ಪಿಪಿಎಫ್ ಮೇಲಿನ ಬಡ್ಡಿದರಗಳ ಕಡಿತ ವಾಪಸ್ ಪಡೆದ ಕೇಂದ್ರ ..!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು..?
Team Udayavani, Apr 1, 2021, 11:12 AM IST
ನವ ದೆಹಲಿ : ನಿನ್ನೆ(ಬುಧವಾರ, ಮಾ.31) ಸಂಜೆ ಹೊರಡಿಸಿದ್ದ ಸಣ್ಣ ಉಳಿತಾಯಗಳ ಯೋಜನೆಯ ಮೇಲಿನ ಬಡ್ಡಿದರಗಳ ಮೇಲಿನ ಕಡಿತವನ್ನು ಇಂದು ವಾಪಸ್ ತೆಗದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ನಿನ್ನೆ ಹೊರಡಿಸಿರುವ ಆದೇಶವನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್ ಎಸ್ ಸಿ ಮತ್ತು ಭವಿಷ್ಯ ನಿಧಿ ಅಥವಾ ಪಿಪಿಎಫ್ ಯೋಜನೆಗಳಲ್ಲಿನ ಕಡಿತವು ಲಕ್ಷಾಂತರ ಮಧ್ಯಮ ವರ್ಗದ ಠೇವಣಿದಾರರಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ, ಹಾಗಾಗಿ ಕಣ್ತಪ್ಪಿನಿಂದ ಹೊರಡಿಸಲಾಗಿರುವ ಈ ಆದೇಶವನ್ನು ಹಿಂತೆಗೆದುಕೊಳ್ಳುವುದಾಗಿ ಹಣಕಾಸು ಸಚಿವೆ ಹೇಳಿದ್ದಾರೆ.
ಓದಿ : ಭರ್ಜರಿ ಖರೀದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 390 ಅಂಕ ಏರಿಕೆ, 14,804ಕ್ಕೆ ತಲುಪಿದ ನಿಫ್ಟಿ
ಇನ್ನು, ಈ ಬಗ್ಗೆ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ, ‘2020-2021ರ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳಲ್ಲಿ ಯಥಾಸ್ಥಿತಿಯಲ್ಲಿ ಮುಂದುವರಿಸಲಿದ್ದೇವೆ. ಈ ಬಗ್ಗೆ ಕಣ್ತಪ್ಪಿನಿಂದ ಹೊರಡಿಸಲಾದ ಆದೇಶಗಳನ್ನು ಹಿಂಪಡೆಯಲಾಗುತ್ತದೆ,” ಎಂದು ಬರೆದುಕೊಂಡಿದ್ದಾರೆ.
Interest rates of small savings schemes of GoI shall continue to be at the rates which existed in the last quarter of 2020-2021, ie, rates that prevailed as of March 2021.
Orders issued by oversight shall be withdrawn. @FinMinIndia @PIB_India— Nirmala Sitharaman (@nsitharaman) April 1, 2021
ನಿನ್ನೆ(ಬುಧವಾರ, ಮಾ.31) ಸಂಜೆ ಸಣ್ಣ ಉಳಿತಾಯಗಳ ಯೋಜನೆಯ ಮೇಲಿನ ಹೊರಡಿಸಿತ್ತು. ಪಿಪಿಎಫ್ ಮೇಲಿನ ಬಡ್ಡಿದರವನ್ನು ಶೇಕಡಾ. 7.1 ರಿಂದ ಶೇ.6.4 ಕ್ಕೆ ಕಡಿತಗೊಳಿಸಲಾಗಿತ್ತು. ಎನ್ ಎಸ್ ಸಿ ಯಲ್ಲಿ ಶೇಕಡಾ. 6.8 ರಿಂದ ಶೇಕಡಾ 5.9ಕ್ಕೆ ಇಳಿಸಲಾಗಿತ್ತು.
ಇನ್ನು, ಪಿಪಿಎಫ್ ಮೇಲಿನ ಹೊಸ ಬಡ್ಡಿದರವು 1974 ರಿಂದೀಚೆಗೆ ಅತ್ಯಂತ ಕಡಿಮೆ ಪ್ರಮಾಣದಲ್ಲಿತ್ತು ಎಂದು ವರದಿ ತಿಳಿಸಿದೆ.
ಬಡ್ಡಿದರಗಳ ಮೇಲಿನ ಬಾರಿ ಪ್ರಮಾಣದ ಕಡಿತವನ್ನು ಹಿಂಪಡೆಯುತ್ತೇವೆ ಎಂಬ ಸರ್ಕಾರದ ಈ ದಿಢೀರ್ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.