ಅಸ್ಸಾಂ ಅಖಾಡ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ EVM ಪತ್ತೆ, 4 ಚುನಾವಣಾ ಅಧಿಕಾರಿಗಳು ಸಸ್ಪೆಂಡ್
ಚಾಲಕನ ಬಳಿ ಸ್ಥಳೀಯರು ಪ್ರಶ್ನಿಸುತ್ತಿದ್ದಾಗಲೇ ಆತ ಕಾರು ಬಿಟ್ಟು ಪಲಾಯನಗೈದಿದ್ದ.
Team Udayavani, Apr 2, 2021, 11:35 AM IST
ಅಸ್ಸಾಂ: ಅಸ್ಸಾಂನಲ್ಲಿ ಎರಡನೇ ಹಂತದ ಚುನಾವಣೆಯ ಮತದಾನ ಗುರುವಾರ(ಏಪ್ರಿಲ್ 01) ಸಂಜೆ ಅಂತ್ಯಗೊಂಡ ಬಳಿಕ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಯಂತ್ರಗಳನ್ನು ಕೊಂಡೊಯ್ಯತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮೂಲಕ ಘರ್ಷಣೆ ಕಾರಣವಾಗಿರುವುದಾಗಿ ವರದಿ ತಿಳಿಸಿದೆ.
ಈ ವಿಡಿಯೋವನ್ನು ಅಸ್ಸಾಂ ಮೂಲದ ಪತ್ರಕರ್ತ ಅಟಾನು ಭುಯಾನ್ ಟ್ವೀಟ್ ಮಾಡಿ, ಈ ಘಟನೆಯ ನಂತರ ಪಠಾರ್ಕಂಡಿಯಲ್ಲಿ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿರುವುದಾಗಿ ತಿಳಿಸಿದ್ದರು. 2ನೇ ಹಂತದ ಮತದಾನ ಮುಕ್ತಾಯವಾದ ನಂತರ ಚುನಾವಣಾ ಆಯೋಗದ ಅಧಿಕಾರಿಗಳು ಹಾಲಿ ಶಾಸಕ, ಪಠಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣನೇಂದು ಪೌಲ್ ಅವರ ಕಾರಿನಲ್ಲಿ ಇವಿಎಂಗಳನ್ನು ಸಾಗಿಸಿದ್ದರು.
ಗುರುವಾರ ರಾತ್ರಿ ಹತ್ತು ಗಂಟೆಗೆ ಅಸ್ಸಾಂನ ಕರೀಂಗಂಜ್ ನ ಕಾನಿಸೈಲ್ ಪ್ರದೇಶದಲ್ಲಿ ಸ್ಥಳೀಯರು ಬಿಳಿ ಬೊಲೇರೊ ಕಾರನ್ನು ತಡೆದು ನಿಲ್ಲಿಸಿದ್ದರು. ಕಾರು ಚಾಲಕನ ಬಳಿ ಸ್ಥಳೀಯರು ಪ್ರಶ್ನಿಸುತ್ತಿದ್ದಾಗಲೇ ಆತ ಕಾರು ಬಿಟ್ಟು ಪಲಾಯನಗೈದಿದ್ದ. ನಂತರ ಕಾರಿನೊಳಗೆ ಪರಿಶೀಲನೆ ನಡೆಸಿದಾಗ ಆರು ಇವಿಎಂ ಮೆಷಿನ್ ಗಳು ದೊರಕಿರುವುದಾಗಿ ವರದಿ ವಿವರಿಸಿದೆ.
ಸ್ಥಳೀಯರು ಕಾರನ್ನು ಅಡ್ಡಗಟ್ಟಿದ್ದ ಸಂದರ್ಭದಲ್ಲಿ ಚುನಾವಣಾ ಆಯೋಗದ ಯಾವುದೇ ಅಧಿಕಾರಿಗಳು ಇದ್ದಿರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಚುನಾವಣಾ ಆಯೋಗ ಕರೀಂಗಂಜ್ ನ ಜಿಲ್ಲಾ ಚುನಾವಣಾಧಿಕಾರಿ ಬಳಿ ಪೂರ್ಣ ವರದಿ ನೀಡುವಂತೆ ಸೂಚಿಸಿತ್ತು. ಮೂಲಗಳ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಚುನಾವಣಾ ಅಧಿಕಾರಿಗಳನ್ನು ಆಯೋಗ ಅಮಾನತುಗೊಳಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.