ಸಿಡಿ ಪ್ರಕರಣದ ಕುರಿತು ಸರ್ಕಾರವನ್ನು ಟೀಕಿಸಲು ಕಾಂಗ್ರೆಸ್ ಅರ್ಹವಲ್ಲ – ಬಸವರಾಜ್ ಬೊಮ್ಮಾಯಿ
Team Udayavani, Mar 31, 2021, 1:26 PM IST
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆಯನ್ನು ಹಾಳು ಮಾಡಬೇಡಿ ಎಂದು ಹೇಳಿದರು.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆ ಕ್ರಮಬದ್ಧವಾಗಿ ಕಾನೂನು ಪ್ರಕಾರ ನ್ಯಾಯಸಮ್ಮತವಾಗಿ ನಡೆಯುತ್ತಿದೆ. ಇಂತ ಸಂದರ್ಭದಲ್ಲಿ ಪ್ರತಿಭಟನೆ, ಸಾಮಾಜಿಕ ಜಾಲತಾಣಗಳ ಮೂಲಕ ಇಲ್ಲಸಲ್ಲದ ಹೇಳಿಕೆಯನ್ನು ನೀಡಬೇಡಿ. ಅನಾವಶ್ಯಕವಾಗಿ ಮಾತನಾಡಿ ಪ್ರಕರಣದ ಗಾಂಭಿರ್ಯತೆಯನ್ನು ಹಾಳುಮಾಡಬೇಡಿ. ತನಿಖೆಯ ಪ್ರಗತಿಗೆ ಅಡ್ಡ ಪಡಿಸಬೇಡಿ ಎಂದು ಪ್ರತಿ ಪಕ್ಷಗಳಿಗೆ ವಿನಂತಿ ಮಾಡಿದರು.
ಕಾಂಗ್ರೆಸ್ ಗೆ ಎಲ್ಲಿದೆ ನೈತಿಕತೆ?
ಜಾರಕಿಹೊಳಿ ಪ್ರಕರಣದಲ್ಲಿ ನಮ್ಮನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನೈತಿಕ ಅಧಿಕಾರ ಎಲ್ಲಿದೆ? ಮಾಜಿ ಸಚಿವ ಹುಲ್ಲಪ್ಪ ಮೇಟಿ ಸಿಡಿ ಪ್ರಕರಣದಲ್ಲಿ ಇವರು ತನಿಖೆ ಮಾಡಿದ್ರಾ? ಯಾರ ವಿರುದ್ಧ ಆದರೂ ಎಫ್ಐಆರ್ ದಾಖಲು ಮಾಡಿದ್ರಾ? ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಆರೋಪಿಗೆ ಕ್ಲೀನ್ ಚಿಟ್ ಕೊಟ್ಟರು. ಒಂದು ಬಾರಿ ಯಾರನ್ನು ಕರೆದು ವಿಚಾರಣೆ ಮಾಡಲಿಲ್ಲ. ಸಿಡಿ ಮಾಡಿದವರನ್ನು ಕೂಡ ಕಂಡುಹಿಡಿಯಲಿಲ್ಲ. ಇದನ್ನೆಲ್ಲಾ ಮರೆತಿರುವ ಕಾಂಗ್ರೆಸ್ ಯಾವ ನೈತಿಕತೆಯಿಂದ ನಮ್ಮ ಎಸ್ಐಟಿ ತನಿಖೆಯನ್ನು ಪ್ರಶ್ನಿಸುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ:ನಟ ವಿಷ್ಣು ಓದಿದ ಕನ್ನಡ ಶಾಲೆ ಉಳಿಸುವಂತೆ ಸರ್ಕಾರಕ್ಕೆ ನಟ ರಿಷಭ್ ಶೆಟ್ಟಿ ಮನವಿ
ಎಸ್ಐಟಿ ತನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ ಪ್ರಕಾರ ತನಿಖೆ ಮಾಡಬೇಕಾಗುತ್ತದೆ. ಎಲ್ಲ ಅಂಶಗಳನ್ನು ಕೋರ್ಟ್ ಆಫ್ ಲಾ ದಲ್ಲಿ ನಾವು ಸಾಬೀತು ಮಾಡಬೇಕಾಗುತ್ತದೆ. ಹೀಗಾಗಿ ಈ ಪ್ರಕರಣದಲ್ಲಿ ಯಾರೂ ಕೂಡಾ ಮಧ್ಯಪ್ರವೇಶ ಮಾಡಬಾರದು. ಆ ಕಾರಣಕ್ಕಾಗಿ ನಾನು ಕೂಡ ತನಿಖೆ ಕುರಿತು ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಎಸ್ ಐ ಟಿ ತನಿಖಾ ತಂಡ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಎಂತಹ ಅಡೆತಡೆಗಳಿಗೂ ಮಣೆ ಹಾಕುವುದಿಲ್ಲ. ಸತ್ಯ ಸಂಗತಿ ಹೊರಬರಬೇಕಾದರೆ ಎಸ್ಐಟಿ ತನಿಖೆ ಅಗತ್ಯ. ಅದಕ್ಕಾಗಿಯೇ ತನಿಖೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.