ಕೆರೆ ಒತ್ತುವರಿದಾರರ ವಿರುದ್ಧ ಸೂಕ್ತ ಕ್ರಮ
Team Udayavani, Apr 5, 2021, 8:14 PM IST
ಹಗರಿಬೊಮ್ಮನಹಳ್ಳಿ: ಕೆರೆಗಳು ರೈತರ ಜೀವನಾಡಿಗಳು ತಾಲೂಕಿನ ಯಾವುದೇ ಕೆರೆಗಳನ್ನು ಯಾರೇ ಒತ್ತುವರಿಮಾಡಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಶರಣಮ್ಮ ಎಚ್ಚರಿಕೆ ನೀಡಿದರು.
ತಾಲೂಕಿನ ಬೆಣಕಲ್ಲು ಗ್ರಾಪಂ ವ್ಯಾಪ್ತಿಯ ಮೂರು ಕೆರೆಗಳ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ದೂರಿನ ಹಿನ್ನೆಲೆಯಲ್ಲಿ ಇಒ ಹಾಲಸಿದ್ದಪ್ಪ ಪೂಜೇರಿ ಸೇರಿ ಇತರೆ ಅಧಿಕಾರಿಗಳ ತಂಡದೊಂದಿಗೆ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕೆರೆಗಳು ಅಂತರ್ಜಲ ಹೆಚ್ಚಿಸುವ ಜೊತೆಗೆ ಕುಡಿಯುವ ನೀರನ ಬವಣೆ ನೀಗಿಸುತ್ತವೆ. ಸಾರ್ವಜನಿಕರ ದನಕರುಗಳಿಗೆ ಕುಡಿಯುವ ನೀರಿನ ಅನುಕೂಲವಾಗುವ ಉದ್ದೇಶದಿಂದ ಕೆರೆಗಳನ್ನು ನಿರ್ಮಾಣ ಮಾಡಿರಲಾಗಿರುತ್ತದೆ ಎಂಬುದನ್ನು ಒತ್ತುವರಿದಾರರು ಅರ್ಥಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹಕ್ಕೆ ಕಂಟಕವಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ತಾಲೂಕಿನ ಎಲ್ಲ ಕೆರೆಗಳ ವಿಸ್ತೀರ್ಣ ಕುರಿತು ದಾಖಲೆಗಳನ್ನು ತೆಗೆದುಕೊಂಡು ಹದ್ದುಬಸ್ತು ಮಾಡಲಾಗುವುದು. ಸರ್ವೇ ಅಧಿ ಕಾರಿಗಳಿಂದ ಕೂಡಲೇ ಕೆರೆಗಳ ಮಾಹಿತಿ ಪಡೆದುಕೊಂಡು ಒತ್ತುವರಿದಾರರ ವಿರುದ್ಧ ಕ್ರಮಕೈಗೊಂಡು ಒತ್ತುವರಿ ಪ್ರದೇಶವನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು. ತಾಪಂ ಇಒ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಕೆರೆಗಳಲ್ಲಿ ಹೂಳೆತ್ತುವ ಕಾರ್ಯಕ್ರಮ ಹಮ್ಮಿಕೊಂಡು ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗುವುದು. ಓಡುವ ನೀರನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯ, ಕೆರೆ ಒತ್ತುವರಿ ಮಾಡುವವರು ಬೇಸಿಗೆಯ ಬವಣೆಯನ್ನು ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.
ನರೇಗಾ ಸಹಾಯಕ ನಿರ್ದೆಶಕ ಕೆ.ಎಸ್.ಮಲ್ಲನಗೌಡ್ರು, ಸರ್ವೇ ಅಧಿಕಾರಿ ಶಶಿಕಲಾ, ಗ್ರಾಮ ಲೆಕ್ಕಾಧಿ ಕಾರಿ ಗಣೇಶ್, ಬೆಣಕಲ್ಲು ಗ್ರಾ.ಪಂ.ಪಿಡಿಒ ಶ್ರೀಕಾಂತ ಗ್ರಾಮಸ್ಥರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.