ವಿಷ್ಣುವರ್ಧನ್ ಓದಿದ ಶಾಲೆ ಉಳಿಸುವಂತೆ ಪ್ರಣೀತಾ ಮನವಿ
Team Udayavani, Mar 31, 2021, 8:30 AM IST
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ್ದ, ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಾಡೆಲ್ ಕನ್ನಡ ಹೈಸ್ಕೂಲ್ ಅನ್ನು ವಿದ್ಯಾರ್ಥಿಗಳಿಲ್ಲದ ಕಾರಣ ಆಡಳಿತ ಮಂಡಳಿ ಮುಚ್ಚಲು ನಿರ್ಧರಿಸಿದೆ.
ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ, ಕಳೆದ ಮೂರು ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಕೊರತೆ ಕಾರಣದಿಂದ, ಆಡಳಿತ ಮಂಡಳಿ ಶಾಲೆ ಮುಚ್ಚಲು ಮುಂದಾಗಿದೆ.
ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ ಮತ್ತು ಅತ್ಯಂತ ಪುರಾತನ ಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಈ ಶಾಲೆಯನ್ನು ಮುಚ್ಚುವ ನಿರ್ಧಾರಕ್ಕೆ ನಟಿ ಪ್ರಣಿತಾ ಸುಭಾಷ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಪ್ರಣೀತಾ, “ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ, ಹಾಗೆಯೇ ಡಾ. ವಿಷ್ಣುವರ್ಧನ್ ರವರು ಓದಿರುವ ಸಂಸ್ಥೆಯು ಮುಚ್ಚುತ್ತಿರುವುದು ನನಗೆ ಬೇಸರ ತಂದಿದೆ. ಈ ವಿಷಯದ ಬಗ್ಗೆ ರಾಜ್ಯ ಸರ್ಕಾರವು ಗಮನಹರಿಸಬೇಕೆಂದು ದಯಮಾಡಿ ಕೇಳಿಕೊಳ್ಳುತ್ತೇನೆ.
ಪ್ರಣಿತಾ ಫೌಂಡೇಶನ್ ವತಿಯಿಂದ ಸಾಧ್ಯವಾದಷ್ಟು ಸಹಾಯ ಮಾಡಲು ಸಿದ್ಧರಿದ್ದೇವೆ’ ಎಂದಿದ್ದಾರೆ. ಅಲ್ಲದೆ ಈ ಶಾಲೆಯನ್ನು ಉಳಿಸಿಕೊಳ್ಳುವಂತೆ ಪ್ರಣೀತಾ ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗೆ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.