ನಗರಸಭೆ ಚುನಾವಣೆ: ನಾಳೆಯಿಂದ ನಾಮಪತ್ರ ಸ್ವೀಕಾರ
Team Udayavani, Apr 7, 2021, 12:36 PM IST
ರಾಮನಗರ: ಚನ್ನಪಟ್ಟಣ ಹಾಗೂ ರಾಮನಗರನಗರಸಭೆಗಳ ಚುನಾವಣಾ ಅಧಿಸೂಚನೆ ಏ.8 ರಂದು ಹೊರಡಿಸಲಿದ್ದು, ಚುನಾವಣಾಧಿಕಾರಿಗಳಾಗಿನೇಮಕವಾಗಿರುವ ಅಧಿಕಾರಿಗಳು ಆಯೋಗ ನೀಡಿರುವ ನಿಯಮಗಳನ್ನು ಅನುಸರಿಸಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಧಿಕಾರಿಗಳ ನಿರ್ಣಯವೇ ಅಂತಿಮವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳ ಪಾತ್ರ ಬಹಳ ಮಹತ್ವ ಹಾಗೂ ಜವಾಬ್ದಾರಿಯುತ ವಾಗಿರುತ್ತದೆ. ಇದೀಗ ಪಡೆಯುತ್ತಿರುವ ತರಬೇತಿ ಸದುಪಯೋಗಪಡಿಸಿಕೊಳ್ಳಿ. ಯಾವುದೇ ಸಂದೇಹವಿದ್ದಲ್ಲಿ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಸಿದ್ಧತೆ ಮಾಡಿಕೊಳ್ಳಿ: ಚುನಾವಣೆಗೆ ಸಂಬಂಧಿಸಿದಂತೆನಾಮಪತ್ರ ಸಲ್ಲಿಕೆ ಏ.8 ರಿಂದ ಪ್ರಾರಂಭವಾಗಲಿದ್ದು,ಹಿಂದಿನ ದಿನವೇ ಚುನಾವಣಾಧಿಕಾರಿಗಳು ತಾವುಕಾರ್ಯನಿರ್ವಹಿಸುವ ಕಚೇರಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಿ, ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿವಿಡಿಯೋಗ್ರಫಿ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು. ಚುನಾವಣೆಗೆ ಮುನ್ನ ಬೇಕಾದ ಸಿದ್ಧತೆಗಳ ಬಗ್ಗೆ ಅವರು ಸಲಹೆ, ಸೂಚನೆಗಳನ್ನು ನೀಡಿದರು.
ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಮಾತನಾಡಿ, 7 ಅಥವಾ 8 ವಾರ್ಡ್‌ಗಳಿಗೆ ಒಬ್ಬರು ಚುನಾವಣಾಧಿ ಕಾರಿಯನ್ನು ನೇಮಕ ಮಾಡಲಾಗಿದೆ. ನಾಮಪತ್ರಸ್ವೀಕರಿಸುವಾಗ ವಾರ್ಡ್‌ವಾರು ಕಡತ ತೆರೆದುನಿರ್ವಹಿಸಿ ಎಂದು ಹೇಳಿದರು. ಹನುಮಂತನಗರಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಪ್ರಭುಲಿಂಗಸ್ವಾಮಿಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಸಿದ್ದಗಲಿಂಗಸ್ವಾಮಿ ಚುನಾವಣಾಧಿಕಾರಿಗಳಿಗೆ ತರಬೇತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.