ಅನ್ನಭಾಗ್ಯ ಯೋಜನೆ ಬಿಜೆಪಿ ಕೊಡುಗೆ : ರೇಣು
Team Udayavani, Apr 5, 2021, 8:07 PM IST
ಹೊನ್ನಾಳಿ : ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ಬಿಜೆಪಿ ಸರ್ಕಾರದ ಕೊಡುಗೆ. ನಮ್ಮ ಯೋಜನೆಯ ಲಾಭ ಪಡೆದು ಮಾಜಿ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ತಮ್ಮ ಸರ್ಕಾರದ ಕೊಡುಗೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರ ವಿಧಾನಸಭಾ ಚುನಾವಣೆಗೂ ಪೂರ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಡಿ.ಎನ್. ಜೀವರಾಜ್ ಅವರು ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲು ಯೋಜನೆ ರೂಪಿಸಿದ್ದರು. ಆದರೆ 2013ರ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ನಾವು ರೂಪಿಸಿದ್ದ ಯೋಜನೆಯ ಕಡತಕ್ಕೆ ಸಹಿ ಮಾಡಿದ್ದರು ಅಷ್ಟೇ ಎಂದರು.
ಈ ಹಿಂದೆ ಏಳು ಕೆಜಿ ಪಡಿತರ ಅಕ್ಕಿ ವಿತರಿಸಲಾಗುತ್ತಿತ್ತು. ಈಗ ಐದು ಕೆಜಿಗೆ ಇಳಿಸಿರುವುದಕ್ಕೆ “ಯಡಿಯೂರಪ್ಪ ಏನ್ ಅವರಪ್ಪನ ಮನೆಯಿಂದ ಅಕ್ಕಿ ತಂದುಕೊಡ್ತಾರಾ’ ಎಂದು ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಯಾರೂ ಕೂಡ ಅಕ್ಕಿಯನ್ನು ಅವರ ಅಪ್ಪನ ಮನೆಯಿಂದ ತಂದು ಕೊಡುವುದಿಲ್ಲ.
ಅಕ್ಕಿ ಕೊಡುವುದು ಸರ್ಕಾರ. ಸಿದ್ದರಾಮಯ್ಯ “ಬಿಜೆಪಿ ಸರ್ಕಾರ ಜಿಪುಣ ಸರ್ಕಾರ’ ಎಂದು ಪದೇ ಪದೇ ಹೇಳುತ್ತಿದ್ದಾರೆ. ಒಂದು ಜವಾಬ್ದಾರಿಯುತ ಸರ್ಕಾರ ಜನರ ನಾಡಿಮಿತ ಅರಿತು ಜನಪ್ರಿಯ ಯೋಜನೆ ಜಾರಿಗೊಳಿಸುತ್ತದೆ. ಆ ಕೆಲಸವನ್ನು ಸಿಎಂ ಯಡಿಯೂರಪ್ಪ ಸಮರ್ಪಕವಾಗಿ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.