ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಮಾರಾಟ ಯತ್ನ : ಆರೋಪಿ ಬಂಧನ
Team Udayavani, Mar 28, 2021, 7:40 PM IST
ಮಡಿಕೇರಿ : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಪೊಲೀಸ್ ಸಿಐಡಿ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.
ಮೂಲತಃ ತಮಿಳುನಾಡಿನ ಕೀರನಿಪಟ್ಟಿ ಇಲಯತಗುಡಿ ತಿರುಪಾತೂರು ನಿವಾಸಿ, ಮಾಲ್ದಾರೆಯಲ್ಲಿ ವಾಸವಿರುವ ಪಳನಿಯಪ್ಪ ಅಲಿಯಾಸ್ ಅಂಡೋವನ್(32) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ ಒಂದು ಜೀವಂತ ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯಲಾಗಿದೆ.
ಭಾನುವಾರ ಮಡಿಕೇರಿ ಅಶೋಕಪುರ ರಸ್ತೆಯ ಮೂಲಕ ಭಾರತೀಯ ವಿದ್ಯಾಭವನಕ್ಕೆ ತೆರಳುವ ರಸ್ತೆಯಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಗಸ್ತು ನಡೆಸುತ್ತಿರುವ ಸಂದರ್ಭ ಶಂಕಿತ ವ್ಯಕ್ತಿಯನ್ನು ವಿಚಾರಣೆ ನಡೆಸಿದಾಗ ನಕ್ಷತ್ರ ಆಮೆ ಮಾರಾಟ ಮಾಡಲು ಹೊಂಚು ಹಾಕುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಮಾಲು ಸಹಿತ ಸ್ಥಳದಲ್ಲೇ ಬಂಧಿಸಿದ ಪೊಲೀಸ್ ಸಿಐಡಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಅಳಿವಿನ ಅಂಚಿನಲ್ಲಿರುವ ಆಮೆಯನ್ನು ರಕ್ಷಿಸಿದ್ದಾರೆ. ಆರೋಪಿಯ ವಿರುದ್ದ 1972 ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 9, 39, 48(ಎ), 50 ಮತ್ತು 51ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಕ್ಷಿಸಲಾದ ನಕ್ಷತ್ರ ಆಮೆಯನ್ನು ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ದುರಸ್ತಿ ಭಾಗ್ಯ ಕಾಣದ ಕೋಣಿ- ಕೋಟೇಶ್ವರ ರಸ್ತೆ : ಅಲ್ಲಲ್ಲಿ ಹೊಂಡ- ಗುಂಡಿ
ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಉಪ ನಿರೀಕ್ಷಕ ಎಂ.ಡಿ ಅಪ್ಪಾಜಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ್, ರಮೇಶ್ ಅವರುಗಳು ಕಾರ್ಯಾಚರಣೆ ನಡೆಸಿದ್ದರು.
13 ನಕ್ಷತ್ರಗಳಿರುವ ಆಮೆ
ಭಾನುವಾರ ಮಡಿಕೇರಿ ಪೊಲೀಸ್ ಸಿಐಡಿ ಅರಣ್ಯ ಸಂಚಾರ ದಳದ ಸಿಬ್ಬಂದಿಗಳು ರಕ್ಷಿಸಿದ ಆಮೆಯ ಚಿಪ್ಪುವಿನಲ್ಲಿ 13 ನಕ್ಷತ್ರಗಳಿದ್ದು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಆಮೆ ಕಳ್ಳ ಸಾಗಾಣಿಕೆ ಮತ್ತು ಮಾರಾಟ ಪ್ರಕರಣ ಪತ್ತೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದಕ್ಕೂ ಮುನ್ನ ನಕ್ಷತ್ರ ಆಮೆ ಕಳ್ಳಸಾಗಾಟ ಮತ್ತು ಮಾರಾಟ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದ್ದರೂ ಕೂಡ ಅದರಲ್ಲಿ 13 ನಕ್ಷತ್ರಗಳು ಇರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರ ಬೆಲೆ ಕಾಳಸಂತೆಯಲ್ಲಿ 25 ಲಕ್ಷ ರೂ.ಗಳಿಗೂ ಮೇಲ್ಪಟ್ಟಿದೆ ಎಂದು ಅರಣ್ಯ ಸಂಚಾರಿ ದಳದ ಪೊಲೀಸರು ತಿಳಿಸಿದ್ದಾರೆ. ಸಾಮಾನ್ಯವಾಗಿ ಈ ನಕ್ಷತ್ರ ಆಮೆಯನ್ನು ವಾಸ್ತು ವಿಚಾರಕ್ಕಾಗಿ ಖರೀದಿಸಲಾಗುತ್ತದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.