ನಮಗೆ ಬೇರೆ ದಾರಿಯಿಲ್ಲ, ಕೋವಿಡ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಸುಧಾಕರ್
Team Udayavani, Apr 3, 2021, 10:45 AM IST
ಬೆಂಗಳೂರು: ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕೆಲವರು ಬದಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ ಆದರೆ, ಕೋವಿಡ್ ಸೋಂಕು ನಿಯಂತ್ರಣವಾಗದ ಹೊರತು ಮಾರ್ಗಸೂಚಿ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಉದ್ದೇಶಪೂರ್ವಕವಾಗಿ ಯಾವುದೇ ನಿಯಮಗಳನ್ನು ತಂದಿಲ್ಲ. ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನು ನಿಷೇಧಿಸುವ ಉದ್ದೇಶವಿಲ್ಲ. ಏ.೨೦ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಹೇಳಿದರು.
ನಾವು ಈಗ ಎರಡನೇ ಅಲೆ ಹೊಸ್ತಿಲಲ್ಲಿದ್ದೇವೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದುದು ಅನಿವಾರ್ಯ. ನಮಗೆ ಬೇರೆ ದಾರಿಯೇ ಇಲ್ಲ. 45 ವರ್ಷ ಮೇಲ್ಪಟ್ಟವರು ದಯವಿಟ್ಟು ಲಸಿಕೆ ಪಡೆಯಬೇಕು. ಗುಂಪು ಸೇರುವುದನ್ನು ಕಡಿಮೆ ಮಾಡಿ ಮಾಸ್ಕ್ ಬಳಸಬೇಕು ಎಂದರು.
ಇದನ್ನೂ ಓದಿ:ಸರ್ಕಾರದಿಂದ ಟಫ್ ರೂಲ್ಸ್: ಸಿನಿಮಾ ಮಂದಿರ, ಬಾರ್, ಪಬ್ ಗಳಲ್ಲಿ 50% ರಷ್ಟು ಜನರಿಗೆ ಅವಕಾಶ
ಸರ್ಕಾರದ ಮಾರ್ಗಸೂಚಿಗೆ ನಟ ಪುನೀತ್ ರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ ಬಗ್ಗೆ ಮಾತನಾಡಿದ ಸುಧಾಕರ್, ವಲಯಾವಾರು ಎಲ್ಲರ ಬಗ್ಗೆ ಗೌರವ, ಅಭಿಮಾನ ಇದೆ ಎಂದರು.
ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಮದುವೆ, ಅಪಾರ್ಟ್‌ಮೆಂಟ್ ಎಲ್ಲವೂ ತೆಗೆದರೆ ಹೇಗೆ? ಗಂಭೀರವಾದ ಕ್ರಮ ಕೈಗೊಂಡಿಲ್ಲ ಎಂದು ವರದಿಗಳು ಬರುತ್ತಿತ್ತು. ಈಗ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯ ಎಂದು ಹೇಳಿದರು.
ಚುನಾವಣೆಗೂ ಮಾರ್ಗಸೂಚಿ ಅನ್ವಯವಾಗಲಿದೆ. ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆಯಿಲ್ಲ ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ಮತ್ತೆ ಆತಂಕದಲ್ಲಿ ಕನ್ನಡ ಚಿತ್ರರಂಗ: ಸಿನಿಮಾ ಬಿಡುಗಡೆಯಲ್ಲಿ ಆಗಲಿದೆ ವ್ಯತ್ಯಯ
ಬಸ್ ಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನ ಕರೆದೊಯ್ಯವಂತಿಲ್ಲ. ಎಷ್ಟು ಆಸನದ ಸಾಮರ್ಥ್ಯ ಇದೆಯೋ ಅಷ್ಟು ಜನರನ್ನ ಮಾತ್ರ ಕರೆದೊಯ್ಯಬೇಕು. ಈ ಬಗ್ಗೆ ನಿನ್ನೆಯೇ ಚರ್ಚಿಸಲಾಗಿದೆ ಎಂದರು.
ನೈಟ್ ಕರ್ಫ್ಯೂ, ವಾರಾಂತ್ಯದ ಲಾಕ್ ಡೌನ್ ಬಗ್ಗೆ ಗೊತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಬಂದರೆ ಮತ್ತೆ ಎಲ್ಲದಕ್ಕೂ ಅವಕಾಶ ಮಾಡಿಕೊಡಲಾಗುವುದು. ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಸುಧಾಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.