
ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿ
Team Udayavani, Apr 3, 2021, 9:03 PM IST

ಕಾರಟಗಿ : ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ನಡೆಸಿದ ಹೋರಾಟಕ್ಕೆ ಸರ್ಕಾರ 6 ತಿಂಗಳು ಸಮಯಾವಕಾಶ ಕೇಳಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಬಿಟ್ಟ ವಿಚಾರ. ನಮ್ಮ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದೇವೆ. ಆದರೆ ಸರಕಾರ ಮಾತು ತಪ್ಪಿದಲ್ಲಿ ಸೆಪ್ಟೆಂಬರ್ 19ರಿಂದ ಹೋರಾಟ ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಟ್ಟಣದ ಎಲ್‌ವಿಟಿ ಕಲ್ಯಾಣ ಮಂಟಪದಲ್ಲಿ ಗುರುವಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಿಗೆ ಆಗ್ರಹಿಸಿ ನಡೆದ ಹೋರಾಟಕ್ಕೆ ಸಹಕರಿಸಿದ ಸಮಾಜ ಬಾಂಧವರಿಗೆ ಶರಣು ಶರಣಾರ್ಥಿ ಸಂದೇಶ ಜಾಥಾ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭ್ಯುಧ್ಯಯಕ್ಕೆ 27ವರ್ಷದ ಹಿಂದೆ ಹುಟ್ಟು ಹಾಕಿದ ಈ ಹೋರಾಟ ಈಗ ಅಂತಿಮ ಘಟ್ಟ ತಲುಪಿದೆ. ಅಲ್ಲದೆ 2ಎಗಾಗಿ ಇದು ಅಂತಿಮ ಹೋರಾಟವಾಗಿದೆ ಎಂದರು.
2ಎಗಾಗಿ ನಡೆದ ಹೋರಾಟದಲ್ಲಿ ಈ ಬಾರಿ ಸಮಾಜದ 10 ಲಕ್ಷ ಜನರನ್ನು ಸೇರಿಸಲಾಗಿತ್ತು. ಒಂದು ವೇಳೆ 6 ತಿಂಗಳ ನಂತರ ಈಡೇರಿದಿದ್ದರೆ ಮುಂದಿನ ಅಂತಿಮ ಹೋರಾಟದಲ್ಲಿ ರಾಜ್ಯದ 20 ಲಕ್ಷ ಜನ ಬೆಂಗಳೂರಿಗೆ ದಾಪುಗಾಲು ಇಡುವ ಪರಿಸ್ಥಿತಿ ಬಂದರೂ ಬರಬಹುದು. ಯಾವುದಕ್ಕೂ ಸಮಾಜ ಬಾಂಧವರು ಸಿದ್ಧರಾಗಿರಬೇಕು. 2ಎ ಮೀಸಲು ಹೋರಾಟವನ್ನು ಪಂಚಮಸಾಲಿ ಸಮಾಜದ ಇತಿಹಾಸದಲ್ಲಿ ಐತಿಹಾಸಿಕ ಹೋರಾಟವಾಗಿಸಿದ ರಾಜ್ಯದ ಸಮಸ್ತ ಪಂಚಮಸಾಲಿ ಸಮಾಜಕ್ಕೆ ಕೃತಜ್ಞತೆ ಅರ್ಪಿಸುವ ಕಾರಣಕ್ಕೆ ನೇರವಾಗಿ ಮಠಕ್ಕೆ ಹೋಗದೇ ನಿಮ್ಮ ಬಳಿ ಬಂದಿದ್ದೇನೆ. ಇನ್ನು ಹೋರಾಟ ತಾತ್ವಿಕ ಅಂತ್ಯ ಕಾಣಬೇಕಿದೆ. ನಿಮ್ಮ ಸಹಕಾರ ಸದಾಕಾಲ ಹೀಗೆ ಇರಲಿ ಎಂದರು.
ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ಹೋರಾಟದ ಸಂದರ್ಭದಲ್ಲಿ ಹಲವರು ಅದರಲ್ಲಿ ಸಮಾಜದವರೇ ಅಡ್ಡಿಪಡಿಸುತ್ತಿದ್ದರು. ಅದನ್ನೆಲ್ಲ ಮೆಟ್ಟಿನಿಂತು ನಮ್ಮ ಬೆಂಬಲಕ್ಕೆ ನಿಂತ ಸಮಾಜ ಬಾಂಧವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ. ಹೋರಾಟ ಯಶಸ್ವಿಯಾಗುವವರೆಗೂ ನಾನು ವಿರಮಿಸುವುದಿಲ್ಲ ಎಂದು ಭರವಸೆ ನೀಡಿದರು. ಮಾಜಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಪ್ರಮುಖರು ಮಾತನಾಡಿದರು. ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ, ಮುಖಂಡರಾದ ಕಳಕನಗೌಡ ಪಾಟೀಲ್, ನಾಗರಾಳ, ಬಸಲಿಂಗಪ್ಪ ಭೂತೆ, ಪಂಚಮಸಾಲಿ ಸಮಾಜದ ಕಾರಟಗಿ ತಾಲೂಕಾಧ್ಯಕ್ಷ ಚನ್ನಬಸಪ್ಪ ಸುಂಕದ, ಸಣ್ಣ ಸೂಗಪ್ಪ, ಗುಂಡಪ್ಪ ಕುಳಗಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.