25ವರ್ಷಕ್ಕಿಂತ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆಗೆ ಅನುಮತಿ ಕೋರಿ ಪ್ರಧಾನಿಗೆ ‘ಮಹಾ’ ಸಿಎಂ ಪತ್ರ
Team Udayavani, Apr 5, 2021, 10:15 PM IST
ಮುಂಬೈ: 25 ವರ್ಷ ವಯಸ್ಸಿಗಿಂತ ಹೆಚ್ಚಿನವರಿಗೆ ಕೋವಿಡ್ ಲಸಿಕೆ ನೀಡಲು ಅನುಮತಿ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿರುವ ಹಿನ್ನೆಲೆ ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಠಾಕ್ರೆ, 25 ವರ್ಷ ವಯಸ್ಸು ಮೆಲ್ಪಟ್ಟವರಿಗೂ ಲಸಿಕೆ ನೀಡಲು ಅನುಮತಿ ನೀಡಿ ಎಂದು ಕೇಳಿಕೊಂಡಿದ್ದಾರೆ. ಇದೇ ವೇಳೆ 45 ವರ್ಷ ವಯೋಮಾನ ದಾಟಿದವವರಿಗೆಲ್ಲರಿಗೂ ಕೋವಿಡ್ ಲಸಿಕೆ ನೀಡಲು ತಾವು ಮಾಡಿದ ಮನವಿಗೆ ಸ್ಪಂದಿಸಿರುವ ಮೋದಿಗೆ ಉದ್ಧವ್ ಠಾಕ್ರೆ ಧನ್ಯವಾದ ತಿಳಿಸಿದ್ದಾರೆ.
ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ವಾರಾಂತ್ಯದ ಲಾಕ್‍ಡೌನ್ ಹಾಗೂ ರಾತ್ರಿ ಕರ್ಪ್ಯೂನಂತಹ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಕ್ಷೇತ್ರಗಳ ಮೇಲೆಯೂ ನಿರ್ಬಂಧ ಹೇರಿದ ಹಿನ್ನೆಲೆ ಇಂದು ರಾತ್ರಿ 8 ಗಂಟೆಯಿಂದ ಪ್ರಸಿದ್ಧ ಶಿರಡಿ ಸಾಯಿಬಾಬಾ ದೇವಾಲಯ ಕೂಡ ಬಂದ್ ಆಗಿದೆ. ಮುಂದಿನ ಆದೇಶದವರೆಗೆ ದೇವಾಲಯದ ಬಾಗಿಲು ಮುಚ್ಚಲಾಗುವುದು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ.
ಇನ್ನು ಭಾನುವಾರ ನಡೆದ ಸಭೆಯಲ್ಲಿ ತಿಳಿಸಿರುವಂತೆ ಇಂದು ಮಹಾರಾಷ್ಟ್ರ, ಪಂಜಾಬ್ ಹಾಗೂ ಛತ್ತೀಸಗರ್ ರಾಜ್ಯಗಳಿಗೆ 50 ಮಂದಿ ಉನ್ನತ ಮಟ್ಟದ ಸಾರ್ವಜನಿಕ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿವೆ. ಈ ತಂಡಗಳು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕುರಿತು ಅಧ್ಯಯನ ನಡೆಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.