ರಸ್ತೆ ಅಭಿವೃದ್ಧಿಗೆ ಅನುದಾನ : ಡಾ| ಅಜಯಸಿಂಗ್
Team Udayavani, Apr 4, 2021, 8:21 PM IST
ಜೇವರ್ಗಿ: ತಾಲೂಕಿನ ಕೂಡಿ ದರ್ಗಾ ಬಳಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ನಿರ್ಮಾಣಕ್ಕೆ 30 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ತಾಲೂಕಿನ ಕೂಡಿ ದರ್ಗಾ ಬಳಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 30 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಸಿಸಿ ರಸ್ತೆ, ಒಳ ಚರಂಡಿ ಕಾಮಗಾರಿ ಕೈಗೊಂಡಿದ್ದು, ನಿಗದಿತ ಹಾಗೂ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಭಾಗದ ಹತ್ತಾರು ಹಳ್ಳಿಗಳಿಗೆ ಹಾಗೂ ಜಿಲ್ಲಾ ಕೇಂದ್ರ ಸ್ಥಾನ ಕಲಬುರಗಿಗೆ ತಲುಪಲು ಕೋನಾಹಿಪ್ಪರಗಾ-ಸರಡಗಿ ಸೇತುವೆ ಆಸರೆಯಾಗಿದೆ. ಈ ಸೇತುವೆ ನಿರ್ಮಾಣ ಮಾಡಿರುವುದರಿಂದ ಈ ಭಾಗದ ಜನರಿಗೆ ಕಡಿಮೆ ಸಮಯದಲ್ಲಿ ಜಿಲ್ಲಾ ಕೇಂದ್ರ ತಲುಪಲು ಸಹಕಾರಿಯಾಗಿದೆ ಎಂದರು.
ಮುಖಂಡರಾದ ರುಕುಂ ಪಟೇಲ ಇಜೇರಿ, ರುಕುಂ ಪಟೇಲ ಕೂಡಿ, ಮಹಿಬೂಬ ಪಟೇಲ ಕೋಬಾಳ, ಶಿವಣ್ಣಗೌಡ ಮಂದರವಾಡ, ಶಿವ ಶರಣಪ್ಪ ಕೋಬಾಳ, ಸುಭಾಷ ಹೂಗಾರ, ರಾಜಶೇಖರ ಸೀರಿ, ಗ್ರಾಪಂ ಅಧ್ಯಕ್ಷೆ ಗೌರಮ್ಮ ಶಾಂತಪ್ಪ, ಬಾಷಾ ಪಟೇಲ ಬಣಮಿ, ಮೀರಾ ಪಟೇಲ, ಮಲ್ಲು ಕರಕಿಹಳ್ಳಿ, ಮೈಲಾರಿ ಬಣಮಿ, ರೇವಣಸಿದ್ದಪ್ಪ ಕಮಾನಮನಿ, ರಿಯಾಜ್ ಪಟೇಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.