ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ
Team Udayavani, Mar 30, 2021, 8:01 PM IST
ದೇವದುರ್ಗ : ಜೆಡಿಎಸ್ ವತಿಯಿಂದ ಏ.5ರಂದು ಸಿರವಾರ್ ಕ್ರಾಸ್ ಹತ್ತಿರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕಾಧ್ಯಕ್ಷ ಬುಡ್ಡನಗೌಡ ಪಾಟೀಲ್ ಜಾಗಟಲ್ ಹೇಳಿದರು.
ಪಟ್ಟಣದ ಪೊಲೀಸ್ ಕಾಲೋನಿಯಲ್ಲಿರುವ ಕರೆಮ್ಮ ಗೋಪಾಲಕೃಷ್ಣ ನಿವಾಸದಲ್ಲಿ ಸುಣದಕಲ್ ಗ್ರಾಮದ 40 ಜನರು ಕಾಂಗ್ರೆಸ್, ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊತ್ತದೊಡ್ಡಿ ಗ್ರಾಮದಲ್ಲಿ ಬರುವ 15ನೇ ಮುಖ್ಯಕಾಲುವೆ ನನೆಗುದಿಗೆ ಬಿದ್ದಿರುವ ಕಾಮಗಾರಿ ಆರಂಭಿಸಬೇಕು. ಕೆಲಸ ವಿಳಂಬವಾದರಿಂದ ಕೆಲ ಗ್ರಾಮಗಳಿಗೆ ನೀರು ಮುಟ್ಟುತ್ತಿಲ್ಲ. ಹೀಗಾಗಿ ರೈತರು ಪ್ರತಿವರ್ಷ ನಷ್ಟದಲ್ಲೇ ಬದುಕು ಸಾಗಿಸಬೇಕಾಗಿದೆ. ಕಾಮಗಾರಿ ಆರಂಭಿಸುವ ಕುರಿತು ಎನ್‌ಆರ್‌ಬಿಸಿ ಅಧಿಕಾರಿಗಳು ಸ್ಪಷ್ಟತೆ ಉತ್ತರ ನೀಡುತ್ತಿಲ್ಲ. ಸಮರ್ಪಕವಾಗಿ ಮಾಹಿತಿ ನೀಡದೇ ಇರುವ ಕಾರಣ ಹೋರಾಟ ಅನಿವಾರ್ಯ ಎಂದು ಹೇಳಿದರು.
ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಏ.20ವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು. ಈಭಾಗದ ಜನಪತ್ರಿನಿಧಿ ಗಳು ರೈತರ ಸಮಸ್ಯೆಗೆ ಕೂಡಲೇ ಸ್ಪಂದಿಸಬೇಕು ಎಂದು ಹೇಳಿದರು. ಕರೆಮ್ಮ ಗೋಪಾಲಕೃಷ್ಣ ಮಾತನಾಡಿ, ಕಾಂಗ್ರೆಸ್, ಬಿಜೆಪಿ ಪಕ್ಷದಲ್ಲಿ ಬೇಸತ್ತು ಪ್ರಾಮಾಣಿಕ ನಿಷ್ಠೆ ಜೆಡಿಎಸ್ ಪಕ್ಷಕ್ಕೆ ಜನರು ಸೇರ್ಪಯಾಗುತ್ತಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅಧಿ ಕಾರ ಅವ ಧಿಯಲ್ಲಿ ಬೇಸಿಗೆ ಅವ ಧಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲಾಯಿತು. ರೈತರ ಬೆಳೆದ ಬೆಳೆಗಳಿಗೆ ಏ.20ವರೆಗೆ ನೀರು ಹರಿಸುವಂತೆ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು. ಕೊನೆ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗದೇ ಕಾರಣ ಪ್ರತಿ ವರ್ಷ ಬೆಳೆ ನಷ್ಟದ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.