ಮಹಾರಾಷ್ಟ್ರದಲ್ಲಿ ಕೋವಿಡ್ ಉಲ್ಬಣ: 1 ರಿಂದ 8ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ
Team Udayavani, Apr 3, 2021, 8:28 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಕೈಮೀರಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ಆತಂಕವನ್ನುಂಟು ಮಾಡಿದ್ದು, 1ರಿಂದ 8ನೇ ತರಗತಿವರೆಗೆ ವಾರ್ಷಿಕ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲು ಅಲ್ಲಿನ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಶನಿವಾರ ಮಾಧ್ಯಮಗಳ ಎದುರು ಈ ವಿಚಾರ ಖಚಿತ ಪಡಿಸಿರುವ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ , ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಿಸಿದರು. ಹಾಗೂ 9 ಹಾಗೂ 11 ನೇ ತರಗತಿ ವಿದ್ಯಾರ್ಥಿಗಳ ಕುರಿತು ತೀರ್ಮಾನವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕಳೆದ ಫೆಬ್ರುವರಿಯಲ್ಲಿ ಮಾಧ್ಯಮಗಳ ಎದುರು ಹೇಳಿರುವಂತೆ, 10 ಮತ್ತು 12ನೇ ತರಗತಿಯ ಮುಖ್ಯ ಪರೀಕ್ಷೆಗಳು ಏಪ್ರಿಲ್ ಅಂತ್ಯದಲ್ಲಿ ಆರಂಭವಾಗಲಿದ್ದು, ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿವೆ.
ಇನ್ನು ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಉಲ್ಬಣಿಸುತ್ತಿದೆ. ಶುಕ್ರವಾರವಷ್ಟೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ರಾಜ್ಯದ ಜನತೆಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಹೀಗೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಹೋದರೆ ರಾಜ್ಯಪೂರ್ತಿ ಲಾಕ್ ಡೌನ್ ಹೇರುವುದು ಅನಿವಾರ್ಯವಾಗಲಿದೆ ಎನ್ನುವ ಮುನ್ಸೂಚಣೆ ಕೂಡ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.