ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಬೆಂಬಲಿಸಲು ಮನವಿ
Team Udayavani, Apr 5, 2021, 8:50 PM IST
ಚಿಕ್ಕಮಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಶಿವಾನಂದ ಸ್ವಾಮಿ ಸದಾ ಚಟುವಟಿಕೆಯಿಂದ ಕನ್ನಡ ಕೆಲಸದ ಜೊತೆಗೆ ಪತ್ರಿಕೋದ್ಯಮ, ರಾಜಕಾರಣ, ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು ಪರಿಷತ್ ಮತದಾರರು ಶಿವಾನಂದಸ್ವಾಮಿ ಅವರನ್ನು ಬೆಂಬಲಿಸುವಂತೆ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ತಿಳಿಸಿದರು.
ನಗರದ ಹಿರೇಮಗಳೂರು ಅಳಸಿಂಗ ಪೆರುಮಾಳ್ ವೇದಿಕೆಯಿಂದ ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನದ ಸ್ಪರ್ಧಾಕಾಂಕ್ಷಿ ಎಂ.ಸಿ.ಶಿವಾನಂದ ಸ್ವಾಮಿ ಅವರ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಈ ಕೈಪಿಡಿ ಕನ್ನಡಿಗರ ಕೈಸೇರಿ ಸೂಕ್ತ ತೀರ್ಮಾನವನ್ನು ಅವರೇ ಕೈಗೊಳ್ಳಲಿ ಎಂದ ಅವರು, ಶಿವಾನಂದಸ್ವಾಮಿ ಅವರು ಸದಾ ಚಟುವಟಿಕೆಯ ವ್ಯಕ್ತಿಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಕ್ರೀಡಾದೃಷ್ಟಿಯಿಂದ ತಗೆದುಕೊಳ್ಳಬೇಕು. ಜಿಲ್ಲೆಯ ಮತದಾರರನ್ನು ಭೇಟಿ ಮಾಡಿ, ಕನ್ನಡಸೇವೆ ಮತ್ತು ಮುಂದೆ ಮಾಡಬಹುದಾದ ಆಲೋಚನೆಗಳನ್ನು ಮತದಾರರಿಗೆ ತಿಳಿಸಿಕೊಡುವಂತೆ ಸಲಹೆ ನೀಡಿದರು.
ಐದು ವರ್ಷಗಳಿಂದ ಕನ್ನಡ ಸೇವೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ಅವರು ನಿಮ್ಮ ಅಧಿಕಾರ ಅವ ಧಿ ಮುಗಿದಿರಬಹುದು. ಆದರೆ, ನಿಮ್ಮ ಕನ್ನಡ ಸೇವೆಯ ಜವಾಬ್ದಾರಿಯಿಂದ ಹಿಂದೇ ಸರಿಯಬಾರದು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿ, ಶಿವಾನಂದಸ್ವಾಮಿ ಅವರು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ, ಜಿಲ್ಲಾ ಸಮಿತಿ ಕೋಶಾಧ್ಯಕ್ಷ ಮತ್ತು ಗೌರವ ಕಾರ್ಯದರ್ಶಿಯಾಗಿ ಸುವರ್ಣ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಎರಡು ದಶಕಗಳ ಕಾಲ ಪರಿಷತ್‌ನಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸಿ ನಿಷ್ಠೆಯಿಂದ ದುಡಿದಿದ್ದಾರೆ.
ಸು ದೀರ್ಘ ಸೇವೆ ನೀಡಿದವರನ್ನು ಮುಂದಿನ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ನ್ಯಾಯ ಸಮ್ಮತವಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕರು ಅವರನ್ನು ಬೆಂಬಲಿಸುತ್ತಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯರಾದ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ಕನ್ನಡದ ಕಣ್ಮಣಿ ಕಣ್ಣನ್ ಅವರು ಕಾಯಕ ನಿಷ್ಠರಿಗೆ ಜನ ಬೆಂಬಲ ಸದಾ ಇರುತ್ತದೆ ಎಂದಿದ್ದು ಕಾಯಕ ಜೀವಿ ಹಾಗೂ ನಿಷ್ಕಳಂಕ ಸಂಘಟನಾ ಚತುರ ಶಿವಾನಂದಸ್ವಾಮಿ ಅವರಿಗೆ ಜನ ಬೆಂಬಲ ಸಿಗಲಿದೆ ಎಂದರು. ಸಹಕಾರಿ ದುರೀಣರಾದ ಪದ್ಮಾತಿಮ್ಮೇಗೌಡ, ಪತ್ರಕರ್ತ ರಾಜು, ಅಳಸಿಂಗ ಪೆರುಮಾಳ್ ವೇದಿಕೆಯ ಅಧ್ಯಕ್ಷ ಎಂ.ಎನ್. ರಂಗನಾಥನ್ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಆಜೀವ ಸದಸ್ಯರಾದ ಕೆ.ಜಿ. ಶ್ರೀನಿವಾಸ್, ಹಿರೇಮಗಳೂರು ಪುಟ್ಟಸ್ವಾಮಿ, ಎ. ವಿರೂಪಾಕ್ಷಪ್ಪ, ಬಿ. ಅಮ್ಜದ್, ಕೆ.ಸುಭಾಷ್, ರಮೇಶ್, ಪರಿಸರ ವಿರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.