ವಿದ್ಯುಚ್ಛಕ್ತಿ ಬಳಕೆ ಪ್ರಮಾಣ 35 ವರ್ಷಗಳಲ್ಲೇ ಕನಿಷ್ಠ!
Team Udayavani, Apr 2, 2021, 7:06 AM IST
ಹೊಸದಿಲ್ಲಿ: ಮಾರ್ಚ್ಗೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಭಾರತದ ವಾರ್ಷಿಕ ವಿದ್ಯುಚ್ಛಕ್ತಿ ಬಳಕೆ ಪ್ರಮಾಣವು ಕಳೆದ 35 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕಿಳಿದಿತ್ತು!
ಇದಕ್ಕೆ ಕಳೆದ ವರ್ಷ ಹೇರಲಾಗಿದ್ದ ಕೋವಿಡ್ ಲಾಕ್ ಡೌನ್ ಕಾರಣ ಎಂದು ಸರಕಾರದ ದತ್ತಾಂಶಗಳನ್ನು ಉಲ್ಲೇಖೀಸಿ ರಾಯಿಟರ್ಸ್ ವಿಶ್ಲೇಷಿಸಿದೆ.
ಕೋವಿಡ್ ದೇಶವ್ಯಾಪಿ ನಿರ್ಬಂಧದಿಂದಾಗಿ ಕಳೆದ ಆಗಸ್ಟ್ ತಿಂಗಳವರೆಗೆ ಸತತ 6 ತಿಂಗಳ ಕಾಲ ವಿದ್ಯುತ್ ಉತ್ಪಾದನೆ ಕುಂಠಿತಗೊಂಡ ಹಿನ್ನೆಲೆಯಲ್ಲಿ, ಹಿಂದಿನ ವರ್ಷಕ್ಕೆ ಹೋಲಿಸಿದರೆ 2020-21ರಲ್ಲಿ ದೇಶದ ವಿದ್ಯುತ್ಛಕ್ತಿ ಉತ್ಪಾದನೆ ಕೂಡ ಶೇ. 0.2ರಷ್ಟು ಇಳಿಕೆಯಾಗಿತ್ತು. ಲಾಕ್ ಡೌನ್ ತೆರವಾಗುತ್ತಿದ್ದಂತೆ, ಮತ್ತೆ ಬೇಡಿಕೆ ಹೆಚ್ಚಳವಾಗಿದ್ದು, ಮಾರ್ಚ್ ವೇಳೆಗೆ ವಿದ್ಯುತ್ ಉತ್ಪಾದನೆ ಶೇ. 23.3ರಷ್ಟು ಹೆಚ್ಚಳವಾಯಿತು ಎಂದೂ ದತ್ತಾಂಶ ತಿಳಿಸಿದೆ.
ಹಿಂದಿನ 6 ತಿಂಗಳುಗಳಿಗೆ ಹೋಲಿಸಿದರೆ ಮಾರ್ಚ್ ತಿಂಗಳಲ್ಲಿ ವಿದ್ಯುತ್ ಉತ್ಪಾದನೆಯ ವೇಗವು ಹೆಚ್ಚಾಗಿತ್ತು. ಕೈಗಾರಿಕಾ ಚಟುವಟಿಕೆಗಳು ಚೇತರಿಕೆ ಕಂಡಿದ್ದು ಹಾಗೂ ಉತ್ತರ ಭಾರತದಲ್ಲಿ ಮಾರ್ಚ್ ವೇಳೆಗೆ ತಾಪಮಾನ ಹೆಚ್ಚಳವಾದ ಕಾರಣ ಹವಾನಿಯಂತ್ರಿತ ಯಂತ್ರಗಳ ಬಳಕೆ ಹೆಚ್ಚಾಗಿದ್ದು ಇದಕ್ಕೆ ಕಾರಣ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.