![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 6, 2021, 2:01 PM IST
ನವದೆಹಲಿ : ಕೋವಿಡ್ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು ಅನುಮತಿ ನೀಡುವಂತೆ ಪ್ರಧಾನ ಮಂತ್ರಿ ಮೋದಿಗೆ ಭಾರತೀಯ ವೈದ್ಯಕೀಯ ಸಂಘಟನೆ ಮನವಿ ಮಾಡಿದೆ.
ದೇಶಾದ್ಯಂತ ಕೋವಿಡ್-19 ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, 18 ದಾಟಿದ ವಯೋಮಾನದವರಿಗೂ ಲಸಿಕೆ ತೆಗೆದುಕೊಳ್ಳುವುದಕ್ಕೆ ಅನುಮತಿ ನೀಡಬೇಕೆಂದು ಐಎಂಎ ಪತ್ರದ ಮೂಲಕ ಮನವಿ ಮಾಡಿದೆ.
ಈಗಾಗಲೇ ದೇಶದಲ್ಲಿ ಲಸಿಕೆ ಅಭಿಯಾನ ಶುರುವಾಗಿದೆ. 45 ವರ್ಷಗಳ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದರ ನಡುವೆಯೂ ಕೋವಿಡ್ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ಮಟ್ಟಹಾಕುವ ಉದ್ದೇಶದಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆಯನ್ನು ತೆಗೆದುಕೊಳ್ಳುವುದಕ್ಕೆ ಅನುಮತಿ ನೀಡಬೇಕೆಂದು ಭಾರತೀಯ ವೈದ್ಯಕೀಯ ಸಂಘಟನೆ ತಿಳಿಸಿದೆ.
ಇದೇ ವೇಳೆ ಖಾಸಗಿ ಕ್ಷೇತ್ರದ ಕುಟುಂಬ ಕ್ಲಿನಿಕ್ ಗಳನ್ನೂ ಲಸಿಕೆ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು ಪ್ರಧಾನಿ ಮೋದಿ ಸೂಚನೆ ನೀಡಬೇಕೆಂದು ಐಎಂಎ ಸಲಹೆ ನೀಡಿದೆ. ಖಾಸಗಿ ವೈದ್ಯರು ಹಾಗೂ ಕ್ಲಿನಿಕ್‍ಗಳು ಲಸಿಕಾ ಅಭಿಯಾನದಲ್ಲಿ ಪಾಲ್ಗೊಳ್ಳುವುದರಿಂದ ಕೋವಿಡ್ ವಿರುದ್ಧದ ನಮ್ಮ ಹೋರಾಟಕ್ಕೆ ಸಹಕಾರಿಯಗಲಿದೆ ಎಂದು ಐಎಂಎ ತಿಳಿಸಿದೆ.
ಇನ್ನು ಸೋಮವಾರವಷ್ಟೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, 25 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲು ಅನುಮತಿ ಕೋರಿ ಮನವಿ ಮಾಡಿಕೊಂಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.