ಮುದ್ರಣ ಮಾಧ್ಯಮದ ಸಂಕಷ್ಟ ದೂರವಾಗಲಿ: ರಾಜ್ಯ ಬಿಜೆಪಿ ವಕ್ತಾರ ಜಗ್ಗೇಶ್  

ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ

Team Udayavani, Mar 29, 2021, 9:08 PM IST

Untitled-10

ಚಿತ್ರದುರ್ಗ: ತಲೆ ಬುಡವಿಲ್ಲದ ಸಾಮಾಜಿಕ ಜಾಲತಾಣದ ಮೇಲೆ ಅವಲಂಬಿತರಾಗುವ ಬದಲು ಇಂದಿನ ತಾಂತ್ರಿಕ ಯುಗದಲ್ಲೂ ಮುದ್ರಣ ಮಾಧ್ಯಮ ನಂಬಿಕೆ ಉಳಿಸಿಕೊಂಡಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ಕನಿಷ್ಟ ಎರಡು ಪತ್ರಿಕೆಗಳನ್ನಾದರೂ ಓದುವ ಅಭ್ಯಾಸ ಮಾಡಿಕೊಳ್ಳಿ ಎಂದು ರಾಜ್ಯ ಬಿಜೆಪಿ ವಕ್ತಾರ, ಮಾಜಿ ಶಾಸಕ, ನಟ ಜಗ್ಗೇಶ್‌ ಕರೆ ನೀಡಿದರು.

ಬಿಜೆಪಿಯ ದಾವಣಗೆರೆ ವಿಭಾಗದ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ತಾಲ್ಲೂಕು ಬಿಜೆಪಿ ಮಾಧ್ಯಮ ಸಂಚಾಲಕರು ಹಾಗೂ ಸಹ ಸಂಚಾಲಕರಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ಮಾಧ್ಯಮ ಮಂಥನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಕನಸುಗಳು ಸಾಕಾರಗೊಳ್ಳಲು ಮಾಧ್ಯಮ ಅತಿ ಮುಖ್ಯ. ಶರವೇಗದಲ್ಲಿ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಸಾಮಾಜಿಕ ಜಾಲತಾಣದಿಂದ ಮುದ್ರಣ ಮಾಧ್ಯಮ ಸಂಕಷ್ಟಕ್ಕೊಳಗಾಗಿದೆ. ಆದರೆ ತನ್ನ ಶಕ್ತಿಯನ್ನು ಕಳೆದುಕೊಂಡಿಲ್ಲ. ಸಾಮಾಜಿಕ ಜಾಲತಾಣವನ್ನು ಸರಿಯಾಗಿ ಬಳಿಸಿಕೊಂಡಿರುವುದು ನಮ್ಮ ಪ್ರಧಾನಿ ನರೇಂದ್ರ ಮೋದಿ ಮಾತ್ರ. ಇದು ಸ್ಪರ್ಧಾತ್ಮಕ ಯುಗ, ಆದರೆ ಯಾವ ಕಾರಣಕ್ಕೂ ಉದ್ವೇಗ, ದ್ವೇಷದ ಮನೋಭಾವ ಬೇಡ. ಯಾರನ್ನೂ ಉತ್ಪ್ರೆಕ್ಷೆ, ಅಣಕ ಮಾಡಬಾರದು. ಬಿಜೆಪಿ ಶ್ರದ್ಧೆಯಿಂದ ಕಟ್ಟಿದ ಪಕ್ಷ. ಇಲ್ಲಿ ಕಲಿಯುವ ಆಸಕ್ತಿ ಮತ್ತು ಶ್ರದ್ಧೆ ಇದ್ದರೆ ಜ್ಞಾನ ಪ್ರಾಪ್ತಿಯಾಗುತ್ತದೆ ಎಂದರು.

