ಧಾರ್ಮಿಕ ಕ್ಷೇತ್ರದ ಸಾಧಕರಿಗೆ ಧರ್ಮೋತ್ಥಾನ ಪ್ರಶಸ್ತಿ
Team Udayavani, Apr 2, 2021, 12:23 AM IST
ಬೆಂಗಳೂರು: ಚಾಂದ್ರಮಾನ ಯುಗಾದಿ ಯಂದು ನಡೆಯುವ ಧಾರ್ಮಿಕ ದಿನಾಚರಣೆಗೆ ಹೊಸ ಆಯಾಮ ನೀಡಲು ಧಾರ್ಮಿಕ ಕ್ಷೇತ್ರದ ಸಾಧಕರಿಗೆ ಪ್ರಸಕ್ತ ಸಾಲಿನಿಂದ “ಧರ್ಮೋತ್ಥಾನ ಪ್ರಶಸ್ತಿ’ ನೀಡಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.
ಇದೇ ಮೊದಲ ಬಾರಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರದಾನ ನೀಡಲಾಗುತ್ತಿದೆ. ಈ ವರ್ಷ ಎಪ್ರಿಲ್ 13ರಂದು ಚಾಂದ್ರಮಾನ ಯುಗಾದಿ ನಡೆಯಲಿದ್ದು, ಅಂದೇ ಮುಖ್ಯಮಂತ್ರಿಯವರು ರಾಜಧಾನಿ ಬೆಂಗಳೂರಿನಲ್ಲಿ ಧಾರ್ಮಿಕ ಕ್ಷೇತ್ರದ ಸಾಧಕರೊಬ್ಬರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡುವ ಸಾಧ್ಯತೆಯಿದೆ. ಪ್ರಶಸ್ತಿಯು ಭಗವದ್ಗೀತೆಯ ಸಾರವನ್ನು ಒಳಗೊಂಡಿರುವ ರಜತ ಲೇಪಿತ ಫಲಕ ಮತ್ತು 1 ಲ. ರೂ. ಹೊಂದಿರಲಿದೆ ಎಂದು ಇಲಾಖೆಯ ಉನ್ನಯ ಮೂಲಗಳು ತಿಳಿಸಿವೆ.
ಆಯ್ಕೆ ಸಮಿತಿ :
ಧಾರ್ಮಿಕ ಕ್ಷೇತ್ರದ ಸಾಧಕರೊಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿಯೊಂದನ್ನು ರಚಿಸ ಲಾಗುತ್ತದೆ. ಸಮಿತಿಯಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಬಹಳ ವರ್ಷಗಳಿಂದ ಸೇವೆ ಸಲ್ಲಿಸಿ ಅನುಭವ ಹೊಂದಿರುವವರು ಇರುತ್ತಾರೆ. 60 ವರ್ಷ ಮೇಲ್ಪಟ್ಟ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು.
ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ :
ರಾಜ್ಯ ಮಟ್ಟದಲ್ಲಿ ಒಬ್ಬರಿಗೆ ಪ್ರಶಸ್ತಿ ನೀಡುವುದರ ಜತೆಗೆ, ಪ್ರತಿ ಜಿಲ್ಲೆಯಲ್ಲೂ ಒಬ್ಬೊಬ್ಬ ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು. ಚಾಂದ್ರಮಾನ ಯುಗಾದಿಯಿಂದ ಒಂದು ತಿಂಗಳ ಒಳಗಾಗಿ ಜಿಲ್ಲಾ ಮಟ್ಟದಲ್ಲಿ ಸಾಧಕರ ಆಯ್ಕೆ ಹಾಗೂ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೂ ಧಾರ್ಮಿಕ ದತ್ತಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ವಿತರಣೆ ವಿಳಂಬವಾದಲ್ಲಿ, ಚೈತ್ರ ಮಾಸದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದು ಇಲಾಖೆ ಮೂಲಗಳು ಖಚಿತಪಡಿಸಿವೆ.
ಶೀಘ್ರವೇ ಈ ಬಗ್ಗೆ ಅಧಿಕೃತ ಘೋಷಿಸಲಾಗುತ್ತದೆ. ಇದು ಧಾರ್ಮಿಕ ದತ್ತಿ ಇಲಾಖೆ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಮೂಲಕ ನಡೆಯಲಿದೆ. ಧಾರ್ಮಿಕ ಕ್ಷೇತ್ರದಲ್ಲಿದ್ದು, ಸಮಾಜಮುಖೀ ಕಾರ್ಯ ಮಾಡುತ್ತಿರುವ ಸಾಧಕರೊಬ್ಬರನ್ನು ಗುರುತಿಸಿ ಧರ್ಮೋತ್ಥಾನ ಪ್ರಶಸ್ತಿ ನೀಡಲಿದ್ದೇವೆ. –ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ ಸಚಿವ
–ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.