ಪ್ರತಾಪಗೌಡ ಪಾಟೀಲರನ್ನು ಬೆಂಬಲಿಸಿ
Team Udayavani, Mar 30, 2021, 7:50 PM IST
ಬಳಗಾನೂರು: ಏ 17 ರಂದು ನಡೆಯುವ ಮಸ್ಕಿ ಕ್ಷೇತ್ರದ ಉಪಚುನಾವಣೆಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅ ಧಿಕಾರಕ್ಕೆ ಬರಲು ಕಾರಣೀಭೂತರಾದ ಸರಳ ವ್ಯಕ್ತಿತ್ವದ ಹಿರಿಯ ನಾಯಕರೆನಿಸಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರನ್ನು ಬೆಂಬಲಿಸಿ ಎಂದು ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗೂರು ಹೇಳಿದರು.
ಪಟ್ಟಣದ ಬಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಕೈಗೊಂಡ ಕೆಲಸ ಕಾರ್ಯಗಳು ಪ್ರತಾಪಗೌಡ ಪಾಟೀಲ್ ಅವರಿಗೆ ಶ್ರೀರಕ್ಷೇಯಾಗಿವೆ. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರೇ ಕೇವಲ ಪ್ರತಾಪಗೌಡ ಪಾಟೀಲ್ ಅವರ ಚುನಾವಣೆ ಅಲ್ಲ ಇದು, ಬೂತ್‌ಮಟ್ಟದಲ್ಲಿನ ಕಾರ್ಯಕರ್ತರ ನಡುವೆ ನಡೆವ ಚುನಾವಣೆ ಎಂದು ಪ್ರತಿಯೊಬ್ಬರು ತುಂಬ ಎಚ್ಚರಿಕೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಿಪಂ ಸದಸ್ಯ ಶಿವನಗೌಡ ಗೊರೇಬಾಳ ಮಾತನಾಡಿ, ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಕಾರ್ಯ ಪಕ್ಷದ ಗೌರವ ಮತ್ತು ಅಭ್ಯರ್ಥಿ ಗೆಲುವು ಸಾ ಧಿಸಲು ಪ್ರಮುಖವಾಗುತ್ತದೆ. ಈ ಹಿನ್ನೆಲೆಯಲ್ಲಿ ಬೂತ್‌ಮಟ್ಟದ ಕಾರ್ಯಕರ್ತರ ಸಲಹೆ, ಸಹಕಾರ ಅವಶ್ಯಕವಾಗಿದ್ದು, ಅವರ ಮಾರ್ಗದರ್ಶನದಲ್ಲಿ ನಾವು ಕಾರ್ಯಚಟುವಟಿಕೆಗಳಲ್ಲಿ ತೊಡಗುವುದಾಗಿ ತಿಳಿಸಿದರು. ಸಿಂಧನೂರು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಮಾತನಾಡಿ, ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕಾರ್ಯತಂತ್ರ ರೂಪಿಸುವ ಮೂಲಕ ಕ್ಷೇತ್ರದಲ್ಲಿ ಪಟ್ಟದಿಂದ ಬಿಜೆಪಿಗೆ ಗರಿಷ್ಠ ಮುನ್ನಡೆ ಮತಗಳ ಕೊಡುಗೆ ನೀಡುವಲ್ಲಿ ಭಾಗಿಯಾಗಿ ಕ್ಷೇತ್ರದ ಗಮನ ಸೆಳೆಯೋಣ ಎಂದರು.
ಶೇಖರಪ್ಪ ಮೇಟಿ, ವಿರೂಪಣ್ಣ ಗುತ್ತೇದಾರ, ಹಂಸರಾಜ, ಮೆಹಬೂಬಮಂತ್ರಿ, ಯಂಕಣ್ಣ ತಿಪ್ಪನಟ್ಟಿ, ಟಿ.ಹನುಮಂತಪ್ಪ, ಅಮರಯ್ಯಸ್ವಾಮಿ, ಬಿ.ತಿಕ್ಕಯ್ಯ, ಎಚ್.ಮಹಾಬಳೇಶ, ಸೇರಿ ಮುಖಂಡರು, ಬಿಜೆಪಿ ಬೆಂಬಲಿತ ಪಪಂ ಸದಸ್ಯರು, ಬಿಜೆಪಿ ಘಟಕದ ಪದಾಧಿ ಕಾರಿಗಳು ಕಾರ್ಯಕರ್ತರು ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.