ನಡೆ-ನುಡಿ ಸರಿಯಿದ್ದರೆ ದೇವರು ಕೈಹಿಡಿದು ನಡೆಸುತ್ತಾನೆ. ಆರಂಭದಲ್ಲಿ ಏನೂ ಅರಿವಿಲ್ಲದೆ ಕಾಂಗ್ರೆಸ್‌ ಸೇರಿ ಇದ್ದ ಎಲ್ಲವನ್ನೂ ಕಳೆದುಕೊಂಡು ಕೊನೆಗೆ ಮಂತ್ರಾಲಯದ ರಾಘವೇಂದ್ರಸ್ವಾಮಿ ಸನ್ನಿ  ಧಿಗೆ ಹೋಗಿ ಕಣ್ಣೀರು ಸುರಿಸಿದೆ. ಅಲ್ಲಿಂದ ಲಕ್ಷಾಂತರ ಅಭಿಮಾನಿಗಳು ನನ್ನನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಸ್ಪರ್ಧಿಸುವಂತೆ ಒತ್ತಾಯಿಸಿ ಗೆಲ್ಲಿಸಿದರು ಎಂದು ಸ್ಮರಿಸಿಕೊಂಡರು.

ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಮಾಧ್ಯಮ ಮತ್ತು ರಾಜಕೀಯದ ನಡುವೆ ಸಂಘರ್ಷ-ಸಾಮರಸ್ಯದ ಸಂಬಂಧವಿದೆ. ತಾಜಾ ಸುದ್ದಿಗಳನ್ನು ಕೊಡುವುದು ಅನಿವಾರ್ಯ. ರಾಜಕಾರಣಿಗಳು ಒಳ್ಳೆಯದು ಮಾಡಿದಾಗ ಬೆನ್ನು ತಟ್ಟುವುದು, ಕೆಟ್ಟದ್ದನ್ನು ಮಾಡಿದಾಗ ಎಚ್ಚರಿಸುವ ಜವಾಬ್ದಾರಿ ಮಾಧ್ಯಮದ ಮೇಲಿದೆ ಎಂದು ತಿಳಿಸಿದರು.

ಹಾಲಾಹಲದ ರಾಜಕಾರಣದಲ್ಲಿ ಸತ್ಯವನ್ನೇ ತೋರಿಸಬೇಕು. ಬಿಜೆಪಿ ನಿಮ್ಮನ್ನು ಸೈನಿಕರಂತೆ ಸಿದ್ಧಗೊಳಿಸುತ್ತಿದೆ. ಪಕ್ಷದ ವಾಗ್ಧಾನ ಜಾರಿಗೊಳಿಸಬೇಕಾದರೆ ಮಾಧ್ಯಮ ಸಂಚಾಲಕರು, ಸಹ ಸಂಚಾಲಕರು ಮಾಹಿತಿ ವಿನಿಮಯ ಮಾಡಿಕೊಳ್ಳುವಲ್ಲಿ ಮಾಧ್ಯಮದವರೊಡನೆ ಆರೋಗ್ಯಪೂರ್ಣ ಸಂಬಂಧ ಇಟ್ಟುಕೊಂಡು ಸಮಾಜಮುಖೀಯಾಗಿ ಕೆಲಸ ಮಾಡಬೇಕು ಎಂದರು.

ಆಳುವ ಸರ್ಕಾರಗಳು ಮದಗಜದಂತೆ. ಕಾಲ ಕಾಲಕ್ಕೆ ಅಂಕುಶ ಹಾಕಿ ಪಳಗಿಸುವ ಕೆಲಸ ಮಾಧ್ಯಮ ಮಾಡಬೇಕಿದೆ. ಪ್ರತಿಭೆ, ಬದ್ಧತೆ ಇದ್ದರೆ ಎಂತಹ ಕಠಿಣ ಹಾದಿ ಇದ್ದರೂ ಯಶಸ್ಸಿನ ತುತ್ತ ತುದಿ ಏರಬಹುದು ಎಂದು ತಿಳಿಸಿದರು. ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್‌, ರಾಜ್ಯ ಮಾಧ್ಯಮ ಸಂಚಾಲಕರಾದ ಅವಿನಾಶ್‌, ಕೆಂಡೋಜಿ, ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌, ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ ಮತ್ತಿತರರು ಭಾಗವಹಿಸಿದ್ದರು. ಡಿ.ಒ. ಮುರಾರ್ಜಿ ಪ್ರಾರ್ಥಿಸಿದರು. ಕೊಪ್ಪಳ ನಾಗರಾಜ್‌ ಸ್ವಾಗತಿಸಿದರು. ವಕ್ತಾರ ನಾಗರಾಜ್‌ ಬೇದ್ರೆ ನಿರೂಪಿಸಿದರು.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.