ಜೆಡಿಎಸ್‌ಗೆ ಮಾಜಿ ಶಾಸಕ ನರಸಿಂಹಸ್ವಾಮಿ?
Team Udayavani, Apr 6, 2021, 11:57 AM IST
ದೊಡ್ಡಬಳ್ಳಾಪುರ: ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಬಿಜೆಪಿ ತೊರೆಯುತ್ತಾರೆಂಬ ವದಂತಿಗಳ ಬೆನ್ನಲೇ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಆರ್.ಎಲ್.ಜಾಲಪ್ಪ ಅವರ ಪುತ್ರ ನರಸಿಂಹಸ್ವಾಮಿ, ಮೊದಲು ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅಪರೇಷನ್ ಕಮಲಕ್ಕೆ ಒಳಗಾಗಿ, ಜಾಲಪ್ಪ ಅವರ ವಿರೋಧದ ನಡುವೆಯೂ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿಆಯ್ಕೆಯಾಗಿ ಕೊಳಚೆ ನಿರ್ಮೂಲನೆ ಮಂಡಳಿಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಈಗಜೆಡಿಎಸ್ ಸೇರ್ಪಡೆ ಆಗುತ್ತಿರುವ ಕುರಿತು ಚರ್ಚೆಗಳು ನಡೆಯುತ್ತಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಜೆ.ನರಸಿಂಹಸ್ವಾಮಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿ ಕುರಿತಂತೆ ಚರ್ಚಿಸಲು ಕುಮಾರಸ್ವಾಮಿ ಅವರು ಆಹ್ವಾನಿಸಿದ್ದರು. ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ. ಆದರೆ, ಕ್ಷೇತ್ರದಲ್ಲಿನ ನಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತಿಳಿಸುವುದಾಗಿ ಹೇಳಿದ್ದೇನೆ. ಸದ್ಯಕ್ಕೆ ನಾನು ಬಿಜೆಪಿಯಲ್ಲೇ ಇದ್ದೇನೆ ಎಂದಿದ್ದಾರೆ.
ಕುಮಾರಸ್ವಾಮಿ ಅವರ ಭೇಟಿ ಸಂದರ್ಭದಲ್ಲಿ ಹಾಜರಿದ್ದ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ ಮಾಹಿತಿ ನೀಡಿ,ಜೆಡಿಎಸ್ ಪಕ್ಷ ಸೇರುವ ಕುರಿತಂತೆ ಈಗಾಗಲೇ ಮೊದಲ ಸುತ್ತಿನ ಮಾತುಕತೆ ಮುಗಿದಿವೆ. ಜೆ.ನರಸಿಂಹಸ್ವಾಮಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ನಮ್ಮ ಅಭಿಪ್ರಾಯವನ್ನು ಕುಮಾರಸ್ವಾಮಿ ಅವರು ಕೇಳಿದ್ದಾರೆ. ಪಕ್ಷ ಸಂಘಟನೆಗೆ ಯಾರು ಬಂದರೂ ನಾವು ಸ್ವಾಗತಿಸುತ್ತೇವೆ ಎಂದರು.
ಜೆ.ನರಸಿಂಹಸ್ವಾಮಿ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ವೇಳೆಮತದಾನದ ಹಿಂದಿನ ರಾತ್ರಿ ತಟಸ್ಥರಾಗಿ ಉಳಿದು ಆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಅಸಮಾಧಾನಕ್ಕೆ ಕಾರಣರಾಗಿದ್ದರು. ಇತ್ತೀಚೆಗೆ ತಾಲೂಕಿನಯಾವುದೇ ಬಿಜೆಪಿ ಕಾರ್ಯಕ್ರಮಗಳ ವೇದಿಕೆಯಲ್ಲೂನರಸಿಂಹಸ್ವಾಮಿ ಅವರು ಕಾಣಿಸಿಕೊಳ್ಳದೆ ಅಂತರ ಕಾಯ್ದುಕೊಂಡಿದ್ದರು.
ಜೆಡಿಎಸ್ ಮೂಲಗಳ ಪ್ರಕಾರ ಯುಗಾದಿ ನಂತರ ದೊಡ್ಡಬಳ್ಳಾಪುರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.