007 ರಲ್ಲಿ ಈ ಯೋಜನೆ ರೂಪಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರಲಿಲ್ಲ ಎಂದು ಯೋಜನಾ ನಿರ್ದೇಶಕ ನಿರ್ಮನ್ ಜಂಬುಲ್ಕರ್ ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೇಲ್ಸೇತುವೆ ಕುಸಿದುಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
An elevated portion of the under construction Dwarka Expressway in Gurgaon collapsed around 7.30 am this morning. NHAI officials say there were no fatalities in the incident. The reason for the collapse is yet to be determined. @IndianExpress pic.twitter.com/5NFXzEeQrz
— Sakshi Dayal (@sakshi_dayal) March 28, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.