ಕೋಸ್ಟಲ್ ಗಾರ್ಡ್‌ ಗೆ ಕ್ಷಿಪ್ರ ಗಸ್ತು ಹಡಗು


Team Udayavani, Apr 3, 2021, 9:07 PM IST

2hvr1a

ಕಾರವಾರ: ಭಾರತೀಯ ಕೋಸ್ಟ್‌ ಗಾರ್ಡ್‌ ಎರಡು ಫಾಸ್ಟ್‌ ಪ್ಯಾಟ್ರೊಲಿಂಗ್‌ ಹಡಗುಗಳನ್ನು ಕಾರವಾರ ವಿಭಾಗಕ್ಕೆ ನಿಯೋಜಿಸುವ ಮೂಲಕ ಉತ್ತರ ಕನ್ನಡದ ಕರಾವಳಿಯ ಬಲವನ್ನು ಇನ್ನಷ್ಟು ಹೆಚ್ಚಿಸಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (ಐಸಿಜಿಎಸ್‌) ಕಾರವಾರ ಘಟಕವು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ, ಅಂದರೆ ಉತ್ತರದ ಮಾಜಾಳಿಯಿಂದ ದಕ್ಷಿಣದ ಭಟ್ಕಳದವರೆಗೆ ತನ್ನ ವ್ಯಾಪ್ತಿ ಹೊಂದಿದೆ.

ಐಸಿಜಿಎಸ್‌ 4 ನವೆಂಬರ್‌ 2009ರಂದು ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿದಾಗಿನಿಂದ 2 ಇಂಟರ್‌ ಸೆಪ್ಟರ್‌ ಬೋಟ್‌ಗಳು ಮತ್ತು 2 ಇಂಟರ್‌ ಸೆಪ್ಟರ್‌ ಕ್ರಾಫ್ಟ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. 1 ಏಪ್ರಿಲ್‌ 2021ರಿಂದ ಐಸಿಜಿಎಸ್‌ ಸಾವಿತ್ರಿಬಾಯಿ ಫುಲೆ ಮತ್ತು ಐಸಿಜಿಎಸ್‌ ಕಸ್ತೂರ್ಬಾ ಗಾಂಧಿ  ಎಂಬ ಎರಡು ಫಾಸ್ಟ್‌ ಪೆಟ್ರೋಲ್‌ ಹಡಗುಗಳನ್ನು ಇದೀಗ ಕಾರವಾರಕ್ಕೆ ನಿಯೋಜಿಸಿದೆ.

ಈ ಎರಡೂ ಹಡಗುಗಳು ಈ ಮೊದಲು ನವ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಎರಡೂ ಹಡಗುಗಳು ಗೋವಾ ಶಿಪ್‌ಯಾರ್ಡ್‌ ಲಿಮಿಟೆಡ್‌ ನಿರ್ಮಿಸಿದ ಫಾಸ್ಟ್‌ ಪೆಟ್ರೋಲ್‌ ಹಡಗುಗಳಾಗಿವೆ. ಇವು ಗಂಟೆಗೆ 35 ನಾಟ್ಸ್‌ ವೇಗವನ್ನು ಕ್ರಮಿಸಬಲ್ಲ ಸಮರ್ಥ್ಯ ಹೊಂದಿದ್ದು, 30 ಎಂಎಂಸಿಆರ್‌ ಎನ್‌ ಗನ್‌ ಕೂಡ ಇದು ಹೊಂದಿದೆ.

ಇವುಗಳನ್ನು ಇತ್ತೀಚಿನ ಉಪಗ್ರಹ ಸಂವಹನ ಮತ್ತು ಸಂಚರಣೆ ವ್ಯವಸ್ಥೆಗಳೊಂದಿಗೆ ಅಳವಡಿಸಲಾಗಿದೆ. ಹಡಗುಗಳನ್ನು ಕಣ್ಗಾವಲು, ಗಸ್ತು ತಿರುಗಲು ವಿನ್ಯಾಸಗೊಳಿಸಲಾಗಿದೆ ಮತ್ತು ಆಳವಿಲ್ಲದ ನೀರಿನ ಕಾರ್ಯಾಚರಣೆಗೂ ಇವು ಸಮರ್ಥವಾಗಿದೆ. ಎರಡೂ ಎಫ್‌ಪಿವಿಗಳು ಕಳ್ಳಸಾಗಣೆ ವಿರೋಧಿ  ಕಾರ್ಯಾಚರಣೆ, ಕಡಲ್ಗಳ್ಳತನ ವಿರೋಧಿ  ಗಸ್ತು, ಮೀನುಗಾರಿಕೆ ರಕ್ಷಣೆ ಮತ್ತು ಶೋಧ ಮತ್ತು ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ಸಹ ಸಮರ್ಥವಾಗಿವೆ.

ಎರಡೂ ಹಡಗುಗಳು ಹಲವಾರು ಎಸ್‌ಎಆರ್‌ ಕಾರ್ಯಾಚರಣೆಗಳು, ಕಡಲ್ಗಳ್ಳತನ ವಿರೋಧಿ  ಗಸ್ತು ಮತ್ತು ಕಣ್ಗಾವಲು ಪ್ರಯತ್ನಗಳಲ್ಲಿ ಭಾಗಿಯಾಗಿವೆ. ಇದಲ್ಲದೆ, ಹಲವಾರು ಸಂದರ್ಭಗಳಲ್ಲಿ ಸಮುದ್ರದಲ್ಲಿರುವ ಮೀನುಗಾರರಿಗೆ ಇವುಗಳ ಮೂಲಕ ನೆರವು ನೀಡಲಾಗಿದೆ. ಈ ಎರಡು ಎಫ್‌ಪಿವಿಗಳು ಕೋಸ್ಟ್‌ ಗಾರ್ಡ್‌ ಸ್ಟೇಷನ್‌ ಕಾರವಾರದ ಸಾಮರ್ಥ್ಯಗಳಿಗೆ ಹೊಸ ಆಯಾಮವನ್ನು ಸೇರಿಸುತ್ತವೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.