ಗ್ರಾಮೀಣಕೂ ಗಾಂಜಾ ಗಾಟು

Team Udayavani, Apr 5, 2021, 12:53 PM IST

ಗ್ರಾಮೀಣಕೂ ಗಾಂಜಾ ಗಾಟು

ಕುದೂರು: ಪಕ್ಕದ ಬೆಂಗಳೂರು ನಗರಕ್ಕೆ ಸಮೀತವಾಗಿದ್ದ ಗಾಂಜಾ ಮಾರಾಟ ಜಾಲಾ ಇದೀಗ ಮಾಗಡಿ ತಾಲೂಕಿಗೂ ವ್ಯಾಪ್ತಿಸಿದೆ. ಜಾಲವೊಂದು ಕುದೂರು ಸುತ್ತಮುತ್ತ ಪ್ರದೇಶದಲ್ಲಿ ಗಾಂಜಾ, ಅಫೀಮು ಯುವಜನರ ಕೈಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂಬ ಸುದ್ದಿ ಸಾರ್ವಜನಿಕ ವಲಯದಲ್ಲಿ ಹರಿ ದಾಡುತ್ತಿದೆ.

ಮಾಗಡಿ ಪಟ್ಟಣದಿಂದ ಕು ದೂರು ಇತರೆಡೆಗೆ ಗಾಂಜಾ, ಅಫೀಮು ಅನ್ನು ಜಾಲವೊಂದು ಸರಬರಾಜು ಮಾಡುತ್ತಿದೆ. ಸಣ್ಣ ಕವರ್‌ನಲ್ಲಿ ಗಾಂಜಾವನ್ನು ತುಂಬಿ ಅದನ್ನು250 ರೂ.ನಿಂದ 300 ರೂ.ಗೆ ಮಾರಾಟ ಮಾಡುತ್ತಿದೆ ಎಂಬ ಸುದ್ದಿ ಇದೆ. ಈ ಸಂಬಂಧ ಈಗಾಗಲೇ ಪೊಲೀಸರ ಗಮನಕ್ಕೆ ಬಂದಿದ್ದು, ಜಾಲವನ್ನು ಭೇದಿಸಬೇಕಿದೆ.

ಟೀ ಅಂಗಡಿಯಲ್ಲೂ ಮಾರಾಟ?: ಕುದೂರು ಮೂಲದ ಇಬ್ಬರು ಯುವಕರು ಮಾ.30ರಂದು ಮಾಗಡಿಗೆ ಗಾಂಜಾ ಖರೀದಿಸಲು ಬಂದು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು. ಇವರೇಗ್ರಾಮೀಣ ಪ್ರದೇಶಕ್ಕೂ ಗಾಂಜಾ ಸರಬರಾಜು ಮಾಡುತ್ತಿದ್ದರು ಎಂಬ ಅನುಮಾನವೂಮೂಡಿದೆ. ಕುದೂರಿಗೆ ಮಾಗಡಿಯಿಂದ ಗಾಂಜಾ ಸರಬರಾಜು ಮಾಡುವ ಏಜೆಂಟರಿದ್ದಾರೆ ಎನ್ನಲಾಗಿದೆ.

ಕೆಲವು ಏಜೆಂಟರುಗಳು ಕುದೂರಿನ ಬೀಡಾ, ಟೀ ಅಂಗಡಿಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರೆ, ಇನ್ನು ಕೆಲವರು ತಮ್ಮ ಲಿಂಕ್‌ನಲ್ಲಿರುವ ಯುವಕರಿಗೆ ಕರೆ ಮಾಡಿಮಾಗಡಿಗೆ ಕರೆಯಿಸಿಕೊಂಡು ನೇರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿ: ಮಾದಕ ವಸ್ತು ಗಳ ಬಳಕೆ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಯುವ ಸಮುದಾಯವನ್ನು ವ್ಯಸನದಿಂದ ಹೊರತರುವ ಸಲುವಾಗಿ ಗ್ರಾಮೀಣ ಜನರು ಪೊಲೀಸರೊಂದಿಗೆ ಕೈಜೋಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸುತ್ತಮುತ್ತ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುವ ಮಾಹಿತಿ ತಿಳಿದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಇದರಿಂದ ಕಾರ್ಯಾಚರಣೆಗೆ ಅನುಕೂಲವಾಗಲಿದೆ.

ಮಕ್ಕಳ ಮೇಲೆ ನಿಗಾ ಇರಲಿ: ಗಾಂಜಾ ನಶೆಗೆ ಯುವ ಸಮುದಾಯ ಆಕರ್ಷಿತರಾಗುತ್ತಿರುವು  ದಕ್ಕೆ ಪಾಲಕರು, ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಿಸದಿರುವುದು ಪ್ರಮುಖ ಕಾರಣ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳಚಲನವಲನ, ಯಾರೊಂದಿ ಗೆ ಸ್ನೇಹ ಬೆಳೆಸಿದ್ದಾರೆ ಎನ್ನುವ ಬಗ್ಗೆ ತಿಳಿದುಕೊಂಡಿರಬೇಕು. ಇಲ್ಲವಾದರೆ ಮಕ್ಕಳು ಕುಟುಂಬ ಕ್ಕೆ ಮಾತ್ರವಲ್ಲದೆ, ಸಮಾಜಕ್ಕೂ ಹೊರೆಯಾಗುವುದು ನಿಶ್ಚಿತ.

ಗ್ರಾಮೀಣ ಭಾಗಕ್ಕೂ ಹಬ್ಬಿದೆ ವ್ಯಸನ: ನಗರ ಪ್ರದೇಶಕ್ಕೆ ಸೀಮಿತ ಆಗಿದ್ದ ಗಾಂಜಾ ಸೇವನೆ ಇದೀಗ ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿದೆ.ವಸತಿರಹಿತ ಪ್ರದೇಶ, ಶಾಲಾ ಮೈದಾನಗಳುವ್ಯಸನಿಗಳು ಮತ್ತು ಪೂರೈಕೆದಾರರ ನೆಚ್ಚಿನ ತಾಣಗಳಾಗಿವೆ.

ಗ್ರಾಮೀಣ ಪ್ರದೇಶಕ್ಕೆ ಗಾಂಜಾ ಮಾರಾಟ ಮಾಡುವವರ ಬಗ್ಗೆಇಲಾಖೆಗೆ ಮಾಹಿತಿ ಇದೆ. ಸಿಬ್ಬಂದಿಈಗಾಗಲೇ ಕಾರ್ಯಪ್ರವೃತ್ತರಾಗಿ ದ್ದಾರೆ. ಕೆಲವರನ್ನು ಬಂಧಿಸಿದ್ದಾರೆ. ಸದ್ಯದಲ್ಲಿಯೇ ಉಳಿದವರನ್ನು ವಶಕ್ಕೆಪಡೆಯಲಾಗುವುದು.  ● ಎಸ್‌.ಗಿರೀಶ್‌, ಎಸ್ಪಿ.

ಗ್ರಾಮೀಣ ಪ್ರದೇಶಗಳಿಗೆ ಗಾಂಜಾ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ವ್ಯಸನಿಗಳನ್ನು ಹಿಡಿದು ವಿಚಾರಿಸಿ ಗಾಂಜಾ ಸಿಗುವ ಮೂಲ ಪತ್ತೆ ಹಚ್ಚಬೇಕು. ಯತಿರಾಜು, ತಾಪಂ ಮಾಜಿ ಅಧ್ಯಕ್ಷ.

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.