ರಮೇಶ್ ಜಾರಕಿಹೊಳಿಗೆ ಕೋವಿಡ್ ಬಂದಿರುವುದು ಅನುಮಾನ: ವಕೀಲ ಜಗದೀಶ್
Team Udayavani, Apr 5, 2021, 9:55 PM IST
ಬೆಂಗಳೂರು: ರಮೇಶ್ ಜಾರಕಿಹೊಳಿಗೆ ಕೊರೊನಾ ಬಂದಿರುವ ಬಗ್ಗೆ ಅನುಮಾನವಿದೆ ಎಂದು ಯುವತಿ ಪರ ವಕೀಲ ಕೆ.ಎನ್. ಜಗದೀಶ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿ, ಭಾನುವಾರ ಇ-ಮೇಲ್ ಮೂಲಕ ಸಂತ್ರಸ್ತೆಯ ಪತ್ರ ನೀಡಿರುವ ದೂರಿನ ಪ್ರತಿಯನ್ನು ನೇರವಾಗಿ ಪೊಲೀಸ್ ಆಯುಕ್ತರಿಗೆ ನೀಡಲು ಬಂದಿದ್ದೇವೆ. ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ದೃಢವಾಗಿದೆ ಎಂಬುದು ಗೊತ್ತಾಗಿದೆ. ಅವರ ಆರೋಗ್ಯದ ಬಗ್ಗೆ ಕಾಳಜಿಯಿದೆ. ಅವರ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ, ಬೇಗ ಎಸ್‌ಐಟಿ ಕಡೆ ಕಳುಹಿಸಲಿ ಎಂದು ಕೊಲ್ಲಾಪುರ ದೆಲಿ ಹಾಗೂ ರೇಣುಕಾ ಯಲ್ಲಮ್ಮ ದೇವಿಯ ಬಳಿ ಪ್ರಾರ್ಥಿಸುತ್ತೇವೆ. ಆದರೆ, ಕೆಲವೊಂದು ಅನುಮಾನವಿದೆ. ಆರೋಪಿ ಆಸ್ಪತ್ರೆಯಲ್ಲೇ ಇಲ್ಲ. ಆರೋಪಿ ಕೊರೊನಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಎಂದು ನಮ್ಮ ಸ್ಥಳೀಯ ವಕೀಲರು ಮಾಹಿತಿ ಕೊಟ್ಟಿದ್ದಾರೆ. ಹೀಗಾಗಿ ಆರೋಪಿಗೆ ಕೊರೊನಾ ಬಂದಿರುವುದೇ ಅನುಮಾನವಿದೆ ಎಂದು ಜಗದೀಶ್ ಹೇಳಿದ್ದಾರೆ.
ಗೃಹ ಕಾರ್ಯದರ್ಶಿಗಳಿಗೆ ಪತ್ರ
ರಾಜ್ಯ ಸರ್ಕಾರದ ಪ್ರಕರಣದ ಎಸ್‌ಐಟಿ ಪರವಾಗಿ ವಾದ ಮಂಡಿಸಲು ಹಿರಿಯ ಸರ್ಕಾರಿ ಅಭಿಯೋಜಕರಾದ ಪಿ.ಪ್ರಸನ್ನಕುಮಾರ್ ಮತ್ತು ಕಿರಣ್ ಜವಳಿ ಅವರನ್ನು ನೇಮಿಸಿತ್ತು. ಅದಕ್ಕೆ ಸಿಡಿ ಪ್ರಕರಣದ ಸಂತ್ರಸ್ತೆ, ನನ್ನ ಸಮ್ಮತಿಯಿಲ್ಲದೆ ಈ ಪ್ರಕ್ರಿಯೆ ನಡೆಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ ಮಂಗಳವಾರ ಸಂತ್ರಸ್ತೆ ತನ್ನ ಪರ ವಕೀಲರ ಮೂಲಕ ಗೃಹ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮತ್ತೂಂದೆಡೆ ವಕೀಲ ಮಂಜುನಾಥ್ ಅವರನ್ನು ವಕೀಲರ ಪರಿಷತ್‌ನಿಂದ ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತೆ ಪರವಾದ ಮಂಡಿಸಲು ಹಿರಿಯ ವಕೀಲರನ್ನು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ :ಸಿ.ಡಿ. ಪ್ರಕರಣ ಸಿಬಿಐಗೆ ವಹಿಸಲು ಕೋರಿ ಅರ್ಜಿ: ಸರಕಾರ, ಎಸ್‌ಐಟಿಗೆ ಹೈಕೋರ್ಟ್ ನೋಟಿಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.