![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 3, 2021, 11:20 PM IST
ಚಾಮರಾಜನಗರ: ತಾಲೂಕಿನ ಕೆಲ್ಲಂಬಳ್ಳಿ ಬಸವನಪುರ ಗ್ರಾಮದ ವ್ಯಕ್ತಿಯೊಬ್ಬರು ಹಣಕಾಸಿನ ವಿಚಾರಕ್ಕೆ ನಡೆದ ಜಗಳದಿಂದ ಮನನೊಂದು ಜಮೀನೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಮಹದೇವಪ್ಪ (60) ಆತ್ಮಹತ್ಯೆ ಮಾಡಿಕೊಂಡವರು.
ಮಹದೇವಪ್ಪ ತಾವು ಬೆಳೆದ ಬಾಳೆಯನ್ನು ಸುಂದ್ರಪ್ಪ ಹಾಗೂ ಚೇತನ್ ಎಂಬುವರಿಗೆ ಮಾರಾಟ ಮಾಡಿದ್ದರು.
ಆದರೆ ಖರೀದಿಸಿದ ನಂತರ ಸುಂದ್ರಪ್ಪ ಹಣ ನೀಡಿರಲಿಲ್ಲ. ಇದರಿಂದ ಮಾತಿಗೆ ಮಾತು ಬೆಳೆದು ಅದು ಘರ್ಷಣೆಗೆ ತಿರುಗಿತ್ತು.
ಈ ಸಂದರ್ಭದಲ್ಲಿ ನಮ್ಮ ಮೇಲೆ ಮಹದೇವಪ್ಪ ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದರು ಎಂದು ಸುಂದ್ರಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪರಿಣಾಮ ಪೊಲೀಸರು ಮಹದೇವಪ್ಪ ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು.
ವಿಷದ ಬಾಟಲಿಯೊಂದಿಗೆ ಠಾಣೆಗೆ ತೆರಳಿದ್ದ ಮಹದೇವಪ್ಪ ಅವರು, ನನಗೆ ಬರಬೇಕಿರುವ ಹಣವನ್ನು ಕೊಡಿಸಿ, ಇಲ್ಲವಾದರೆ ವಿಷ ಕುಡಿಯುವುದಾಗಿ ಬೆದರಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ :ಆರೋಗ್ಯದಲ್ಲಿ ಚೇತರಿಕೆ : ರಾಷ್ಟ್ರಪತಿ ಐಸಿಯುನಿಂದ ವಿಶೇಷ ವಾರ್ಡ್‌ಗೆ ಶಿಫ್ಟ್
ಬಳಿಕ ಮಹದೇವಪ್ಪ ಊರಿಗೆ ತೆರಳಿ, ಗಲಾಟೆ ಮಾಡಿದ್ದ ಸುಂದ್ರಪ್ಪ ಅವರ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಮ್ಮ ತಂದೆ ಠಾಣೆಗೆ ಹೋದಾಗ ಪೊಲೀಸರು ಕಠಿಣವಾಗಿ ವರ್ತಿಸಿದರು. ಹೀಗಾಗಿ, ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ ಮೋಹನ್ ಆರೋಪಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.