![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Apr 2, 2021, 12:50 PM IST
ಬೆಂಗಳೂರು: ಆರ್ ಎಸ್ಎಸ್ ಮತ್ತು ಬಿಜೆಪಿ ಎಂಬ ವಿಷದ ರುಚಿ ನೋಡಿದರೆ ಸಾವು ಖಚಿತ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ನಿಮ್ಮ ಪಕ್ಷವನ್ನು ಮೊದಲು ಉಳಿಸಿಕೊಳ್ಳಿ, ಮಾನವರಾರೂ ಚಿರಂಜೀವಿಗಳಲ್ಲ ಎಂದು ಟೀಕಿಸಿದೆ.
ರಾಜ್ಯ ಬಿಜೆಪಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಲ್ಯಾಣ ಕರ್ನಾಟಕದ ವಿರೋಧಿ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ತಮಿಳುನಾಡಿನಲ್ಲಿ ಈಗಾಗಲೇ ಬಿಜೆಪಿ ಬೆಂಬಲಿತ ಸರ್ಕಾರವಿದೆ. ಪುದುಚೇರಿಯಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಪುದುಚೇರಿಯಲ್ಲಿ ಕಾಂಗ್ರೆಸ್ ಶಾಶ್ವತವಾಗಿ ಬಾಗಿಲು ಮುಚ್ಚಲಿದೆ ಎಂದಿದೆ.
ಇದನ್ನೂ ಓದಿ:ಅಸ್ಸಾಂ ಅಖಾಡ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ EVM ಪತ್ತೆ, 4 ಚುನಾವಣಾ ಅಧಿಕಾರಿಗಳು ಸಸ್ಪೆಂಡ್
ಕರ್ನಾಟಕದೊಳಗೆ ಬಂದಿರುವ ಆರ್ ಎಸ್ಎಸ್ ಮತ್ತು ಬಿಜೆಪಿಗೆ ದಕ್ಷಿಣದ ಇತರ ರಾಜ್ಯಗಳಲ್ಲಿ ಸ್ಥಾನವಿಲ್ಲ. ತಮಿಳುನಾಡು ಮತ್ತು ಪುದುಚೇರಿಯೊಳಗೆ ಬರಲು ಬಿಡುವುದಿಲ್ಲ ಎಂದು ಖರ್ಗೆ ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.