ಪುಟ್ಟ ಕಂದಮ್ಮನ ಪ್ರಾಣ ಉಳಿಸಿದ ನಟ ಮಹೇಶ್ ಬಾಬು
ಹೃದಯ ಸಂಬಂಧಿ ತೊಂದರೆಗೆ ಒಳಗಾಗಿದ್ದ ಒಂದು ತಿಂಗಳ ಮಗುವಿಗೆ ಮಹೇಶ್ ಬಾಬು ಕುಟುಂಬ ನೆರವಾಗಿತ್ತು.
Team Udayavani, Mar 31, 2021, 3:13 PM IST
ಹೈದರಾಬಾದ್ : ಟಾಲಿವುಡ್ ನಟ ಮಹೇಶ್ ಬಾಬು ರೀಲ್ ಅಲ್ಲ ರಿಯಲ್ ಲೈಫ್‍ಲ್ಲೂ ಹೀರೋ ಅನ್ನೋದು ಮತ್ತೊಂದು ಬಾರಿ ಸಾಬೀತು ಆಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮನಿಗೆ ಮರುಜನ್ಮ ನೀಡುವ ಮೂಲಕ ‘ಮಹರ್ಷಿ’ ಬಡವರ ಪಾಲಿಗೆ ಆಪ್ತರಕ್ಷಕರಾಗಿದ್ದಾರೆ.
ಸಿನಿಮಾಗಳಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲಿಯೂ ಪರೋಪಕಾರಿಯಾಗಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಇದೀಗ ಟಿ.ಸುಪ್ರಿತಾ ಹೆಸರಿನ ಪುಟ್ಟ ಹುಡಗಿಗೆ ಮರುಜನ್ಮ ನೀಡಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸುಪ್ರಿತಾಳಿಗೆ ಸಹಾಯ ಹಸ್ತ ಚಾಚಿ ಆಕೆಯ ಬದುಕಿಗೆ ಬೆಳಕಾಗಿದ್ದಾರೆ.
ತಮ್ಮ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯ ಕೈಗೊಂಡಿರುವ ಮಹೇಶ್ ಬಾಬು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರಿಗೆ ಆರ್ಥಿಕ ಸಹಾಯ ಮಾಡಿ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದಾರೆ. ಈ ಕಾರ್ಯಕ್ಕೆ ಅವರ ಪತ್ನಿ ನಮ್ರತಾ ಕೂಡ ಕೈ ಜೋಡಿಸಿದ್ದಾರೆ.
ಇತ್ತೀಚಿಗೆ ಸುಪ್ರಿತಾ ಹೆಸರಿನ ಹುಡುಗಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು. ಚಿಕಿತ್ಸೆ ಕೊಡಿಸಲು ಈಕೆಯ ಕುಟುಂಬ ಆರ್ಥಿಕವಾಗಿ ಶಕ್ತವಾಗಿರಲಿಲ್ಲ. ಇದು ಮಹೇಶ್ ಬಾಬು ಅವರ ಗಮನಕ್ಕೆ ಬಂದಿದೆ. ಕೂಡಲೇ ಸ್ಪಂದಿಸಿರುವ ಅವರು, ಆ ಮಗುವನ್ನು ಆಸ್ಪತ್ರೆಗೆ ಕರೆತಂದು, ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.
ಈ ವಿಚಾರವನ್ನು ಮಹೇಶ್ ಬಾಬು ಅವರ ಪತ್ನಿ ನಮ್ರತಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಶಸ್ತ್ರ ಚಿಕಿತ್ಸೆಯ ಬಳಿಕ ಸುಪ್ರಿತಾ ಆರೋಗ್ಯವಾಗಿದ್ದಾಳೆ ಹಾಗೂ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾಳೆ ಎಂದು ತಿಳಿಸಿದ್ದಾರೆ. ಈ ಯಶಸ್ವಿ ಚಿಕಿತ್ಸೆ ಕೈಗೊಂಡು ಆಂಧ್ರಪ್ರದೇಶ ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.
View this post on Instagram
ಇನ್ನು ಕೆಲ ದಿನಗಳ ಹಿಂದೆಯಷ್ಟೆ ಹೃದಯ ಸಂಬಂಧಿ ತೊಂದರೆಗೆ ಒಳಗಾಗಿದ್ದ ಒಂದು ತಿಂಗಳ ಮಗುವಿಗೆ ಮಹೇಶ್ ಬಾಬು ಕುಟುಂಬ ನೆರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.