ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೊಟೂರು
Team Udayavani, Mar 28, 2021, 2:54 PM IST
ಬೆಂಗಳೂರು: ರಂಗಭೂಮಿ ಕಲಾವಿದೆ ಚೈತ್ರಾ ಕೊಟೂರು ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಸ್ನೇಹಿತ ಉದ್ಯಮಿ ನಾಗಾರ್ಜುನ ಅವರ ಜತೆ ಹಸೆಮಣೆ ಏರಿದ್ದಾರೆ.
ಭಾನುವಾರ ಮುಂಜಾನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಚೈತ್ರಾ ಹಾಗೂ ನಾಗಾರ್ಜುನ ಸತಿಪತಿಗಳಾಗಿದ್ದಾರೆ.
ಚೈತ್ರಾ ಕೊಟೂರು ಹಾಗೂ ನಾಗಾರ್ಜುನ ಒಂದು ವರ್ಷದ ಹಿಂದೆ ಪರಿಚಯವಾಗಿದ್ದರು. ಇವರಿಬ್ಬರ ನಡುವೆ ಮೊಳಕೆಯೊಡೆದ ಸ್ನೇಹ, ನಂತರ ಪ್ರೀತಿಯಾಗಿ ಪರಿವರ್ತನೆಗೊಂಡಿತು. ಇದೀಗ ಈ ಜೋಡಿ ಗುರು-ಹಿರಿಯರ ಆಶೀರ್ವಾದದಿಂದ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದಾರೆ.
ಇನ್ನು ಚೈತ್ರಾ ಕನ್ನಡದ ಬಿಗ್ ಬಾಸ್ ಸೀಸನ್ 7 ರ ಸ್ಪರ್ಧಿಯಾಗಿದ್ದರು. ಬರಹಗಾರ್ತಿ ಹಾಗೂ ಕಲಾವಿದೆಯಾಗಿಯೂ ಹೆಸರು ಮಾಡಿದ್ದಾರೆ. ಇವರು ಹರಿಪ್ರಿಯಾ ಅವರ ‘ಸೂಜಿದಾರ’ ಚಿತ್ರದಲ್ಲಿ ಗಮನ ಸೆಳೆಯುವ ಪಾತ್ರ ಮಾಡಿದ್ದರು. ಇತ್ತೀಚೆಗೆ ಆಲ್ಬಂ ಹಾಡನ್ನು ಬರೆದು, ಸಂಗೀತ ನಿರ್ದೇಶನ ಮಾಡಿ ಅದರಲ್ಲಿ ನಟಿಸುವ ಮೂಲಕ ಕೂಡ ಚೈತ್ರಾ ಕೊಟೂರು ಸುದ್ದಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.