ವೇಶ್ಯಾವಾಟಿಕೆಯಲ್ಲಿ ತೊಡಗಲು ಎಂಟು ಪತ್ನಿಯರನ್ನು ಒತ್ತಾಯಿಸಿದ ಗಂಡ!
ಪತ್ನಿಯರೂ ಕೂಡಾ ಆತನ ಕುರಿತಾಗಿ ಮಹಿಳಾ ಸಂಘಗಳಿಗೆ ದೂರು ನೀಡಿದ್ದಾರೆ
Team Udayavani, Apr 2, 2021, 3:01 PM IST
ಆಂಧ್ರ ಪ್ರದೇಶ: ವ್ಯಕ್ತಿಯೊಬ್ಬ ಬರೋಬ್ಬರಿ 8 ಜನ ಮಹಿಳೆಯರನ್ನು ವಿವಾಹವಾಗಿ ಆ ಬಳಿಕ ಅವರನ್ನೆಲ್ಲಾ ವೇಶ್ಯಾವಾಟಿಕೆಯಲ್ಲಿ ತೊಡಗಿಕೊಳ್ಳುವಂತೆ ಹಿಂಸೆ ನೀಡಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಲ್ಲಿ ಬೆಳಕಿಗೆ ಬಂದಿದೆ.
ವ್ಯಕ್ತಿಯನ್ನು ಡಿ. ಅರುಣ್ ಕುಮಾರ್ (33) ಎಂದು ಗುರುತಿಸಲಾಗಿದ್ದು, ಈತ 8 ಜನ ಮಹಿಳೆಯರನ್ನು ವಿವಾಹವಾಗಿದ್ದು, ವಿವಾಹವಾದ ಕೆಲ ದಿನಗಳ ಬಳಿಕ ಅವರ ಬಳಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಒತ್ತಡ ಹೇರಿದ್ದು, ಇದನ್ನು ವಿರೋಧಿಸಿದ ಪತ್ನಿಯರಿಗೆ ಹಿಂಸೆ ನೀಡಿದ್ದು, ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ.
ಈತ ಈಗಾಗಲೇ ತನ್ನ ಎರಡು ಜನ ಪತ್ನಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಬಸ್ ತಡೆದು ವಿಭಿನ್ನ ಕೋಮಿನ ಜೋಡಿ ಮೇಲೆ ಹಲ್ಲೆ: ಎಂಟು ಜನರು ಪೊಲೀಸ್ ವಶಕ್ಕೆ
ಈ ಕುರಿತಾಗಿ ಆತನ ಪತ್ನಿಯರಲ್ಲಿ ಒಬ್ಬಳಾದ ಗೀತಾಂಜಲಿ ದೂರು ನೀಡಿದ್ದು, ತಾನು ತನ್ನ ಗಂಡನಿಂದ ಹಿಂಸೆಗೆ ಒಳಗಾಗಿದ್ದು ಆತ ತನ್ನನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸಿದ್ದು ಇದನ್ನು ವಿರೋಧಿಸಿದಾಗ ನನ್ನ ಮೇಲೆ ಕೊಲೆ ಬೆದರಿಕೆಯನ್ನು ಒಡ್ಡಿದ್ದಾನೆ ಎಂದಿದ್ದಾಳೆ. ಆ ಬಳಿಕ ಉಳಿದ ಪತ್ನಿಯರೂ ಕೂಡಾ ಆತನ ಕುರಿತಾಗಿ ಮಹಿಳಾ ಸಂಘಗಳಿಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮನೀಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಘಟನೆಯ ಕುರಿತಾಗಿ ಕಾಂಚರಾಪಲೆಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, DCP ಐಶ್ವರ್ಯ ರಾಸ್ತೋಗಿ ಈ ಪ್ರಕರಣವನ್ನು ಭೇದಿಸುವಲ್ಲಿ ಸ್ವತಃ ತಾವೇ ಜವಾಬ್ದಾರಿ ತೆಗೆದುಕೊಂಡಿದ್ದು, ಆರೋಪಿಯ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.