![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 1, 2021, 7:00 AM IST
ಹೊಸದಿಲ್ಲಿ: ಸನ್‌ರೈಸರ್ ಹೈದರಾಬಾದ್ ತಂಡದ ಆಸ್ಟ್ರೇಲಿಯನ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ 2021ರ ಐಪಿಎಲ್ ಲೀಗ್‌ನಿಂದ ಹಿಂದೆ ಸರಿದಿದ್ದಾರೆ. ಸುದೀರ್ಘ ಕಾಲ ಜೈವಿಕ ಸುರಕ್ಷಾ ವಲಯದಲ್ಲಿ ಉಳಿಯುವುದು ತ್ರಾಸದಾಯಕ ಎಂಬ ಕಾರಣಕ್ಕಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಮಾರ್ಷ್ ಬದಲು ಇಂಗ್ಲೆಂಡಿನ ಆರಂಭಕಾರ ಜಾಸನ್ ರಾಯ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಮಿಚೆಲ್ ಮಾರ್ಷ್ 2020ರ ಐಪಿಎಲ್‌ನಲ್ಲಿ ಮೊದಲ ಪಂದ್ಯದ ವೇಳೆಯೇ ಗಾಯಾಳಾಗಿ ಹೊರಬಿದ್ದಿದ್ದರು. 2010ರಲ್ಲಿ ಐಪಿಎಲ್ ಪದಾರ್ಪಣೆಗೈದ ಮಾರ್ಷ್, ಈ ವರೆಗೆ ಆಡಿದ್ದು 21 ಪಂದ್ಯ ಮಾತ್ರ. ಜಾಸನ್ ರಾಯ್ 2017ರಲ್ಲಿ ಗುಜರಾತ್ ಲಯನ್ಸ್ ತಂಡವನ್ನು ಮೊದಲ ಸಲ ಪ್ರತಿನಿಧಿಸಿದ್ದರು. 2018ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಪರ ಆಡಿದ್ದರು. ಒಟ್ಟು 8 ಪಂದ್ಯಗಳಿಂದ 179 ರನ್ ಗಳಿಸಿದ್ದಾರೆ. ಇದರಲ್ಲೊಂದು ಅರ್ಧ ಶತಕ ಸೇರಿದೆ.
2 ಕೋಟಿ ರೂ. ಮೂಲ ಬೆಲೆ ಹೊಂದಿದ್ದ ರಾಯ್ ಕಳೆದ ಹರಾಜಿನಲ್ಲಿ ಮಾರಾಟವಾಗದೇ ಉಳಿದಿದ್ದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.