ಶರಣು ಸಲಗರ ಗೆಲುವು ನಿಶ್ಚಿತ : ಚವ್ಹಾಣ

Team Udayavani, Mar 29, 2021, 8:44 PM IST

ಜಹಗ್ದಸ

ಬೀದರ: ಬಿಜೆಪಿಯಿಂದ ಜಿಲ್ಲೆಯಲ್ಲಿ ನಾನೊಬ್ಬನೇ ಶಾಸಕನಿದ್ದೇನೆ. ಮುಂದೆ ಶರಣು ಸಲಗರ ಅವರು ಗೆದ್ದು, ನನ್ನ ಜತೆ ವಿಧಾನಸೌಧಕ್ಕೆ ಬರುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಪ ಚುನಾವಣೆಯಲ್ಲಿ ಶರಣು ಸಲಗರ ಅವರನ್ನು ಗೆದ್ದೇ ಗೆಲ್ಲಿಸುತ್ತೇವೆ ಎಂಬ ವಿಶ್ವಾಸವನ್ನು ಪಕ್ಷದ ಪ್ರಮುಖರು ಹಾಗೂ ಸಿಎಂಗೆ ನೀಡಿದ್ದೇನೆ. ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಮಾಜಿ ಶಾಸಕ ಅಮರನಾಥ ಪಾಟೀಲ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್‌ ಠಾಕೂರ್‌, ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್‌ ಅವರು ಉತ್ತಮ ಅನುಭವ ಹೊಂದಿದ್ದಾರೆ.

ಇವರೆಲ್ಲರ ಸಹಕಾರದಿಂದ ಕಲ್ಯಾಣದಲ್ಲಿ ಕಮಲ ಅರಳುವುದು ಖಚಿತ ಎಂದು ಹೇಳಿದ್ದಾರೆ. ಪಕ್ಷದ ನಿರ್ಣಯ ಗೌರವಿಸಿ: ಟಿಕೆಟ್‌ ವಂಚಿತ ನಾಯಕರು ನಿರಾಶರಾಗಬಾರದು. ಭಿನ್ನಾಭಿಪ್ರಾಯಗಳನ್ನೆಲ್ಲಾ ಮರೆತು ಪಕ್ಷದ ನಿರ್ಣಯಕ್ಕೆ ಗೌರವ ಕೊಡಬೇಕು. ಪಕ್ಷದ ವರಿಷ್ಠರು ಆಯ್ಕೆ ಮಾಡಿರುವ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸಿದ್ಧರಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳು ಸಹ ಇದೇ ರೀತಿ ಕೆಲಸ ಮಾಡಬೇಕು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾವಣೆಯ ಉಸ್ತುವಾರಿ ವಹಿಸಲಾಗಿದೆ. ಅದರಂತೆ ಸಂಸದ ಭಗವಂತ ಖೂಬಾ ಹಾಗೂ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರ ಜತೆಗೂಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಅನೇಕ ಜನಪರ ಕೆಲಸಗಳನ್ನು ಮಾಡುತ್ತಿವೆ.

ಬರುವ ದಿನಗಳಲ್ಲಿ ಬಸವಕಲ್ಯಾಣದಲ್ಲಿ ಅಭಿವೃದ್ಧಿ ಕೆಲಸಗಳು ಚುರುಕಾಗಿ ನಡೆಯಲಿವೆ ಎಂದು ತಿಳಿಸಿರುವ ಸಚಿವರು, ಸಲಗರ ಅವರು ಕೊರೊನಾ ಸಂದರ್ಭದಲ್ಲಿ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ, ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡಿದ್ದಾರೆ. ಕಲ್ಯಾಣದ ಜನತೆ ಅಭಿವೃದ್ಧಿ ಪರ ಚಿಂತನೆ ಹೊಂದಿರುವ ಶರಣು ಸಲಗರ ಅವರ ಕೈ ಹಿಡಿಯಲಿದ್ದಾರೆ. ಅಂದಾಜು 25,000 ಮತಗಳ ಅಂತರದಿಂದ ಗೆಲುವು ಸಾಧಿ ಸಲಿದ್ದಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.