ವಿವಿಧ ಕ್ಷೇತ್ರಗಳ ಸಾಧಕ ಮಹಿಳೆಯರಿಗೆ ಸಮ್ಮಾನ
Team Udayavani, Apr 6, 2021, 7:39 PM IST
ಉತ್ತರ ಕರ್ನಾಟಕ ಬಳಗ ಕತಾರ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಾಧಕ ಮಹಿಳೆಯರ ಸಮ್ಮಾನ ಮತ್ತು ಮಾತುಕತೆ ಕಾರ್ಯಕ್ರಮ ಮಾ. 19ರಂದು ವರ್ಚುವಲ್ ಮೂಲಕ ನಡೆಯಿತು.
ಉತ್ತರ ಕರ್ನಾಟಕ ಬಳಗ ಕತಾರ್‌ನ ಅಧ್ಯಕ್ಷ ಶಶಿಧರ್ ಹೆಬ್ಟಾಳ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಧರ ಕುಲಕರ್ಣಿ ದಂಪತಿ ಪ್ರಾರ್ಥನೆ ಗೀತೆಯನ್ನು ಹಾಡಿದರು. ಪ್ರೀತಿ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬಂದಿ ಲೀಲಾ ಗಣೇಶ್ ಮತ್ತು ಸಂಗಡಿಗರಿಂದ ಜಾನಪದ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅನ್ನಪೂರ್ಣ ಮುತ್ತುರಾಜ್ ಅತಿಥಿಗಳನ್ನು ಪರಿಚಯಿಸಿ, ಸಾಧಕ ಮಹಿಳೆಯರನ್ನು ಅಭಿನಂದಿಸಿದರು.
ಮೈಸೂರಿನ ಡಿವೈಎಸ್‌ಪಿ ಪ್ರಿಯದರ್ಶಿನಿ ಸಾನಿಕೊಪ್ಪ, ಚಲನಚಿತ್ರ ನಟಿ ಅಭಿನಯಾ, ಆಸ್ಟ್ರೇಲಿಯಾದ ಸೈಂಟ್ ಮದರ್ ತೆರೇಸಾ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಆರ್. ವಿಜಯ ಸರಸ್ವತಿ, ಕತಾರ್‌ನ ಬ್ರಿಲಿಯೆಂಟ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲೆ ಆಶಾ ಶಿಜು, ಬೆಂಗಳೂರಿನ ಮಕ್ಕಳ ತಜ್ಞೆ ಆಶಾ ಬೆನಕಪ್ಪ, ಸಮಾಜ ಸೇವಕಿ, ಸೈಂಟ್ ಮದರ್ ತೆರೇಸಾ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯೆ ಜ್ಯೋತಿ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಇಟಲಿಯ ಜಾನ್ಹಾ ಕನ್ನಡ ಹಾಡನ್ನು ಹಾಡಿ ರಂಜಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕ ಮಹಿಳೆಯರಾದ ಹಿರಿಯ ಸಾಹಿತಿ ಇಟಲಿಯ ಜಯಮೂರ್ತಿ, ಕರ್ನಾಟಕದ ಪತ್ರಕರ್ತೆ ಶೋಭಾ ಎಂ.ಸಿ., ಧಾರವಾಡದ ವಿದುಷಿ ಶ್ರುತಿ ಕುಲಕರ್ಣಿ, ವಿಜಯಪುರ ಒಬವ್ವ ಪಡೆಯ ಜಯಂತಿ ನಾಯಕ್, ಬೆಂಗಳೂರಿನ ಕೋವಿಡ್ ವಾರಿಯರ್ ಜೆಸಿಂತಾ ಎಸ್. ಅವರನ್ನು ಸಮ್ಮಾನಿಸಲಾಯಿತು. ಲಕ್ಷ್ಮೀ ಲಿಂಗದಳ್ಳಿ ದುಬೈ ಮಾತನಾಡಿ ಶುಭಹಾರೈಸಿದರು.
ಅಧ್ಯಕ್ಷ ಶಶಿಧರ್ ಹೆಬ್ಟಾಳ್ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶ್ವ ಮಹಿಳೆಯರ ಸಂಗಮವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ
ಆರಂಭದಲ್ಲಿ ಸ್ವಾಗತ ಭಾಷಣ ಮಾಡಿದ ಪ್ರತೀಕ್ಷಾ ದಿವಾಕರ್ ಕೊನೆಗೆ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.