ನಂದಿಗ್ರಾಮದಲ್ಲಿ ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ : ರಾಜ್ಯಪಾಲರಿಗೆ ಮಮತಾ ದೂರು
Team Udayavani, Apr 1, 2021, 5:26 PM IST
ನಂದಿಗ್ರಾಮ : ಆಡಳಿತ ಪಕ್ಷ ತೃಣಮೂಲ ಹಾಗೂ ಪ್ರತಿ ಪಕ್ಷ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತಾರಕಕ್ಕೆ ಏರಿದ ಘಟನೆ ಪಶ್ಚಿಮ ಬಂಗಾಳದ ಹೈವೊಲ್ಟೇಜ್ ವಿಧಾನಸಭಾ ಕ್ಷೇತ್ರ ನಂದಿಗ್ರಾಮದ ಮತಗಟ್ಟೆಯೊಂದರಲ್ಲಿ ನಡೆದಿದೆ.
ಈ ಘರ್ಷಣೆಗೆ ಸಂಬಂಧಿಸಿದಂತೆ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯಪಾಲ ಜಗದೀಪ್ ಧಂಕರ್ ಅವರಿಗೆ ಕರೆ ಮಾಡಿ, ಕಾನೂನು ಮತ್ತು ಸುವ್ಯವಸ್ಥೆಯ ಕಾಪಾಡುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ ಎಂದು ದೂರು ನೀಡಿದ್ದಾರೆ.
ಓದಿ : ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಯಾವ ಸಮಯದಲ್ಲಿ ಏನು ಬೇಕಾದರೂ ಆಗಬಹುದು, ಕಾನೂನು ಹಾಗೂ ಸುವ್ಯವಸ್ಥೆ ಹದಗೆಟ್ಟಿದೆ. ನಾನು ಭಯಭೀತಳಾಗಿದ್ದೇನೆ ಎಂದಿದ್ದಾರೆ.
ಸದ್ಯ, ಘಟನೆಯ ಬಗ್ಗೆ ಚುನಾವಣಾ ಆಯೋಗವು ಸ್ಥಳೀಯ ಆಡಳಿತದಿಂದ ವರದಿಯನ್ನು ಕೋರಿದೆ ಎಂಬ ವರದಿಯಾಗಿದೆ.
ಬೇರೆ ರಾಜ್ಯಗಳ ಗೂಂಡಾಗಳು ಇಲ್ಲಿ ಘರ್ಷಣೆಯನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ ಬ್ಯಾನರ್ಜಿ, ನಾನು ಬೆಳಿಗ್ಗೆಯಿಂದ ಮತದಾನಕ್ಕೆ ಸಂಬಂಧಿಸಿದ 63 ದೂರುಗಳನ್ನು ದಾಖಲಿಸಿದ್ದೇನೆ, ಚುನಾವಣಾ ಆಯೋಗವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಯೋಗದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇನ್ನು, ಘರ್ಷಣೆಯಲ್ಲಿ ಪಾಲ್ಗೊಂಡು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಿರುವವರು ಬಿಹಾರ್ ಹಾಗೂ ಉತ್ತರ ಪ್ರದೇಶದ ಮೂಲದವರು, ಕೇಂದ್ರ ಅರೆಸೇನಾ ಸಿಬ್ಬಂದಿಗಳು ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಕ್ತ ಮತ್ತು ನ್ಯಾಯಯುತ ಮತದಾನದ ಹಿತದೃಷ್ಟಿಯಿಂದ ಎನ್ ಡಿ ಎ ಪಕ್ಷ ಆಳುವ ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಭದ್ರತಾ ಪಡೆಗಳನ್ನು ಬಂಗಾಳದಲ್ಲಿ ನಿಯೋಜಿಸಬಾರದು ಎಂದು ಕೋರಿ ಅವರ ಪಕ್ಷ ಈ ಹಿಂದೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.
ಓದಿ : ಭಿನ್ನಾಭಿಪ್ರಾಯಗಳ ಬಗ್ಗೆ ಸಿಎಂ ಜತೆ ಚರ್ಚಿಸಿ -ಬಸವರಾಜ ಬೊಮ್ಮಾಯಿ ಸೂಚನೆ
ಪಕ್ಷದ ಹಿರಿಯ ಮುಖಂಡ ಡೆರೆಕ್ ಒ’ಬ್ರಿಯನ್ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಬಿಜೆಪಿಗರು ಮತಗಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಬಿಜೆಪಿ ಕಾರ್ಯಕರ್ತರ ಬೃಹತ್ ಜನಸಮೂಹವು 6, 7, 49, 27, 162, 21, 26, 13, 262, 256, 163, 20 ಸಂಖ್ಯೆಯ ಮತಗಟ್ಟೆಗಳನ್ನು ಪ್ರವೇಶಿಸಿ ಅಕ್ರಮವಾಗಿ ಮತ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಓದಿ : ಇಷ್ಟಾರ್ಥ ಸಿದ್ಧಿಸುವ ಭಕ್ತರ ಪಾಲಿನ ದೇವರಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.