ಹುಟ್ಟುಹಬ್ಬಕ್ಕೆ ಹೋದವರು ಮಸಣ ಸೇರಿದರು..: ಕಾರು ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು
Team Udayavani, Mar 29, 2021, 12:23 PM IST
ಬಾಗಲಕೋಟೆ: ಅವರು ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆಂದು ಹೋಗಿದ್ದವರು. ಪಾರ್ಟಿ ಮುಗಿಸಿ ತಡರಾತ್ರಿ ಮರಳುತ್ತಿದ್ದರು. ಈ ವೇಳೆ ನಡೆದ ಅಪಘಾತದಿಂದ ನಾಲ್ವರು ಸ್ನೇಹಿತರು ಪ್ರಾಣ ಕಳೆದುಕೊಂಡಿದ್ದಾರೆ!
ಜಿಲ್ಲೆಯ ಹುನಗುಂದ ಬಳಿ ನಡೆದ ಭೀಕರ ಕಾರು ಅಪಘಾತ ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದ್ದು, ಬರ್ತ್ ಡೇ ಗೆಂದು ಹೋದ ನಾಲ್ವರು ಮಸಣ ಸೇರಿದ್ದು,ಕಾರು ಚಾಲಕನ ಸ್ಥಿತಿ ತೀವ್ರ ಗಂಭೀರವಾಗಿದೆ.
ಇದನ್ನೂ ಓದಿ:ಕುಡಿದು ಕಾರು ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದ ಪಿಡಬ್ಲ್ಯೂಡಿ ಎಇಇ: ಪಾದಚಾರಿ ಸಾವು
ಬೇವಿನಮಟ್ಟಿ ಕ್ರಾಸ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಚಂದ್ರಶೇಖರ ಬುಟ್ಟಾ (22), ನವೀನ್ ಸಾಕಾ ( 20), ಚೆನ್ನಬಸವ ಅಂಜಿ (22), ಬಸವರಾಜ ಭಂಡಾರಿ (33) ಮೃತಪಟ್ಟಿದ್ದಾರೆ. ಇವರೆಲ್ಲರೂ ಇಳಕಲ್ ದವರಾಗಿದ್ದಾರೆ. ಕಾರು ಚಾಲಕ ವಿಜಯ್ ಕುಮಾರ್ ಬಂಡಿ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಇಳಕಲ್ ನಿಂದ ಗುಳೇದಗುಡ್ಡಕ್ಕೆ ಬರ್ತ್ ಡೇ ಆಚರಣೆಗೆ ಹೋಗಿದ್ದರು. ಅಲ್ಲಿಂದ ಹಿಂದೆ ಬರುವಾಗ ಕುಡಿದ ಮತ್ತಿನಲ್ಲಿ ನಿಂತಿದ್ದ ಲಾರಿಗೆ ಕಾರು ಚಾಲಕ ಢಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಎಚ್ಚರ ವಹಿಸಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 68,020 ಕೋವಿಡ್ ಪ್ರಕರಣ ಪತ್ತೆ
ಘಟನೆಯಲ್ಲಿ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.